ದಕ್ಷಿಣ ಕನ್ನಡ ಜನರ ಕೈ ಕೊಯ್ದರೆ ರಕ್ತ ಕೆಂಪಿರಲ್ಲ, ಕೇಸರಿ ಇರುತ್ತೆ: ಮಾಳವಿಕ ಅವಿನಾಶ

Date:

ದಿನದಿಂದ ದಿನಕ್ಕೆ ಚುನಾವಣೆ ಬಿಸಿ ಏರಿಕೆಯಾಗುತ್ತಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಎರಡು ಪಕ್ಷಗಳು ತೀವ್ರ ಸೆಣಸಾಟ ನಡೆಸಿವೆ. ಅಬ್ಬರದ ಪ್ರಚಾರ ನಡೆಸಿವೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ ಸಮಾವೇಶದಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕಿ ಮಾಳವಿಕ ಅವಿನಾಶ, “ಇಲ್ಲಿಯ ಜನರ ರಕ್ತದ ಬಣ್ಣ ಕೆಂಪು ಅಲ್ಲ, ಕುಯ್ದರೇ ಕೇಸರಿ ರಕ್ತ ಬರುತ್ತೆ. ಇದು ನಮಗೆಲ್ಲ ಗೊತ್ತಿದೆ” ಎಂದು ಹೇಳಿದ್ದಾರೆ.

“ನಾನು ಇಲ್ಲಿ ಬಿಜೆಪಿ ಬಗ್ಗೆ, ಹಿಂದುತ್ವದ ಪಾಠ ಹೇಳಲು ಬಂದಿಲ್ಲ. ಆದರೆ, ಎಪ್ರಿಲ್ 26ರಂದು ಮದುವೆ ಇದೆ. ಮೋದಿ ಗೆಲ್ಲುತ್ತಾರೆ ಎಂದು ನಿರ್ಲಕ್ಷ್ಯ ಮಾಡಬೇಡಿ. ಮೋದಿಯವರು ಈ ದೇಶದ ಮಹಿಳೆಯರಿಗೆ ಶಕ್ತಿ ಕೊಟ್ಟಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಎಷ್ಟೆಲ್ಲ ಯೋಜನೆ ಮಾಡಿದ್ದಾರೆ. ಅದಕ್ಕಾಗಿ ನಾವು ಹಿಂತಿರುಗಿ ಕೊಡೋದು, ಒಂದು ಮತವಷ್ಟೇ. ಅದನ್ನು ತಪ್ಪದೆ ಮಾಡಬೇಕು” ಎಂದು ತಿಳಿಸಿದ್ದಾರೆ.

“ಮೋದಿಜಿ ಮತ್ತೊಮ್ಮೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. ಇನ್ನು ಬ್ರಿಜೇಶ್ ಚೌಟ ಅಭ್ಯರ್ಥಿ ಅಲ್ಲ, ನನ್ನ ಲೆಕ್ಕದಲ್ಲಿ ಅವರು ಲೋಕಸಭಾ ಸದಸ್ಯ. ಅವರನ್ನ ಎಷ್ಟು ಅಂತರದಲ್ಲಿ ಗೆಲ್ಲಿಸುತ್ತೇವೆ ಎಂಬ ಸವಾಲು ನಮ್ಮ ಮುಂದಿದೆಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗರೀಬಿ ಹಠಾವೋ ಎಂದು ನಾವು ಹುಟ್ಟುವ ಮೊದಲೇ ಇಂದಿರಾ ಗಾಂಧಿ ಹೇಳಿದ್ದರು. ಆದರೆ, ಗರೀಬಿ ಹಠಾವೋ ಆಗಿಲ್ಲ. ಅದನ್ನು ಮಾಡಲು ಮೋದಿಯೇ ಬರಬೇಕಾಯಿತು. ಈಗ ಕಾಂಗ್ರೆಸ್ ಹಠಾವೋ ಮಾಡಲು ಶುರು ಮಾಡಿದ್ದಾರೆ. ಆ ಮೂಲಕ ಕಾಂಗ್ರೆಸಿಗರ ಭ್ರಷ್ಟಾಚಾರವನ್ನೂ ತೊಲಗಿಸುವ ಸಂಕಲ್ಪ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದ್ವಿತೀಯ ಪಿಯುಸಿ | ಪರೀಕ್ಷೆಯಲ್ಲಿ ಶೇ. 78 ರಷ್ಟು ಫಲಿತಾಂಶ ಗಳಿಸಿದ ಬಿಬಿಎಂಪಿ ಕಾಲೇಜುಗಳು

ಮೋದಿ ದೇಶಕ್ಕೆ ಕೊಟ್ಟಿದ್ದೇನು ಅನ್ನೋದು ನಮ್ಮೆಲ್ಲರ ಮನಸ್ಸಿನಲ್ಲಿರಬೇಕು. ದಿನಪೂರ್ತಿ ಎಚ್ಚರದಲ್ಲಿದ್ದು, ದೇಶದ ಒಳಿತಿಗಾಗಿ ದುಡಿಯುತ್ತಿದ್ದಾರೆ. ದೇಶದ ಅಭ್ಯುದಯವೇ ಅವರ ಗುರಿ. ಇಡೀ ದೇಶದ ಜನರು, ಪ್ರತಿ ಗ್ರಾಮವೂ ಅಭಿವೃದ್ಧಿಯಲ್ಲಿ ಜೋಡಣೆಯಾಗಬೇಕು ಅನ್ನುವ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದಾರೆಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಬಿಜೆಪಿ ಕಾರ್ಯಕರ್ತನಾದರೂ ಬಾಳಿಗಾಗೆ ನ್ಯಾಯ ಬೇಕು: ಬಿ.ಕೆ. ಹರಿಪ್ರಸಾದ್

ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆಗೆ ದಶಕ ಪೂರೈಸಿದ ಹಿನ್ನೆಲೆಯಲ್ಲಿ,...

ಅಮಾನತುಗೊಂಡಿದ್ದ ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಈ ಹಿಂದೆ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಮಾನತುಗೊಂಡಿದ್ದ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...