ಮತ ಹಾಕದವರಿಗೆ ತೆರಿಗೆ ಹೆಚ್ಚಿಸಿ ಶಿಕ್ಷೆ ನೀಡಿ: ನಟ ಪರೇಶ್ ರಾವಲ್ ಸಲಹೆ

Date:

ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಡೆಯುತ್ತಿದ್ದು, ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ಸೋಮವಾರ ಬೆಳಗ್ಗೆ ಮುಂಬೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಮತದಾನ ಮಾಡಿದ ನಂತರ, ರಾವಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು ಚುನಾವಣೆಯಲ್ಲಿ ಭಾಗವಹಿಸುವ ಮಹತ್ವವನ್ನು ಒತ್ತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ಸರ್ಕಾರ ಅದನ್ನು ಮಾಡಿಲ್ಲ, ಇದನ್ನು ಮಾಡಿಲ್ಲ ಎಂದು ಹೇಳುತ್ತೀರಿ. ನೀವು ಇಂದು ಮತದಾನ ಮಾಡದಿದ್ದರೆ, ಅದಕ್ಕೆ ನೀವು ಜವಾಬ್ದಾರರಾಗಿರುತ್ತೀರಿ, ಸರ್ಕಾರವಲ್ಲ” ಎಂದು ನಟ ಪರೇಶ್ ರಾವಲ್ ತಿಳಿಸಿದರು.

ಇದನ್ನು ಓದಿದ್ದೀರಾ?  ನೀವು ಮನುಷ್ಯನಾಗಿರಲೇ ಅಯೋಗ್ಯ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಗರಂ

ಹಾಗೆಯೇ ನಾಗರಿಕರು ತಮ್ಮ ಕರ್ತವ್ಯಗಳು ಪಾಲಿಸುವ ಜವಾಬ್ದಾರಿಯನ್ನು ಹೊರುವಂತೆ ಮನವಿ ಮಾಡಿದ ಅವರು, ಇದೇ ಸಂದರ್ಭದಲ್ಲಿ ಮತ ಚಲಾವಣೆ ಮಾಡದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತದಾನಕ್ಕೆ ಗೈರು ಹಾಜರಾಗುವವರಿಗೆ ದಂಡ ವಿಧಿಸುವಂತೆಯೂ ಸೂಚಿಸಿದರು. “ಮತ ಚಲಾಯಿಸದವರಿಗೆ ತೆರಿಗೆ ಹೆಚ್ಚಳ ಅಥವಾ ಇತರ ಶಿಕ್ಷೆಯಂತಹ ಕೆಲವು ನಿಬಂಧನೆಗಳು ಇರಬೇಕು” ಎಂದು ಅಭಿಪ್ರಾಯಿಸಿದರು.

ಮುಂಬೈನ ಆರು ಲೋಕಸಭಾ ಸ್ಥಾನಗಳಿಗೆ 5ನೇ ಹಂತಕ್ಕೆ ಚುನಾವಣೆ ನಡೆಯುತ್ತಿದೆ. ಇಂದು ಮುಂಬೈ ಉತ್ತರ, ಮುಂಬೈ ವಾಯುವ್ಯ, ಮುಂಬೈ ಈಶಾನ್ಯ, ಮುಂಬೈ ಉತ್ತರ ಮಧ್ಯ, ಮುಂಬೈ ದಕ್ಷಿಣ ಮತ್ತು ಮುಂಬೈ ದಕ್ಷಿಣ ಸೆಂಟ್ರಲ್‌ನಲ್ಲಿ ಮತದಾನ ನಡೆಯುತ್ತಿದೆ.

ಇದನ್ನು ಓದಿದ್ದೀರಾ?  ಆಂಧ್ರಪ್ರದೇಶ | ನೀತಿ ಸಂಹಿತೆ ಉಲ್ಲಂಘನೆ, ನಟ ಅಲ್ಲು ಅರ್ಜುನ್‌ ವಿರುದ್ಧ ಪ್ರಕರಣ ದಾಖಲು

ಅಕ್ಷಯ್ ಕುಮಾರ್, ಶಾಹಿದ್ ಕಪೂರ್, ಸನ್ಯಾ ಮಲ್ಹೋತ್ರಾ, ರಾಜ್‌ಕುಮಾರ್ ರಾವ್, ಕರೀನಾ ಕಪೂರ್, ಸೈಫ್ ಅಲಿ ಖಾನ್, ವರುಣ್ ಧವನ್, ಅಮಿರ್ ಖಾನ್, ಕಿರಣ್ ರಾವ್, ಮತ್ತು ಜಾನ್ವಿ ಕಪೂರ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಮುಂಬೈನ ತಮ್ಮ ತಮ್ಮ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...