ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ: ಆರ್‌ ಅಶೋಕ್‌

Date:

ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್‌ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪೊಲೀಸ್‌ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್‌ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ” ಎಂದು ಪ್ರಶ್ನಿಸಿದರು.

“ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಜ್ವಲ್‌ ರೇವಣ್ಣ ನಿಮ್ಮ ಎಂಪಿ

“ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್‌ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್‌ ತೀರ್ಮಾನಿಸುತ್ತದೆ. ಪ್ರಜ್ವಲ್‌ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು” ಎಂದರು.

“ಪ್ರಜ್ವಲ್‌ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ” ಎಂದು ಹೇಳಿದರು.

ಹಾಲಿನ ಪ್ರೋತ್ಸಾಹಧನ ನೀಡಿಲ್ಲ

“ಕಳೆದ ಎಂಟು ತಿಂಗಳಿಂದ ರೈತರಿಗೆ ಸರ್ಕಾರ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಎಂಟು ತಿಂಗಳಿಂದ ಹಾಲಿನ 5 ರೂ. ಪ್ರೋತ್ಸಾಹಧನ ನೀಡಿಲ್ಲ. ಸುಮಾರು 700 ಕೋಟಿ ರೂಪಾಯಿಯನ್ನು ಬಾಕಿ ಉಳಿಸಿಕೊಂಡಿದ್ದಾರೆ” ಎಂದು ಕಿಡಿಕಾರಿದರು.

“ಖಜಾನೆ ಖಾಲಿ ಮಾಡಿಕೊಂಡ ಬಳಿಕ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ತಿಳಿಸಲು ಸವಾಲು ಹಾಕುತ್ತೇನೆ. ಕಾಂಗ್ರೆಸ್‌ನ ಯೋಗ್ಯತೆಗೆ ಕರ್ನಾಟಕಕ್ಕೆ ಒಂದು ಕೋಟಿ ರೂ. ಕೂಡ ಬರ ಪರಿಹಾರ ನೀಡಿಲ್ಲ” ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...