ಭ್ರಷ್ಟಾಚಾರ ಪ್ರಕರಣಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ಡಿ.17) ಬಾಲಕಿಯರ ಬಾಲಮಂದಿರ ಕಟ್ಟಡದ ಉದ್ಘಾಟನೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

‘ಕೆಎಸ್‌ಆರ್‌ಟಿಸಿಯ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು, ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ’ ಎಂದು ಚಾಲಕರೇ ಆರೋಪಿಸುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿಗಣತಿ ಬಗ್ಗೆ ಮಾತನಾಡಿದ ಸಿಎಂ, “ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೆಲವರು ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ವರದಿ ಬರಲಿ ನೋಡೋಣ” ಎಂದರು.

‘ಶಕ್ತಿ ಯೋಜನೆಗೆ ಸರ್ಕಾರ ಮೀಸಲಿಟ್ಟ ಹಣ ಪೂರ್ಣಗೊಂಡಿದೆ’ ಎಂಬ ಬಗ್ಗೆ ಉತ್ತರಿಸಿದ ಅವರು, ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು ಎಂದರು.

“ಶಕ್ತಿ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿಗೆ ಸರ್ಕಾರ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನ ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಅಭಿವೃದ್ಧಿ ಕೆಲಸಗಳು ನಿಂತಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕೊಟ್ಟ ಮಾತಿನಂತೆ ನಡೆದಿದ್ದೇವೆ
ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ 70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73, 928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು ಎಂದರು. 3000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20ಕ್ಕೆ, ಬಜೆಟ್ ಮಂಡಿಸಿದ್ದು ಜುಲೈ ನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ . 4 ಗ್ಯಾರಂಟಿಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...