ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್‌ಗಳಿಗೆ ಅನುಮತಿ ಪತ್ರ ದೊರೆಯುತ್ತದೆ.  ತಿಂಗಳಿಗೊಮ್ಮೆ ಪ್ರಾಧಿಕಾರದ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸಿದ್ದರಾಮಯ್ಯ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಮರಳು ನೀತಿ 2020ನ್ನು 1.12.2021 ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್‌ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿ ಯನ್ನೂ ಕಾಪಾಡಬೇಕಿದೆ. ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

ನಾನ್ ಸಿಆರ್‌ ಝೆಡ್‌ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್‌ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್‌ಗಳಿಗೆ ಮರು ಹರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.

ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ಕೆಂಪುಕಲ್ಲಿನ (Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್‌ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. ಕೆಂಪುಕಲ್ಲಿಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...