ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದಿದ್ದರೇ ತಕ್ಷಣ ಮಧ್ಯ ಪ್ರವೇಶಿಸಲಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

Date:

  • ‘ರಾಹುಲ್ ಗಾಂಧಿ ಮಧ್ಯಪ್ರವೇಶಿಸದಿದ್ದರೆ ಕರ್ನಾಟಕ ಎಟಿಎಂ ಅಂತ ಸಾಬೀತು’
  • ‘ಈ ಸರ್ಕಾರದಲ್ಲಿ 65% ಕಮಿಷನ್, ಗುತ್ತಿಗೆದಾರರಿಂದ ರಾಹುಲ್‌ಗೆ ಮಾಹಿತಿ’

ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಈ ಸರ್ಕಾರದಲ್ಲಿ 65% ಕಮಿಷನ್ ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ‌ನಾಯಕ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ರಾಹುಲ್ ಗಾಂಧಿ ಭ್ರಷ್ಟಾಚಾರ ಸಹಿಸದೇ‌ ಇದ್ದರೇ ತಕ್ಷಣ ಮಧ್ಯ ಪ್ರವೇಶ ಮಾಡಿ, ಗುತ್ತಿಗೆದಾರರ ಬಿಲ್ ಬಿಡುಗಡೆಗೆ ಸೂಚಿಸಬೇಕು. ಇಲ್ಲದಿದ್ದರೆ ಕರ್ನಾಟಕ ಕಾಂಗ್ರೆಸ್‌ನ ಎಟಿಎಂ ಎನ್ನುವುದು ಸಾಬೀತಾದಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಆರ್ ಟಿ ನಗರದ ತಮ್ಮ ನಿವಾಸದಲ್ಲಿ ಗುರುವಾರ ತಮ್ಮನ್ನು ಭೇಟಿ ಮಾಡಿದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಮನವಿ ಸ್ವೀಕರಿಸಿ, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯಲ್ಲಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ಭೇಟಿ ಮಾಡಿದ್ದಾರೆ. ಅವರು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡಿಸಲು ಸರ್ಕಾರವನ್ನು ಆಗ್ರಹಿಸಲು ಮನವಿ‌ ಮಾಡಿದ್ದಾರೆ” ಎಂದರು.

“ನಾನು ಸಿಎಂ ಇದ್ದಾಗ ಬಿಲ್ ಪಾವತಿಗೆ ಆನ್ಲೈನ್ ಮಾಡಿ ಸ್ಟ್ರೀಮ್ ಲೈನ್ ಮಾಡಿದ್ದೆ‌. ಹಿರಿತನದ ಆಧಾರದ ಮೇಲೆ ಹಣ ಬಿಡುಗಡೆ ಮಾಡಲಾಗುತ್ತಿತ್ತು.‌ ಇದರಿಂದ ಅವರ ಬಾಕಿ ಕೂಡ ಕಡಿಮೆ ಉಳಿದಿತ್ತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಎಂ ಮೌನ, ಸಮ್ಮತಿ ಲಕ್ಷಣ

“ಗುತ್ತಿಗೆದಾರರು ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಕ್ಕೆ ಈಗ ಲಂಚ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರು ಆರೋಪಿಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಹಿಂದಿನ ಸರ್ಕಾರದ ಅವಧಿಯ ಕಾಮಗಾರಿಗಳಿಗೆ ಲಂಚ ಕೇಳುತ್ತಿರುವುದು ಸರ್ವವಿಧಿತವಾಗಿದೆ. ಮುಖ್ಯಮಂತ್ರಿಗಳು ಇದರ ಬಗ್ಗೆ ಮೌನ ವಹಿಸಿದ್ದಾರೆ. ಇದು ಅವರ ಸಮ್ಮತಿ ಅಂತ ಸೂಚಿಸುತ್ತದೆ” ಎಂದು ಆರೋಪಿಸಿದರು‌.

“ವರ್ಗಾವಣೆಗೆ ಹಣ ಪಡೆದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ‌. ಆದರೆ, ಅವರ ಕಚೇರಿಯಿಂದ ವರ್ಗಾವಣೆ ಆಗಿರುವ ಆದೇಶಗಳು ಯಾಕೆ ಬದಲಾವಣೆ ಆಗುತ್ತಿವೆ? ನಮ್ಮ ಅವಧಿಯಲ್ಲಿ ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು ಮೂವರು ಜನರ ಸಮಿತಿ ರಚನೆ ಮಾಡಿದ್ದೆವು. ಆ ಆದೇಶಗಳನ್ನು ಈಗ ಪಾಲನೆ ಮಾಡುತ್ತಿಲ್ಲ” ಎಂದರು.

“ಯಾರು ಕಳಪೆ ಕಾಮಗಾರಿ ಮಾಡಿದ್ದಾರೆ ಅದರ ಬಗ್ಗೆ ತನಿಖೆ ನಡೆಸಲಿ, ಪ್ರಾಮಾಣಿಕವಾಗಿ ಕೆಲಸ ಮಾಡಿದವರ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಅಂತ ಕರಿಯೋದು ಸಾಬೀತಾದಂತೆ ಆಗುತ್ತದೆ‌. ರಾಹುಲ್ ಗಾಂಧಿ ಮಧ್ಯ ಪ್ರವೇಶ ಮಾಡಿ 24 ಗಂಟೆಯಲ್ಲಿ ಸಮಸ್ಯೆ ಬಗೆ ಹರಿಸಬೇಕು” ಎಂದು ಆಗ್ರಹಿಸಿದರು.

“ಗುತ್ತಿಗೆದಾರರು ಕೆಲಸ ನಿಲ್ಲಿಸಿದರೆ ಬ್ರ್ಯಾಂಡ್ ಬೆಂಗಳೂರು ಸ್ಥಗಿತ ಆಗುತ್ತದೆ. ಕಮಿಷನ್ ಎಷ್ಟು ಪಡೆಯಬೇಕು ಎನ್ನುವುದು ಸ್ಯಾಂಗ್ರಿಲಾ ಹೋಟೆಲ್ ನಲ್ಲಿ ಮಾತುಕತೆ ನಡೆಯುತ್ತಿದೆಯಂತೆ. ಎಷ್ಟಕ್ಕೆ ಆಗುತ್ತದೆಯೋ ನೊಡೊಣ ಲಂಚ ಪಡೆಯುವುದು ಕೊಡುವುದು ಎರಡೂ ಅಪರಾಧ. ಗುತ್ತಿಗೆದಾರರು ಎಷ್ಟು ಪರ್ಸೆಂಟೇಜಿಗೆ ಒಪ್ಪುತ್ತಾರೊ, ಭ್ರಷ್ಟಾಚಾರದ ಭಾಗವಾಗುತ್ತಾರೊ, ಇಲ್ಲವೋ ನೋಡೊಣ” ಎಂದು ಹೇಳಿದರು.

ಡಿಕೆಶಿ ಸೂಪರ್ ಸಿಎಂ

“ರಾಜ್ಯದಲ್ಲಿ ಡಿ. ಕೆ ಶಿವಕುಮಾರ್ ಸೂಪರ್ ಸಿಎಂ ಆಗಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ಟ್ರಾನ್ಸಫರ್ ತನ್ನ ಗಮನಕ್ಕೆ ತಂದು ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ಡಿ. ಕೆ.ಶಿವಕುಮಾರ್ ಸೂಪರ್ ಸಿಎಂ. ರಾಜ್ಯದಲ್ಲಿ ಸಿಎಂ ಮತ್ತು ಸೂಪರ್ ಸಿಎಂ ಇಬ್ಬರು ಇದ್ದಾರೆ” ಎಂದು ವ್ಯಂಗ್ಯವಾಡಿದರು.

ಫೇಕ್ ಸರ್ಕಾರ

“ಸರ್ಕಾರದ ವಿರುದ್ದ ಬರುವ ಎಲ್ಲ ಪತ್ರಗಳೂ ಫೇಕ್ ಎಂದು ಸರ್ಕಾರ ಅಲ್ಲಗಳೆಯುತ್ತಿದೆ. ಅವರದೇ ಪಕ್ಷದ ಶಾಸಕರು ಬರೆದ ಪತ್ರವನ್ನೂ ಫೇಕ್ ಎನ್ನುತ್ತಾರೆ. ಈ ಸರ್ಕಾರವೇ ಫೇಕ್” ಎಂದು ಕಿಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...