ದಸರಾಗೆ ಚಾಲನೆ | ಚುನಾಯಿತ ಸರ್ಕಾರಗಳನ್ನು ಉರುಳಿಸುವ ದುರ್ಬುದ್ಧಿ ಬಾರದಿರಲಿ; ಚಾಮುಂಡಿ ದೇವಿಗೆ ಹಂಪನಾ ಪ್ರಾರ್ಥನೆ

Date:

ವಿಶ್ವವಿಖ್ಯಾತ ಮೈಸೂರು ದಸರಾಗೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ, “ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆದು, ಚುನಾಯಿತ ಸರಕಾರಗಳನ್ನು ಉಳಿಸುವ ಚಿಂತನೆಗಳನ್ನು ಲೋಕಾಂಬಿಕೆಯು ಮೂಡಿಸಲಿ” ಎಂದು ಪ್ರಾರ್ಥಿಸಿ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವಕ್ಕೆ‌ ಚಾಲನೆ ನೀಡಿದರು.

“ಯುದ್ಧ, ಅಮಾಯಕರ ಮಾರಣಹೋಮ ನಿಲ್ಲಲಿ, ಅದಕ್ಕಾಗಿ ರಾಷ್ಟ್ರ ನಾಯಕರು ಜೀವಪರ ಧೋರಣೆ ತಳೆಯಲು ಚಾಮುಂಡಿ ಪ್ರೇರಣೆ ನೀಡಲಿ, ಹೆಣ್ಣು ಭ್ರೂಣ ಹತ್ಯೆ ತಡೆಯಲು ತಾಯಿ ತಂದೆಯರಿಗೆ‌ ಸದ್ಬುದ್ಧಿ ಅನುಗ್ರಹಿಸಲಿ” ಎಂಬ ಕೋರಿಕೆಗಳನ್ನು ಮಂಡಿಸಿದರು.

“ದೇವರುಗಳಿಗೂ ಬಲಿಷ್ಠರನ್ನು ಕಂಡರೆ ಭಯ, ಅಮಾಯಕ ಮುಗ್ಧರಿಗೇ ಕಷ್ಟ ಕೊಡುವರು. ಈ ದೇವರುಗಳು ಕೂಡ ಕೋಳಿ, ಕುರಿ, ಮೇಕೆ ಬಲಿ ಬೇಡುವರೆ ಹೊರತು ಹುಲಿ, ಸಿಂಹ, ಚಿರತೆ ಕಿರುಬ ಬಲಿ ಕೊಡಿ ಎಂದು ಕೇಳಲು ಹೆದರಿಕೆ’ ಎಂದು ಮಾರ್ಮಿಕವಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ರಾಜಕೀಯ‌ ಬೆಳವಣಿಗೆಗಳ ಬಗ್ಗೆ ಗಮನ ಸೆಳೆದ ಅವರು, “ಯುವಕರು ಮೋದಿ ಮೋದಿ ಎಂದು ಮುಂದುವರಿಯುತ್ತಿದ್ದಾರೆ. ಹಾಗೆಂದು ಸರ್ಕಾರ ಅಸ್ಥಿರಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು. ಜೀವನವೇ ದೊಡ್ಡ ಅಖಾಡ, ಧೃತಿಗೆಡದೆ ತೊಡೆತಟ್ಟಿ ನಿಲ್ಲಲೇಬೇಕು” ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನುದ್ದೇಶಿಸಿ ಧೈರ್ಯ ತುಂಬಿದರು.

“ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಶಾಸನ ಸಭೆ ಲೋಕಸಭೆಯಲ್ಲಿ ಸ್ತ್ರೀಯರಿಗೆ ಸೂಕ್ತ ಪ್ರಾತಿನಿಧ್ಯ ಕೊಡುವ ಮಸೂದೆಗೆ ಅಡ್ಡಿ ಮಾಡುತ್ತಲೇ ಇದ್ದಾರೆ. ಹೆಣ್ಣುಮಕ್ಕಳು ಶಾಲೆಗೆ ಹೋಗಕೂಡದೆಂದು ಬೆದರಿಸುವ ಒಂದು ದೇಶವೂ ಇದೆಯೆಂಬುದು ಶೋಚನೀಯವಷ್ಟೇ ಅಲ್ಲ, ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದಲ್ಲಿ ಆಡಳಿತ ವಿರೋಧಿ ಗಾಳಿ- ಇಳಿಜಾರಿನಲ್ಲಿ ಬಿಜೆಪಿ

“ಕೆಡವುಹುದು ಸುಲಭ, ಕಟ್ಟುವುದು ಕಷ್ಟ. ಮೊದಲೇ ದೊಡ್ಡ ಹೊರೆಗಳಿಂದ ಬಳಲಿ ಬಸವಳಿದಿರುವ ಶ್ರೀಸಾಮಾನ್ಯರ ಹೆಗಲಿಗೆ ಮತ್ತೆ ಮತ್ತೆ ನಡೆಯುವ ಚುನಾವಣೆಗಳು ಇನ್ನಷ್ಟು ಭಾರ ಹೇರಿದರೆ ಕುಸಿಯುತ್ತಾರಷ್ಟೆ. ಯಾವ ಪಕ್ಷವೂ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದು ಅಸಾಧ್ಯ. ಸೋತ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು, ಜನಮನವನ್ನು ತಮ್ಮ ಪರವಾಗಿ ಒಲಿಸಿಕೊಳ್ಳಲು ಐದು ವರ್ಷದಲ್ಲಿ ಸಜ್ಜಾಗಬಹುದು” ಎಂದು ಹೇಳಿದರು.

ಭಾಷಣದ ಕೊನೆಗೆ, “ಒಟ್ಟು 71 ವರ್ಷಗಳ ಸ್ನೇಹದ ಸುಖ ನೀಡಿದ್ದಲ್ಲದೆ ಆರು ವರ್ಷ ಸಹಪಾಠಿಯಾಗಿಯೂ 63 ವರ್ಷ ಮಡದಿಯಾಗಿಯೂ ನನ್ನನ್ನು ರೂಪಿಸಿದ ಮಹಾಶಿಲ್ಪಿ ನಾಡೋಜ ಪ್ರೊಫೆಸರ್ ಕಮಲಾ ಹಂಪನಾ ಅವರ ದಿವ್ಯ ನೆನಪಿಗೆ ನನಗೆ ಸಂದಿರುವ ಈ ಗೌರವವನ್ನು ಸಮರ್ಪಿಸುತ್ತೇನೆ” ಎಂದು‌ ಅವರು ಗದ್ಗದಿತರಾದರು. ತೀರ್ಥಂಕರರ ಪುತ್ಥಳಿ ನೀಡಿ‌ ಹಂಪಾನಾ ಅವರನ್ನು‌ ಸ್ವಾಗತಿಸಿದ್ದು ವಿಶೇಷವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...