ಅಧಿಕಾರಕ್ಕಾಗಿ ಹಪಹಪಿಸುವವರು ತಲೆ ಎತ್ತಲು ಹೋದರೆ ಮದ್ದು ನೀಡಲು ನಮ್ಮ ವರಿಷ್ಠರು ಸಶಕ್ತರಿದ್ದಾರೆ: ವಿಜಯೇಂದ್ರ

Date:

ಸಿದ್ದರಾಮಯ್ಯ ಅವರೇ, ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

“ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದರು. ಪ್ರತಿಯಾಗಿ ವಿಜಯೇಂದ್ರ ಟ್ವೀಟ್‌ ಮೂಲಕವೇ ಪ್ರತಿಕ್ರಿಯಿಸಿ, “ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ” ಎಂದು ಹೇಳಿದ್ದಾರೆ.

“ನೀವು ಮುಖ್ಯಮಂತ್ರಿಯಾಗುವ ವೇಳೆ ಡಿ ಕೆ ಶಿವಕುಮಾರ್‌ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ” ಎಂದು ಕುಟುಕಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...