ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಆರೋಪ ಸಾಬೀತಾದರೆ ಸಚಿವರು ರಾಜೀನಾಮೆ ನೀಡುತ್ತಾರೆ: ಸಚಿವ ಪರಮೇಶ್ವರ್

Date:

ಅಧಿಕಾರಿ‌ ಚಂದ್ರಶೇಖರ್ ಸಾವಿಗೆ ಕಾರಣರಾದವರಿಗೆ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಆರೋಪ ಎರಡೂ ಆಯಾಮದಲ್ಲಿ ಸಿಐಡಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ಆತ್ಮಹತ್ಯೆ ಮಾಡಿಕೊಂಡಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ಶಿವಮೊಗ್ಗದ ವಿನೋಬ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

“ಮೃತರಾಗಿರುವ ಅಧೀಕ್ಷಕ ಚಂದ್ರಶೇಖರ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿ‌ನ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ‌. ಪ್ರಕರಣದ‌ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ಏನು ನಡೆದಿದೆ ಎಂಬ ಸತ್ಯಾಂಶ ಪತ್ತೆ ಮಾಡಲಿದ್ದಾರೆ” ಎಂದು ತಿಳಿಸಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇರೆ ಬೇರೆ ಖಾತೆಗಳಿಗೆ ಕೋಟ್ಯಂತರ ರೂ. ವರ್ಗಾವಣೆಯಾಗಿದೆ ಎಂಬ ಆರೋಪವಿದೆ. ಚಂದ್ರಶೇಖರ್ ಅಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೆ ಅವರ ಮೇಲೆ ಏನಾದರೂ ಒತ್ತಡವಿತ್ತೆ ಎಂಬುದನ್ನು ಈಗಲೇ ಹೇಳಲು ಬರುವುದಿಲ್ಲ. ತನಿಖೆಯ ನಂತರ ಸತ್ಯಾಂಶ ಗೊತ್ತಾಗಲಿದೆ” ಎಂದರು.

“ಚಂದ್ರಶೇಖರ್‌ನನ್ನು ಕಳೆದುಕೊಂಡಿರುವ ಕುಟುಂಬಸ್ಥರು ನೋವನ್ನು ಅನುಭವಿಸುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಒಡವೆ ಅಡವಿಟ್ಟು ಆತನ ಜೀವ ಉಳಿಸಿಕೊಂಡಿದ್ದರು. ವಿಧಿ ಈ ರೀತಿ ಮಾಡುತ್ತದೆ ಎಂದು ಭಾವಿಸಿರಲಿಲ್ಲ. ಕುಟುಂಬದ ಪರಿಸ್ಥಿತಿಯನ್ನು ಪತ್ನಿ ಅಳಲು ತೋಡಿಕೊಂಡರು. ಸರ್ಕಾರ ನೊಂದ ಕುಟುಂಬದ ಪರ ನಿಲ್ಲಲಿದೆ. ಜೂನ್ 6ರ ನಂತರ ಪರಿಹಾರ ಕಲ್ಪಿಸಲಾಗುವುದು” ಎಂದು ತಿಳಿಸಿದರು.

“ಹಣ ವರ್ಗಾವಣೆಗೆ ಸಚಿವರು ಮೌಖಿಕ ಆದೇಶ ಕೊಟ್ಟಿದ್ದರು ಎಂಬುದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ತನಿಖೆಯ ವರದಿ ಬರುವವರೆಗೂ ಈ ಬಗ್ಗೆ ಏನನ್ನು ಹೇಳಲಾಗುವುದಿಲ್ಲ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ಹೆಸರು ಉಲ್ಲೇಖವಾಗಿತ್ತು. ಈಶ್ವರಪ್ಪ ಪ್ರಕರಣಕ್ಕೆ, ಈ ಪ್ರಕರಣವನ್ನು ಹೋಲಿಸಲು ಆಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯವರನ್ನು ಕೇಳಿ ಆಡಳಿತ ನಡೆಸುವ ಅನಿವಾರ್ಯತೆ ನಮಗಿಲ್ಲ. ಅವರನ್ನು ಕೇಳಿ ಆಡಳಿತ ನಡೆಸುವ ಹಾಗಿದ್ದರೆ ಜನ ನಮ್ಮನ್ನು ಆಯ್ಕೆ ಮಾಡಿ ಕಳುಹಿಸುತ್ತಿರಲಿಲ್ಲ” ಎಂದು ಟೀಕಿಸಿದರು.

ಸಚಿವ ನಾಗೇಂದ್ರ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಬೇಕು ಎಂಬ ಬಿಜೆಪಿಯವರ ಒತ್ತಾಯದ ಕುರಿತು ಪ್ರತಿಕ್ರಿಯಿಸಿದ ಅವರು, “ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತಾರೆ. ಅದಕ್ಕಾಗಿ‌ಯೇ ತನಿಖೆ ನಡೆಸಲಾಗುತ್ತಿದೆ. ಸತ್ಯ ಏನೆಂಬುದು ಹೊರಬರುತ್ತದೆ” ಎಂದರು.

ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ” ಬಿಜೆಪಿಯವರು ನಾಲ್ಕು ವರ್ಷದ ಆಡಳಿತ ಅವಧಿಯಲ್ಲಿ ನೇಮಕಾತಿ‌ ಮಾಡಿಕೊಂಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಈಗ ನೇಮಕಾತಿ ನಡೆಯುತ್ತಿದೆ. 545 ಪಿಎಸ್ಐ ಹುದ್ದೆಗಳ ನೇಮಕಾತಿ ಪಟ್ಟಿ ಇನ್ನು ಕೆಲ ದಿನಗಳಲ್ಲಿ ಬಡುಗಡೆಯಾಗುತ್ತದೆ. ಅವರು ಕರ್ತವ್ಯಕ್ಕೆ ಹಾಜರಾಗಲು ಒಂದೂವರೇ ವರ್ಷ ಬೇಕಾಗುತ್ತದೆ” ಎಂದರು.

ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ‌ ಪ್ರಸನ್ನ ಕುಮಾರ್, ಮಾಜಿ‌ ಸಂಸದರಾದ ಆಯನೂರು ಮಂಜುನಾಥ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್, ಮುಖಂಡರಾದ ಯೋಗೇಶ್, ಶಿವಕುಮಾರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...