ಮರಗಳ್ಳತನ ಪ್ರಕರಣ | ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಪಡೆದ ವಿಕ್ರಂ ಸಿಂಹ

Date:

ಮರಗಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಬಂಧನಕ್ಕೊಳಗಾದ 24 ಗಂಟೆಯೊಳಗೆ ಜಾಮೀನು ಮಂಜೂರಾಗಿದೆ.

ನಿನ್ನೆ ಸಂಜೆ ವಿಕ್ರಂ ಸಿಂಹರನ್ನು ಬಂಧಿಸಿದ್ದ ಅರಣ್ಯಾಧಿಕಾರಿಗಳು, ಇಂದು ಜಡ್ಜ್​​ ಮುಂದೆ ಹಾಜರುಪಡಿಸಿದ್ದರು. ಬೇಲೂರು ನ್ಯಾಯಾಲಯದ ಸೀನಿಯರ್‌ ಸಿವಿಲ್‌ ಜಡ್ಜ್‌ ಜಾಮೀನು ಮಂಜೂರು ಮಾಡಿ, ಆದೇಶ ಹೊರಡಿಸಿದ್ದಾರೆ.

ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪದ ಮೇರೆಗೆ ವಿಕ್ರಂ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದರು.

ವ್ಯವಸ್ಥಿತ ಪಿತೂರಿ: ವಿಕ್ರಂ ಸಿಂಹ ಆರೋಪ
ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗುತ್ತಿದೆ. ಸಮಯ ಬರಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ವಿಕ್ರಂ ಸಿಂಹ ಕಿಡಿಕಾರಿದ್ದರು.

ಆರೋಗ್ಯ ತಪಾಸಣೆಗೆ ಕರೆತಂದ ವೇಳೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, “ಹೇಳಲು ತುಂಬಾ ವಿಷಯಗಳಿವೆ. ವ್ಯವಸ್ಥಿತವಾಗಿ ನನ್ನನ್ನ ಮುಗಿಸುವುದಕ್ಕಾಗಿ ಪ್ರಯತ್ನ ಮಾಡ್ತಿದ್ದಾರೆ. ನಮ್ಮ ಸಹೋದರ ಪ್ರತಾಪ್ ಸಿಂಹನನ್ನು ಟಾರ್ಗೆಟ್​ ಮಾಡ್ತಿದ್ದಾರೆ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ” ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...