‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

Date:

ಸರ್ಕಾರದ ‘ಶಕ್ತಿ’ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

“ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತಾಧಿಗಳು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ” ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಸಂತಸ

“ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು.‌ ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂದು ಸಿದ್ದರಾಮಯ್ಯ ಎಕ್ಸ್‌ ತಾಣದಲ್ಲಿ ಫೊಸ್ಟ್‌ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...