ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ

Date:

  • ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ
  • ವಿಧಾನಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತ ಬೊಮ್ಮಾಯಿ

ಕಾಂಗ್ರೆಸ್ ಗೆ ಅಧಿಕಾರ ನಡೆಸುವ ಪಾತ್ರವನ್ನು ಜನರು ನೀಡಿದ್ದಾರೆ. ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಕೆಲಸ ಮಾಡುತ್ತೇವೆ. ಜನ ವಿರೋಧಿ ನೀತಿ, ಯೋಜನೆಗಳನ್ನ ಜಾರಿಗೆ ಮುಂದಾದರೆ, ನಾವು ಸುಮ್ಮನಿರುವುದಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು(ಜೂನ್ 5) ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಸೋಲಿನ ಪರಾಮರ್ಶೆ ಮಾಡಿಕೊಂಡು, ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದರು.

ಚುನಾವಣೆಯ ವೇಳೆ ನಾವು ತಡವಾಗಿ ಸೀಟ್ ಅನೌನ್ಸ್ ಮಾಡಿದೆವು. ಹೊಸಬರಿಗೆ ಟಿಕೆಟ್ ಕೊಟ್ಟಿದ್ದು ಸಂಯೋಜನೆ ಆಗಲಿಲ್ಲ. ಸ್ಥಳೀಯವಾಗಿಯೂ ಸಹ ಕೆಲವು ತೊಂದರೆ ಆಗಿದೆ ಎನ್ನುವುದು ನಮ್ಮಗಳ ಅರಿವಿಗೆ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ವಿರುದ್ಧ ಕಿಡಿ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಹಿಂದಿನ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಬಾರದು. ಹಾಗೆಯೇ ವಿವೇಕ ಯೋಜನೆ ಇವರು ನಿಲ್ಲಿಸಬಾರದು. ಅದು ಬಿಜೆಪಿಯ ಯೋಜನೆ ಅಲ್ಲ. ಇದಕ್ಕಾಗಿ ಈಗಾಗಲೇ ಎಂಟು ಸಾವಿರ ಕೊಠಡಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಸಿದ್ದರಾಮಯ್ಯ ಏನು ನಿರ್ಣಯ ಮಾಡುತ್ತಾರೆ ನೋಡೋಣ ಎಂದರು.

ಗೋಹತ್ಯೆ ಕಾಯ್ದು ಜಾರಿ ವಿರೋಧ ಕಾಂಗ್ರೆಸ್‌ಗೆ ಆಪತ್ತು

ಗೋಹತ್ಯೆ ನಿಷೇಧ ಕಾಯ್ದೆ ಮರುಪರಿಶೀಲನೆ ಬಗೆಗಿನ ಕಾಂಗ್ರೆಸ್ ನಾಯಕರ ಮಾತಿಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಗೋವಿನ ಪವಿತ್ರ ಸಂಬಂಧ ಲೆಕ್ಕಿಸದೇ ಸಚಿವರು ಮಾತನಾಡಿದ್ದಾರೆ. ಅದು ಖಂಡನೀಯ. ನಾವು ತಂದ ಕಾನೂನಿನಲ್ಲಿ ಗೋಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವುದು ಇದೆ. ಗೋಹತ್ಯೆ ನಿಷೇಧ ಕಾಯ್ದೆ 1960 ರಲ್ಲೇ ಬಂದಿರುವಂಥದ್ದು, ಹೀಗಾಗಿ ಅವರೇನು ತಿದ್ದುಪಡಿ ತರುತ್ತಾರೋ ತರಲಿ, ನೋಡೋಣ. ಗೋಹತ್ಯೆ ನಿಷೇಧ ಕಾಯ್ದೆ ಕಾನೂನು ಮುಟ್ಟಿದರೆ ಕಾಂಗ್ರೆಸ್‌ಗೆ ಆಪತ್ತು ಕಾದಂತೆಯೇ ಎಂದರು.

ಕಾಂಗ್ರೆಸ್‌ಗೆ ಅಧಿಕಾರದ ಅಮುಲು

ಗೋಹತ್ಯೆ ನಿಷೇಧ, ಪಠ್ಯ ಪುಸ್ತಕ ಪರಿಷ್ಕರಣೆ, ಸರ್ಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂಬ ಕೆಲ ಸಚಿವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಿಎಂ, ಈ ಸರ್ಕಾರಕ್ಕೆ ಅಧಿಕಾರದ ಅಮುಲು ಏರಿದೆ.

ಕೆಲ ಸಚಿವರ ಹೇಳಿಕೆ ನೋಡಿದರೆ ಇವರು ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ. ನಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿಯನ್ನು ಹತ್ತಿಕ್ಕುವ ಪ್ರವೃತ್ತಿಯಲ್ಲಿ ಮಾತನಾಡುತ್ತಿದ್ದಾರೆ. ಅತಿ ಶೀಘ್ರದಲ್ಲಿ ಕರ್ನಾಟಕದಲ್ಲಿ ಎಮರ್ಜೆನ್ಸಿ ಬರುತ್ತದೆಯೇನೋ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ?:ಜನರ ಸಮಸ್ಯೆಗೆ ಅಧಿಕಾರಿಗಳಿಂದ ಉಡಾಫೆ ಸಲ್ಲದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಅಧಿಕಾರ ದುರುಪಯೋಗ ಮಾಡಿಕೊಳ್ಳಲು ನಿಮಗೆ ರಾಜ್ಯದ ಜನರು ಅಧಿಕಾರ ಕೊಟ್ಟಿಲ್ಲ. ನಾವು ವಿರೋಧ ಪಕ್ಷವಾಗಿ ಸುಮ್ಮನೇ ಕೂರುವುದಿಲ್ಲ. ಯಾರು ಯಾರನ್ನು ಜೈಲಿಗೆ ಹಾಕುತ್ತಿರೋ ಹಾಕಿ. ನಿಮ್ಮ ನೀತಿ, ವರ್ತನೆಗಳ ವಿರುದ್ಧ ಜನರು ತಿರುಗಿ ಬಿದ್ದರೆ ನಿಮಗೆ ಜೈಲುಗಳು ಸಾಕಾಗುವುದಿಲ್ಲ. ತಾಕತ್ತಿನಿಂದ ಮಣಿಸುತ್ತೇವೆಂದರೆ, ನಮ್ಮದೇನು ಇಸ್ಲಾಂ ರಾಷ್ಟ್ರವಲ್ಲ. ಎಮರ್ಜೆನ್ಸಿ ಹೇರಲು ಪ್ರಜಾಪ್ರಭುತ್ವದಲ್ಲಿ ಜನತೆ ಕೈಯಲ್ಲಿ ದೊಡ್ಡ ಶಕ್ತಿಯಿದೆ. ಖಂಡಿತವಾಗಿ ನಾವು ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡ ಬೊಮ್ಮಾಯಿ, ನಾಯಕನ ಆಯ್ಕೆಯನ್ನು ಖಂಡಿತವಾಗಿ ಅತಿ ಶೀಘ್ರವೇ ಮಾಡುತ್ತೇವೆ. ಈ ಅಧಿವೇಶನದೊಳಗೆ ಪ್ರತಿಪಕ್ಷ ನಾಯಕನ ಆಯ್ಕೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...