ಬಿತ್ತನೆ ಬೀಜಗಳ ದರ ಏರಿಕೆ: ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Date:

ರಾಜ್ಯದಲ್ಲಿ ಬಿತ್ತನೆ ಬೀಜಗಳ ದರಗಳ ಏರಿಕೆ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, “ಬರಗಾಲದಿಂದ ಕುಂಠಿತವಾದ ಬೀಜೋತ್ಪಾದನೆ ದರ ಹೆಚ್ಚಳಕ್ಕೆ ಕಾರಣ. ನೆರೆಯ ರಾಜ್ಯಗಳ ಹೋಲಿಕೆಯಲ್ಲಿ ಬಿತ್ತನೆ ಬೀಜಗಳ ದರ ರಾಜ್ಯದಲ್ಲಿ ಕಡಿಮೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ. ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ” ಎಂದು ತಿಳಿಸಿದ್ದಾರೆ.

“ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ ಎಪಿಎಂಸಿ ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ. ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ” ಎಂದು ತಿಳಿಸಿದ್ದಾರೆ.

“ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ. ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ.

ದರ ಹೋಲಿಕೆ

ಮಹಾರಾಷ್ಟ್ರದಲ್ಲಿ ಸೋಯಾ ಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು, ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೊರಡಿಸಿರುವ ಪ್ರಕಟಣೆಯಲ್ಲಿ ದರ ಹೋಲಿಕೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

“ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...