ಹಲ್ದ್‌ವಾನಿ ಹಿಂಸಾಚಾರ | ರಾತ್ರೋರಾತ್ರಿ ಮೃತರ ಅಂತಿಮಕ್ರಿಯೆ; 16 ಶಂಕಿತರ ಮೇಲೆ ಎಫ್‌ಐಆರ್‌

Date:

ಐವರು ಮೃತಪಟ್ಟು ಒಂದು ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿರುವ ಉತ್ತರಾಖಂಡದ ಹಲ್ದ್‌ವಾನಿ ಹಿಂಸಾಚಾರದಲ್ಲಿ ಪೊಲೀಸರು 16 ಮಂದಿಯ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಶುಕ್ರವಾರ ರಾತ್ರಿಯೇ ತರಾತುರಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಗಿದೆ.

ಉತ್ತರಾಖಂಡದ ಹಲ್ದ್‌ವಾನಿ ಹಿಂಸಾಚಾರದಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ಮತ್ತು ಅತಿಕ್ರಮಣ ತೆರವು ಕಾರ್ಯಾಚರಣೆಯ ಸಂದರ್ಭ ವಾಹನಗಳನ್ನು ಧ್ವಂಸಗೊಳಿಸಿರುವ ಆರೋಪದಲ್ಲಿ 16 ಮಂದಿಯ ಮೇಲೆ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, ಉಳಿದ ಆರೋಪಿಗಳನ್ನು ಗುರುತಿಸಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿ ಎಪಿ ಅಂಶುಮನ್‌ ತಿಳಿಸಿರುವುದಾಗಿ ವರದಿಯಾಗಿದೆ.

ಗುರುವಾರ ನಡೆದ ಹಿಂಸಾಚಾರದಲ್ಲಿ ಮೃತಪಟ್ಟ ಐವರು ಸಂತ್ರಸ್ತರ ಶವಗಳ ಅಂತ್ಯಕ್ರಿಯೆಯನ್ನು ಪೊಲೀಸರು ಶುಕ್ರವಾರ ರಾತ್ರೋರಾತ್ರಿ ನಡೆಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿರುವ ಎಜಿಡಿ, “ಶುಕ್ರವಾರ ರಾತ್ರಿಯೇ ಶವಗಳ ಶವಸಂಸ್ಕಾರ ಮತ್ತು ಸಮಾಧಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ ಹಲ್ದ್‌ವಾನಿಯಲ್ಲಿ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ, ಆದರೆ ಬನ್‌ಭೂಲ್‌ಪುರ ಪ್ರದೇಶದಲ್ಲಿ ನಿಷೇಧಾಜ್ಞೆ ಮುಂದುವರಿದಿದೆ.

ಕೃಷಿಯೇತರ ಉದ್ದೇಶಕ್ಕಾಗಿ ರಸ್ತೆ, ಮಾರುಕಟ್ಟೆ, ಮೈದಾನದಂತಹ ಇತರ ಸಾರ್ವಜನಿಕ ಉದ್ದೇಶದ ಸರ್ಕಾರಿ ಆಸ್ತಿಗಳ ನಿರ್ಮಾಣಕ್ಕೆ ಬಳಸಲಾಗುವ ನಾಜೂಲ್ ಭೂಮಿಯನ್ನು ಅತಿಕ್ರಮಿಸಿ ಮಸೀದಿ ಮತ್ತು ಮದರಸಾ ನಿರ್ಮಿಸಲಾಗಿದೆ ಎಂದು ಆರೋಪಿಸಿದ ಉತ್ತರಾಖಂಡದ ಸರ್ಕಾರದ ಆದೇಶವನ್ನು ಜಾರಿಗೆ ತರುವಾಗ ಸ್ಥಳೀಯ ಆಡಳಿತ ಆದೇಶದ ಪ್ರತಿಯನ್ನು ನೀಡದೆಯೇ ಅತಿಕ್ರಮಣ ಕಾರ್ಯಾಚರಣೆ ನಡೆಸಿದೆ ಎಂದು ಸ್ಥಳೀಯರು ಆರೋಪಿಸಿದ್ದರು. ಆದೇಶದ ಪ್ರತಿ ವಿಚಾರದಲ್ಲಿ ಆಡಳಿತ ಮತ್ತು ಸ್ಥಳೀಯರ ನಡುವಿನ ವಾಗ್ಯುದ್ಧ ಹಿಂಸಾಚಾರಕ್ಕೆ ತಿರುಗಿತ್ತು. 

ಆಡಳಿತ ಒತ್ತಡಪೂರ್ವಕ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲು ಮುಂದಾದಾಗ ಜನರು ಕಲ್ಲುಗಳನ್ನು ಎಸೆದು, ಕಾರುಗಳಿಗೆ ಬೆಂಕಿ ಹಚ್ಚಿದ್ದರು. ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿದ್ದರು. ಮುಖ್ಯಮಂತ್ರಿ ಪುಷ್ಕರ್ ಧಾಮಿ ಗಲಭೆನಿರತರಿಗೆ ಸ್ಥಳದಲ್ಲೇ ಗುಂಡು ಹಾರಿಸಲು ಆದೇಶಿಸಿದ್ದರು. 

ಶುಕ್ರವಾರ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಭೇಟಿಯಾದ ಮುಖ್ಯಮಂತ್ರಿ ಪರಿಸ್ಥಿತಿಯ ಸೂಕ್ಷ್ಮವನ್ನು ಪರಿಗಣಿಸದೆ, ಹಿಂಸಾಚಾರದಲ್ಲಿ ಪೊಲೀಸರು ಮತ್ತು ಆಡಳಿತ ಸಿಬ್ಬಂದಿಗಳನ್ನು ಕೊಲ್ಲುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...