ಶಾಸಕ ಹರೀಶ್ ಪೂಂಜಾರನ್ನು ಬಂಧಿಸಿದರೆ ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ : ಬಿ ವೈ ವಿಜಯೇಂದ್ರ

Date:

ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ, ಕರ್ತವ್ಯನಿರತ ಪೊಲೀಸರಿಗೆ ಧಮ್ಕಿ ಹಾಕಿ, ಗೂಂಡಾ ವರ್ತನೆ ತೋರಿದ್ದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲೂ ಬಂಧನ ನಡೆಸುವ ಸಾಧ್ಯತೆ ಇದೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಶಾಸಕ ಹರೀಶ್ ಪೂಂಜಾರನ್ನು ಬಂಧಿಸುವ ದುಸ್ಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಪೊಲೀಸರ ವಿರುದ್ಧ ನಡೆಸಿದ್ದ ಪ್ರತಿಭಟನೆಯ ವೇಳೆ ಶಾಸಕ ಪೂಂಜಾ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿಯಲ್ಲ ಎಂದು ಪೂಂಜಾರಿಗೂ ಗೊತ್ತಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ಸಹಿಸಲು ಆಗುವುದಿಲ್ಲ. ಶಾಸಕರನ್ನು ಬಂಧಿಸುವ ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಪೊಲೀಸ್ ಇಲಾಖೆ ಹೊಣೆ ಆಗುತ್ತದೆ. ಪೊಲೀಸರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಹದೆಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ” ಎಂದು ಬಿ ವೈ ವಿಜಯೇಂದ್ರ ದೂರಿದ್ದಾರೆ.

“ಅಕ್ರಮ ಕಲ್ಲುಕ್ವಾರಿ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಸರ್ಕಾರ ಕೈಬಿಡಬೇಕು. ಗೃಹ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಜೊತೆ ಮಾತನಾಡಿ, ಇಲಾಖೆಗೆ ಸೂಚನೆ ಕೊಡಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.

ಇದನ್ನು ಓದಿದ್ದೀರಾ? ಪೊಲೀಸರಿಗೆ ಧಮ್ಕಿ ಹಾಕಿ ಗೂಂಡಾ ವರ್ತನೆ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ

“ರಾಜಕಾರಣಿಗಳ ಒತ್ತಡಕ್ಕೆ ಮಣಿದು ಪೊಲೀಸರು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ ಮತ್ತು ಕೊಡಗಿನಲ್ಲಿ ತಮ್ಮ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ವಿನಾಕಾರಣ ಬಿಜೆಪಿ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದನ್ನೆಲ್ಲ ನಾವು ಸಹಿಸಿಕೊಳ್ಳುವುದು ಸಾಧ್ಯವಿಲ್ಲ. ಗೃಹ ಸಚಿವರು ತಮ್ಮ ಅಧಿಕಾರಿಗಳೊಂದಿಗೆ ಮಾತನಾಡಿ ಇದನ್ನು ನಿಲ್ಲಿಸಬೇಕು” ಎಂದು ಬಿ ವೈ ವಿಜಯೇಂದ್ರ ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...