ಭ್ರಷ್ಟರನ್ನೇ ನಾಯಕರನ್ನಾಗಿ ಮಾಡಿದರೆ ಪ್ರಾಮಾಣಿಕರು ಹೇಗೆ ಇರಲು‌ ಸಾಧ್ಯ: ಯತ್ನಾಳ ಪ್ರಶ್ನೆ

Date:

  • ಯಡಿಯೂರಪ್ಪ, ವಿಜಯೇಂದ್ರ, ಯತ್ನಾಳ ಯಾರೇ ಭ್ರಷ್ಟಾಚಾರ ಮಾಡಿದ್ರೂ ತಪ್ಪು
  • ಉಮೇಶ್ ಕಂಡಕ್ಟರ್ ಯಾರು ಅಂತ ಗೊತ್ತಿಲ್ವಾ? 2 ನೋಟ್ ಕೌಂಟಿಂಗ್ ಯಂತ್ರ ಸಿಕ್ಕಿದೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಪತ್ನಿಯ ಸಹೋದರನ ಮೇಲೆ ಲೋಕಾಯುಕ್ತ ದಾಳಿ ಮಾಡಿರುವ ಬಗ್ಗೆ ಬಸನಗೌಡ ಪಾಟೀಲ ಯತ್ನಾಳ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ, ವಿಜಯೇಂದ್ರ, ಯತ್ನಾಳ ಯಾರೇ ಭ್ರಷ್ಟಾಚಾರ ಮಾಡಿದ್ರೂ ತಪ್ಪು ತಪ್ಪೇ. ವಿಜಯೇಂದ್ರ ಹೆಸರನ್ನು ನನ್ನ ಬಾಯಲ್ಲಿ ಯಾಕೆ ಹೇಳಿಸುವ ಪ್ರಯತ್ನ ಮಾಡ್ತೀರಿ?” ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

“ಭ್ರಷ್ಟಾಚಾರವನ್ನು ಯಾವುದೇ ಪಕ್ಷದವರು ಮಾಡಿದರೂ ಕ್ರಮ ಆಗಬೇಕು. ಭ್ರಷ್ಟಾಚಾರ ಮಾಡಿದವರನ್ನೇ ನಾಯಕರನ್ನಾಗಿ ಮಾಡಿದರೆ ಪ್ರಾಮಾಣಿಕರು ಹೇಗೆ ಇರಲು‌ ಸಾಧ್ಯ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಮೇಶ್ ಕಂಡಕ್ಟರ್ ಯಾರು ಅಂತ ನಮಗೆ ಗೊತ್ತಿಲ್ವಾ? ಅವರ ಮನೆಯಲ್ಲಿ ಎರಡು ನೋಟ್ ಕೌಂಟಿಂಗ್ ಯಂತ್ರ ಸಿಕ್ಕಿದ್ದು ಗೊತ್ತಿಲ್ವಾ? ಅವನ ಬಳಿ ಸಾವಿರಾರು ಕೋಟಿ ಹೇಗೆ ಬಂತು? ಎರಡು ನೋಟು ಎಣಿಕೆ ಯಂತ್ರ
ಏಕಿತ್ತು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಕರ್ನಾಟಕವನ್ನು ಲೂಟಿ ಮಾಡಿ ಸಿಂಗಾಪುರ, ಮಾರಿಶಸ್ ನಲ್ಲಿ ಹೂಡಿಕೆ ಮಾಡಿದ್ದಾರೆ. ಅದರ ಬಗ್ಗೆ ತನಿಖೆ ಆಗಬೇಕು. ಅವರನ್ನು ಜೈಲಿಗೆ ಹಾಕಬೇಕು. ಯಡಿಯೂರಪ್ಪ ಅಥವಾ ವಿಜಯೇಂದ್ರ ಎಂದು ಕೇಳಬೇಡಿ. ಸನ್ಮಾನ್ಯ ಡಿಕೆ ಶಿವಕುಮಾರ್ ಭ್ರಷ್ಟ ಇದ್ದರೂ ಭ್ರಷ್ಟರೇ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸಿನ ಚಳಿ ಬಿಡಿಸಲಿದೆಯೇ ಬಿಜೆಪಿ?

ವೀರಶೈವ ಮಹಾಸಭಾ ಕಾಂಗ್ರೆಸ್ ನವರದ್ದಾಗಿದೆ. ಅಲ್ಲಿರೋರು ಕಾಂಗ್ರೆಸ್ ನಲ್ಲಿರುವವರೇ, ಅದು ಸಮುದಾಯದ ಪರವಾಗಿ ಉಳಿದಿಲ್ಲ. ನಾವು ಸಮುದಾಯಕ್ಕೆ ಮೀಸಲಾತಿ ಕೊಡಿಸಿದ್ದೆವು, ಹೋರಾಟವನ್ನು ಮಾಡಿ ಮೀಸಲಾತಿ ಕೊಡಿಸಿದ್ದೆವು, ಇವರು ಹೋರಾಟ ಮಾಡಿ ಕೊಡಿಸಲಿ ನೋಡೋಣ” ಎಂದು ಸವಾಲು ಹಾಕಿದರು.

ಅಲ್ಪಸಂಖ್ಯಾತರಿಗೆ ಅನುದಾನ ಬಿಡುಗಡೆ ಮಾಡುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, “ಪಾಕಿಸ್ತಾನದವರ ಸರ್ಕಾರ ಬಂದಂತಾಗಿದೆ, ಇಂತಹ ಸರ್ಕಾರ, ಇದೇ ಉದ್ಧಟತನ ಮುಂದುವರಿಸಿದರೆ ಅತೀ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಲಿದೆ” ಎಂದರು.

”ಪೊಲೀಸರು ಕಾಂಗ್ರೆಸ್ ನವರ ಕೈಗೊಂಬೆಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ್ರೆ ಕರ್ನಾಟಕ ಪಾಕಿಸ್ತಾನ ಆಗುತ್ತದೆ. ಇದುವರೆಗೆ ತಪ್ಪಿತಸ್ಥರನ್ನ ಬಂಧಿಸಿಲ್ಲ. ದೆಹಲಿಯಲ್ಲೊಬ್ರು ಮೇಡಮ್, ಬೆಳಗಾವಿಯಲ್ಲೊಬ್ರು ಮೇಡಮ್ ಇದ್ದಾರೆ. ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ‌ಹಲ್ಲೆ ನಡೆದಿದೆ. ಇಷ್ಟೆಲ್ಲಾ ದಾಖಲೆ ಇರುವಾಗ
ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು, ಪೊಲೀಸ್ ಇಲಾಖೆ ಇಲ್ಲಿಯ ಮೇಡಂ
ಕೈಗೊಂಬೆಯಾಗಿದ್ದಾರೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...