ಬಿಗ್ ಬ್ರೇಕಿಂಗ್ ನ್ಯೂಸ್‌ | ಅಕ್ರಮ ಡಿನೋಟಿಫಿಕೇಷನ್ ಹಗರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಎಚ್‌ಡಿಕೆ

Date:

ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.

2007 ಮತ್ತು 2010ರ ನಡುವೆ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ ಕುಮಾರಸ್ವಾಮಿ ಹಾಗೂ ಬಿ.ಎಸ್‌ ಯಡಿಯೂರಪ್ಪ ಅವರು ಗಂಗಾನಗರದ ಭೂಮಿಯನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಆ ಭೂಮಿಯನ್ನು ಡಿನೋಟಿಫೈ ಮಾಡಲು ರಾಜಶೇಖರಯ್ಯ ಎಂಬವರ ಹೆಸರಿನಲ್ಲಿ 2007ರಲ್ಲಿ ಬೇನಾಮಿ ಅರ್ಜಿ ಸಲ್ಲಿಕೆಯಾಗಿತ್ತು. ಅಗ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದರು. ಕುಮಾರಸ್ವಾಮಿ ಅವರೇ ಬೇನಾಮಿ ಅರ್ಜಿ ಪಡೆದಿದ್ದರು ಎಂದೂ ಹೇಳಲಾಗಿದೆ. ಜೊತೆಗೆ, ತಮ್ಮ ಅತ್ತೆ ವಿಮಲಾ ಹೆಸರಿನಲ್ಲಿ ಜಿಪಿಎ ಮಾಡಿಸಲಾಗಿತ್ತು.

ಆ ನಂತರ, ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ, 2010ರಲ್ಲಿ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿ, ಅದೇಶ ಹೊರಡಿಸಿದ್ದರು. ಡಿನೋಟಿಫೈ ಆದ ಭೂಮಿಯನ್ನು ಕುಮಾರಸ್ವಾಮಿ ಅವರು ಬಾಬೈದ ಟಿ.ಎಸ್ ಚನ್ನಪ್ಪ ಹೆಸರಿಗೆ ನೋಂದಣಿ ಮಾಡಿಕೊಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಯಡಿಯೂರಪ್ಪ ಎ1 ಆರೋಪಿಯಾಗಿದ್ದರೆ, ಕುಮಾರಸ್ವಾಮಿ ಅವರು ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಲೋಕಾಯುಕ್ತ, ಸೆಪ್ಟೆಂಬರ್ 21ರಂದು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೆ, 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್ ಅವರಿಂದ ನಿಯಮ 164ರ ಅಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

 ಇದೀಗ, ಇಂದು (ಶುಕ್ರವಾರ) ಕುಮಾರಸ್ವಾಮಿ ಅವರನ್ನೂ ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡು ವಿಚಾರಣೆಗೆ ಒಳಪಡಿಸಲಾಗಿದೆ. ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬೇಕರ್, ಐಜಿ ಸುಬ್ರಮಣ್ಯೇಶ್ವರ ರಾವ್ ನೇತೃತ್ವದಲ್ಲಿ ತನಿಖಾಧಿಕಾರಿ ಬಸವರಾಜ್ ಮಗದುಂ ಅವರು ತೀವ್ರ ವಿಚಾರಣೆ ನಡೆಸಿದ್ದಾರೆ.

ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆ 11 ಗುಂಟೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಡಿನೋಟಿಫಿಕೇಷನ್ ಮಾಡಿಸಿದ್ದರು. ಎಲ್ಲರೂ ಮರೆತು ಹೋಗಿದ್ದ ಈ ಹಗರಣವನ್ನು ದಾಖಲೆಗಳ ಸಮೇತ ಈದಿನ.ಕಾಮ್ ಬಯಲಿಗೆಳಿದಿದೆ. ಈ ಬೆನ್ನಲ್ಲೇ, ಹಗರಣದ ತನಿಖೆಯನ್ನು ಲೋಕಾಯುಕ್ತ ಅಧಿಕಾರಿಗಳು ಚುರುಕುಗೊಳಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...