ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಿ: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ

Date:

“ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ. ಲೋಕಸಭೆಯಲ್ಲಿ ಆಡಳಿತರೂಢ ಎನ್‌ಡಿಎಗೆ ಮೂರನೇ ಎರಡರಷ್ಟು ಬಹುಮತವಿದೆ. ಹೀಗಾಗಿ ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಪ್ರಧಾನಿ ಮೋದಿ ಜಾರಿಗೆ ತರಬೇಕು” ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಸಿಕಂದರಾಬಾದ್ನಲ್ಲಿ ನಡೆದ ಮಾದಿಗ ಮೀಸಲು ಹೋರಾಟ ಸಮಿತಿಯ ರ್‍ಯಾಲಿಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿಯವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಜೊತೆಗೆ, “ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ಕಡೆ ಒಳಮೀಸಲಾತಿಗಾಗಿ ಒತ್ತಾಯಿಸಲಾಗುತ್ತಿದೆ. ಮಾದಿಗ ಸಮುದಾಯದ ಬೇಡಿಕೆಯನ್ನು ಈಡೇರಿಸಲು ಅಧ್ಯಯನ ಸಮಿತಿ ರಚಿಸಲಾಗುತ್ತದೆ” ಎಂದಿದ್ದರು. ಈ ಹಿನ್ನೆಲೆಯಲ್ಲಿ ಖರ್ಗೆಯವರು ಪ್ರತಿಕ್ರಿಯಿಸಿದ್ದಾರೆ.

“ನೀವು  ಅಧಿಕಾರಕ್ಕೆ ಬಂದು 10 ವರ್ಷವಾಯಿತು. ಒಳಮೀಸಲಾತಿ ಮಾಡದಂತೆ ನಿಮ್ಮನ್ನು ತಡೆಯುವವರು ಯಾರು? ಯಾರೂ ಇಲ್ಲ. ಆದರೆ ನೀವು ಆ ಕೆಲಸ ಮಾಡಲಿಲ್ಲ. ಈಗ ಸಮಿತಿ ರಚಿಸುವುದಾಗಿ ಹೇಳಿದ್ದೀರಿ. ನಿಮಗೆ ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತವಿದೆ. ಸುಗ್ರೀವಾಜ್ಞೆ ತಂದು ಒಳಮೀಸಲಾತಿ ಜಾರಿಗೊಳಿಸಿ. ತೆಲಂಗಾಣ ರಾಜ್ಯ ರಚಿಸುವುದಾಗಿ ಕಾಂಗ್ರೆಸ್ ನೀಡಿದ ಭರವಸೆಯನ್ನು ನಾವು ಈಡೇರಿಸಿದ್ದೇವೆ, ನಿಮ್ಮ ಕೈಯಲ್ಲಿ ಅಧಿಕಾರವಿದೆ. ನಿಮ್ಮ ಬಳಿ ಬಹುಮತವಿದೆ” ಎಂದು ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಪ್ರತಿಯೊಬ್ಬ ನಾಗರಿಕರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವುದಾಗಿ ಹೇಳಿದ್ದಿರಿ. ಪ್ರತಿ ವರ್ಷ 2 ಕೋಟಿ ಉದ್ಯೋಗಗಳನ್ನು ನೀಡುವುದಾಗಿ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದಿರಿ. ಆದರೆ ಅದ್ಯಾವುದೂ ಆಗಲಿಲ್ಲ” ಎಂದು ಟೀಕಿಸಿದ್ದಾರೆ.

“ನಾವು ಈ ದೇಶದ ಸಂವಿಧಾನವನ್ನು ಮಾಡಿ ಎಲ್ಲರಿಗೂ ಸಮಾನ ಪಾಲು ನೀಡಿದ್ದೇವೆ. ಕೆಸಿಆರ್‌ ಅಥವಾ ಮೋದಿ  ಏನು ಕೊಟ್ಟಿದ್ದಾರಾ? ಇಂಥವರು ಜನರನ್ನು ಪ್ರಚೋದಿಸಿ ದಾರಿ ತಪ್ಪಿಸುತ್ತಿದ್ದಾರೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ: ಮಾದಿಗರಿಗೆ ಮತ್ತೆ ಮಹಾವಂಚನೆ ಮಾಡುತ್ತಿರುವ ಮೋದಿ

ಮಾದಿಗ, ಮಾಲ ಅಥವಾ ಇತರೆ ಪರಿಶಿಷ್ಟ ಜಾತಿಯವರನ್ನು ಅಭಿವೃದ್ಧಿ ಪಡಿಸಲು ನಾವು ಬದ್ಧರಾಗಿದ್ದೇವೆ. ಪಕ್ಷವು ತನ್ನ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಳಮೀಸಲಾತಿ ಜಾರಿಗೊಳಿಸಬೇಕೆಂದರೆ ಸಂವಿಧಾನದ 341ನೇ ವಿಧಿಗೆ ತಿದ್ದುಪಡಿ ತಂದು  341 (3) ಸೇರಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಕ್ರಮ ಜರುಗಿಸಬೇಕಿತ್ತು. ಜೊತೆಗೆ ಒಳಮೀಸಲಾತಿಗೆ ಸಂಬಂಧಿಸಿದ ಕಾನೂನುಗಳನ್ನು 9ನೇ ಶೆಡ್ಯೂಲ್‌ಗೆ ಸೇರಿಸಿ ನ್ಯಾಯಾಧೀಕರಣದ ಅಪಾಯದಿಂದಲೂ ತಪ್ಪಿಸಬಹುದಿತ್ತು. ಆದರೆ ಅದ್ಯಾವನ್ನೂ ಮಾಡಲಿಲ್ಲ ಎಂಬ ಆರೋಪಗಳು ಮೋದಿ ಸರ್ಕಾರದ ಮೇಲಿವೆ.

ಯಾವುದೇ ಒತ್ತಾಯ, ಸಮಿತಿಯ ಶಿಫಾರಸ್ಸು ಇಲ್ಲದಿದ್ದರೂ ಬಲಾಢ್ಯ ಜಾತಿಗಳಿಗೆ ’ಆರ್ಥಿಕವಾಗಿ ಹಿಂದುಳಿದ ವರ್ಗ’ (ಇಡಬ್ಲ್ಯುಎಸ್‌) ಎಂಬುದಾಗಿ ಮೀಸಲಾತಿಯನ್ನು ನೀಡಲಾಯಿತು. ಇದರ ಜಾರಿಗೆ ತೆಗೆದುಕೊಂಡಿದ್ದು ಒಂದು ವಾರವಷ್ಟೇ. ಆದರೆ ಮೂವತ್ತು ವರ್ಷಗಳಿಂದ ಒಳಮೀಸಲಾತಿ ಹೋರಾಟ ನಡೆಯುತ್ತಿದ್ದರೂ ಮೋದಿ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ. ಮಾದಿಗ ಸಮುದಾಯದ ಬಹು ವರ್ಷಗಳ ಬೇಡಿಕೆಗೆ ಕಾಂಗ್ರೆಸ್ ಸ್ಪಷ್ಟ ನಿಲುವು ತಾಳುತ್ತಿಲ್ಲ ಎಂಬ ಆಕ್ರೋಶವೂ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...