ಸಿಕಲ್ ಸೆಲ್ ಅನೀಮಿಯಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ‘ಪ್ರಾಜೆಕ್ಟ್ ಚಂದನ’ ಯೋಜನೆ ಜಾರಿ

Date:

  • ಮುಂದಿನ ಎರಡು ವರ್ಷಗಳಲ್ಲಿ 2.5 ಲಕ್ಷ ಬುಡಕಟ್ಟು ಜನರ ತಪಾಸಣೆ: ಸಚಿವ ಗುಂಡೂರಾವ್
  • ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ CSR ಫಂಡ್ ವಿನಿಯೋಗಿಸಲು ಕಂಪನಿಗಳಿಗೆ ಮನವಿ

ಸಿಕಲ್ ಸಿಲ್ ಅನೀಮಿಯಾ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ‘ಪ್ರಾಜೆಕ್ಟ್ ಚಂದನ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೈಸೂರಿನಲ್ಲಿ ಇಂದು(ಜೂನ್ 19) ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, “ಈಗಾಗಲೇ ಆರೋಗ್ಯ ಇಲಾಖೆ ಸಿಕಲ್ ಸೆಲ್‌ಗೆ ತುತ್ತಾಗಿರುವವರಿಗೆ ಉಚಿತ ಚಿಕಿತ್ಸೆ, ಉತ್ತಮ ಆರೈಕೆ ಒದಗಿಸಲಾಗುತ್ತಿದೆ. ರೋಗ ಹರಡದಂತೆ ಕ್ರಮಗಳನ್ನೂ ಕೂಡ ಕೈಗೊಳ್ಳಲಾಗುತ್ತಿದೆ. ಇದೀಗ ‘ಪ್ರಾಜೆಕ್ಟ್ ಚಂದನ’ದ’ ಮೂಲಕ ಮುಂದಿನ ಎರಡು ವರ್ಷಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ 2,56,000 ಲಕ್ಷ ಬಡಕಟ್ಟು ಜನರ ತಪಾಸಣೆ ನಡೆಸುವುದರ ಜೊತೆಗೆ ಅಗತ್ಯ ಚಿಕಿತ್ಸೆ ಕಲ್ಪಿಸಲಾಗುವುದು” ಎಂದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ರೋಗದ ವಿರುದ್ಧ ಹೋರಾಡಲು ಅನೇಕ ಸಾಮಾಜಿಕ ಸಂಘಸಂಸ್ಥೆಗಳು ಸಕ್ರಿಯವಾಗಿ ತೊಡಗಿಸಿಕೊಂಡಿವೆ. ವಿಶೇಷವಾಗಿ ಭಾರತೀಯ ವಿಜ್ಞಾನ ಸಂಸ್ಥೆಯು 2 ವರ್ಷಗಳ ಅವಧಿಗೆ ಸಂಪೂರ್ಣ ತಪಾಸಣೆ, ತರಬೇತಿ, ಜಾಗೃತಿ, ಮಾದರಿ ಸಾರಿಗೆ ಮತ್ತು ಸಂಪರ್ಕ ಸೇವೆಗಳಿಗಾಗಿ ಮೈಸೂರು, ಚಾಮರಾಜನಗರ ಮತ್ತು ಕೊಡಗಿನ 3 ಜಿಲ್ಲೆಗಳನ್ನು ದತ್ತು ತೆಗೆದುಕೊಳ್ಳುವ ಪ್ರಸ್ತಾವನೆಯೊಂದಿಗೆ ರಾಜ್ಯ ಸರ್ಕಾರವನ್ನು ಸಂಪರ್ಕಿಸಿದೆ. ಐಐಎಸ್‌ಸಿ ಪ್ರೊಫೆಸರ್ ಸಾಯಿ ಅವರು ಸಂಶೋಧಿಸಿರುವ ನವೀನ ಸಾಧನದಿಂದ ಸ್ಟೀನಿಂಗ್ ಮಾಡಲಾಗುವುದು. ಈ ಯೋಜನೆಯನ್ನು “ಪ್ರಾಜೆಕ್ಟ್ ಚಂದನ” ಎಂದು ಘೋಷಿಸಲಾಗಿದ್ದು, ಯೋಜನೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಿಎಸ್‌ಆರ್ ಅಡಿಯಲ್ಲಿ 18 ಕೋಟಿ ವಿನಿಯೋಗಿಸಲು ಮುಂದೆ ಬಂದಿದೆ. ಇದು ಉತ್ತಮ ಕಾರ್ಯ” ಎಂದು ಸಚಿವ ಗುಂಡೂರಾವ್ ಶ್ಲಾಘನೆ ವ್ಯಕ್ತಪಡಿಸಿದರು.

“ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಈ ರೀತಿಯ ಸಿಎಸ್‌ಆರ್ ಫಂಡ್ ಹೆಚ್ಚಿನ ರೀತಿಯಲ್ಲಿ ಹರಿದುಬರಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಪೋರೇಟ್ ಕಂಪನಿಗಳು ಹೆಚ್ಚಿನ ಒತ್ತು ನೀಡುವ ಅವಶ್ಯಕತೆ ಇದೆ” ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದ ಬುಡಕಟ್ಟು ಜಿಲ್ಲೆಗಳಲ್ಲಿ ಸಿಕಲ್ ಸೆಲ್ ಅನಿಮೀಯಾ ರಕ್ತಹೀನತೆಯ ಸಮಗ್ರ ತಪಾಸಣೆ ಮತ್ತು ಆರೋಗ್ಯ ನಿರ್ವಹಣೆಗಾಗಿ ಸರ್ಕಾರ-ಐಐಎಸ್‌ಸಿ-ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಡುವಿನ ಒಪ್ಪಂದಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಹಿ ಹಾಕಿದರು.

ಸಿಕಲ್ ಸೆಲ್ ಜೆನಿಟಿಕ್ ಕೌನ್ಸೆಲಿಂಗ್ ಕಾರ್ಡ್ ವಿತರಣೆ

ಇದೇ ವೇಳೆ ಸಿಕಲ್ ಸೆಲ್ ಅನಿಮೀಯಾ ರೋಗ ಪತ್ತೆಯಾದವರಿಗೆ ಸಾಂಕೇತಿಕವಾಗಿ ವಿಶೇಷ ಜೆನೆಟಿಕ್ ಕೌನ್ಸೆಲಿಂಗ್ ಕಾರ್ಡ್ ವಿತರಿಸಲಾಯಿತು.‌

ಕಾರ್ಡ್ ಪಡೆದವರಿಗೆ ಉಚಿತ ಚಿಕಿತ್ಸೆ ಮತ್ತು ಉಚಿತ ರಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮುಖ್ಯವಾಗಿ ಹೈಡ್ರಾಕ್ಸಿಯುರಿಯಾ ಮಾತ್ರೆಗಳು, ಹೆಚ್ಚುವರಿ ರೋಗನಿರೋಧಕಗಳು ಮತ್ತು ಸರ್ಕಾರಿ ಸೌಲಭ್ಯಗಳಲ್ಲಿ ಉಚಿತ ರಕ್ತವನ್ನು ನೀಡಲಾಗುತ್ತದೆ.

ಸಿಕಲ್ ಸೆಲ್ ಅನಿಮೀಯಾ ರೋಗಕ್ಕೆ ತುತ್ತಾದವರಲ್ಲಿ 55 ಜನರನ್ನ ಅಂಗವೈಕಲ್ಯ ಎಂದು ಗುರುತಿಸಲಾಗಿದ್ದು, ಯುಡಿಐಡಿ ಗುರುತಿನ ಚೀಟಿ ಪಡೆಯಲು ಅರ್ಹರಾಗಿರುತ್ತಾರೆ. ಸಿಕಲ್ ಸೆಲ್ ಅನೀಮಿಯಾ ರೋಗಿಗಳ ನೋಂದಣಿಗಾಗಿ ಆನ್‌ಲೈನ್ ರಿಜಿಸ್ಟ್ರಿ ಪೋರ್ಟಲ್ ಅನ್ನು ಸ್ಥಾಪಿಸಲಾಗಿದೆ.

ಕರ್ನಾಟಕದಲ್ಲಿ 7 ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡದಲ್ಲಿ ಒಟ್ಟು 352187 ಜನಸಂಖ್ಯೆಯನ್ನು ಸಿಕಲ್ ಸೆಲ್ ಅನೀಮಿಯಾಗೆ ಪರೀಕ್ಷಿಸಲಿದ್ದು, ಜೇನುಕುರುಬ, ಬೆಟ್ಟಕುರುಬ, ಬೇಡ, ಯರವ, ಈಡಿಗ ಮತ್ತು ನಾಯಕರಂತಹ ಆರು ಪ್ರಮುಖ ಬುಡಕಟ್ಟು ಜನಾಂಗದವರಿಗೆ ಆದ್ಯತೆ ನೀಡಲಾಗುವುದು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...