ಹಾಸನದಲ್ಲಿ ಮೈತ್ರಿ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಗೆದ್ದರೆ ಅನರ್ಹ: ವಿಪಕ್ಷ ನಾಯಕ ಆರ್ ಅಶೋಕ್

Date:

“ಎಚ್‌.ಡಿ ರೇವಣ್ಣ ಅವರನ್ನು ಬಂಧಿಸಿರುವ ಪೊಲೀಸರ ಕ್ರಮ ಸರಿಯಾಗಿದೆ. ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಾರಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಜ್ವಲ್ ರೇವಣ್ಣ ಅವರು ಒಂದು ವೇಳೆ ಗೆದ್ದರೆ ಖಂಡಿತ ಅನರ್ಹ ಮಾಡುತ್ತೇವೆ” ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಮುಂದುವರಿಸುವ ಬಗ್ಗೆ ಕೇಂದ್ರ ನಾಯಕರ ಜೊತೆಗೆ ಚರ್ಚೆ ನಡೆಯುತ್ತಿದೆ. 2-3 ದಿನಗಳಲ್ಲಿ ಈ ಬಗ್ಗೆ ಗೊತ್ತಾಗುತ್ತದೆ. ಮೈತ್ರಿ ದೆಹಲಿ ಮಟ್ಟದಲ್ಲಿ ಆಗಿರುವುದು. ಕೇಂದ್ರೀಯ ಸಂಸದೀಯ ಮಂಡಳಿ ಈ ಬಗ್ಗೆ ತೀರ್ಮಾನ ಮಾಡುತ್ತದೆ. ಈ ಬಗ್ಗೆ ಕುಮಾರಸ್ವಾಮಿ ಮತ್ತು ಅಮಿತ್ ಶಾ‌ ಅವರು ಏನು ಮಾತನಾಡಿದ್ದಾರೆ ಎನ್ನುವುದು ಗೊತ್ತಿಲ್ಲ” ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

“2019ರ ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣರನ್ನು ಪಕ್ಕದಲ್ಲೇ ಕೂರಿಸಿಕೊಂಡು ಪ್ರಚಾರ ಮಾಡಿದ್ದರು. ಹಾಸನ ಅಭಿವೃದ್ಧಿಗೆ ಪ್ರಜ್ವಲ್ ರೇವಣ್ಣರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದರು. ಯಂಗ್ ಲೀಡರ್, ವಿಷನ್ ಲೀಡರ್ ಎಂದು ಸಿದ್ದರಾಮಯ್ಯ ಆ ಸಂದರ್ಭದಲ್ಲಿ ಹೇಳಿದ್ದರು” ಎಂದು ಹೇಳುತ್ತಾ 2019ರಲ್ಲಿ ಸಿದ್ದರಾಮಯ್ಯ, ಹೆಚ್‌.ಡಿ ದೇವೇಗೌಡರು ಪ್ರಜ್ವಲ್ ಪರ ಜಂಟಿಯಾಗಿ ಪ್ರಚಾರ ಮಾಡಿದ್ದ ವಿಡಿಯೋವನ್ನು ಆರ್‌. ಅಶೋಕ್ ಅವರು ಮಾಧ್ಯಮದವರಿಗೆ ತೋರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣದ ಸಂತ್ರಸ್ತೆಯರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಆರ್ಥಿಕ ನೆರವು

“ಜೆಡಿಎಸ್ ಈಗಾಗಲೇ ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಅಮಾನತು ಮಾಡಿದೆ. ಪ್ರಜ್ವಲ್ ಊರಲ್ಲಿದ್ದಾಗ ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಪೊಲೀಸರು ಪತ್ರ ಬರೆಯಬೇಕಿತ್ತು. ಕೇಂದ್ರಕ್ಕೆ ಪತ್ರ ಕೂಡ ಬರೆದಿಲ್ಲ. ಇನ್ನು ಪಾತಾಳದಿಂದ ಹೇಗೆ ಹಿಡಿದು ತರ್ತಾರೆ. ತಪ್ಪು ಯಾರದು? ಯಾವುದೇ ಸರ್ಕಾರ ಇದ್ದರೂ ರಾಜತಾಂತ್ರಿಕ ಪಾಸ್‌ಪೋರ್ಟ್ ಬರುತ್ತದೆ. ಪ್ರಧಾನಿ ನರೇಂದ್ರ ಮೋದಿಯವರು ಪಾಸ್ ಪೋರ್ಟ್ ನೀಡಿಲ್ಲ” ಎಂದು ಆರ್ ಅಶೋಕ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...