ಬಹುಮತಕ್ಕೆ ‘ಇಂಡಿಯಾ’ ಒಕ್ಕೂಟ ಕಸರತ್ತು; ನಾನಾ ಪಕ್ಷಗಳೊಂದಿಗೆ ಮಾತುಕತೆ

Date:

ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ, ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ತನ್ನ ಸಂಖ್ಯೆಯನ್ನು ಹೆಚ್ಚಿಸಿ, ಬಹುಮತ ಸಾಬೀತು ಮಾಡಲು ಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಭಾಗವಾಗಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಎನ್. ಚಂದ್ರಬಾಬು ನಾಯ್ಡು ಅವರನ್ನು ಇಂಡಿಯಾ ಕೂಟಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈ ಎರಡೂ ಪಕ್ಷಗಳು ಈಗ ಸರ್ಕಾರ ರಚನೆಯಲ್ಲಿ ಸಂಭಾವ್ಯ ಕಿಂಗ್‌ಮೇಕರ್‌ಗಳಾಗಿವೆ. ಮೂಲಗಳ ಪ್ರಕಾರ, ಈ ಎರಡೂ ಪಕ್ಷಗಳು ‘ಇಂಡಿಯಾ’ಗೆ ಬೆಂಬಲ ನೀಡಿದರೆ, ನಿತೀಶ್‌ಗೆ ಉಪಪ್ರಧಾನಿ ಹುದ್ದೆ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಭರವಸೆ ನೀಡಲಾಗಿದೆ.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಮಂಗಳವಾರ ಟ್ವೀಟ್ ಮಾಡಿದರೆ, ಎನ್‌ಸಿಪಿ ನಾಯಕ ಶರದ್ ಪವಾರ್ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ಮತ್ತು ಇತರ ಇಂಡಿಯಾ ಬ್ಲಾಕ್ ನಾಯಕರು ಕುಮಾರ್ ಮತ್ತು ನಾಯ್ಡು ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ನಿತೀಶ್ ಅವರ ಜೆಡಿಯು 15 ಸ್ಥಾನಗಳನ್ನು ಮತ್ತು ನಾಯ್ಡು ಅವರ ಟಿಡಿಪಿ 12 ಸ್ಥಾನಗಳನ್ನು ಗೆದ್ದಿದೆ. ಈ ಇಬ್ಬರೂ ನಾಯಕರು ಮೈತ್ರಿ ಬದಲಿಸುವಲ್ಲಿ ಕುಖ್ಯಾತಿ ಗಳಿಸಿದ್ದಾರೆ. ಈ ಹಿಂದೆ, ಎರಡೂ ಪಕ್ಷಗಳು ಎನ್‌ಡಿಎ ತೊರೆದಿದ್ದವು. ಆದರೆ, 2024ರ ಲೋಕಸಭಾ ಚುನಾವಣೆಗೆ ಮುಂಚೆ ಎನ್‌ಡಿಎಗೆ ಮರಳಿವೆ. ಆದಾಗ್ಯೂ, ಜೆಡಿಯು ಮತ್ತು ಟಿಡಿಪಿ ಎರಡೂ ಪಕ್ಷದ ವಕ್ತಾರರು ‘ಇಂಡಿಯಾ’ಗೆ ಬಂಬಲ ನೀಡುವ ಯಾವುದೇ ಚಿಂತನೆ ಇಲ್ಲವೆಂದು ಹೇಳಿದ್ದಾರೆ. ಅದಾಗ್ಯೂ, ಎರಡೂ ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮ್ಮಿಶ್ರಕ್ಕೆ ಬೆಂಬಲ ನೀಡಿದರೆ ನಿತೀಶ್‌ಗೆ ಉಪಪ್ರಧಾನಿ ಹುದ್ದೆಯ ಭರವಸೆಯನ್ನು ‘ಇಂಡಿಯಾ’ ಕೂಟ ನೀಡಿದೆ. ನಾಯ್ಡು ಅವರಿಗೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವುದಾಗಿಯೂ ಹೇಳಿದೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ ಬೇಕೆಂಬುದು ಟಿಡಿಪಿಯ ಬಹುಕಾಲದ ಬೇಡಿಕೆ. ಹೀಗಾಗಿ, ಅದೇ ಭರವಸೆಯನ್ನೇ ‘ಇಂಡಿಯಾ’ ಟಿಡಿಪಿ ಮುಂದೆ ಇಟ್ಟಿದೆ.

“ನಾವು ಹಿಂದೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಇಬ್ಬರೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಬಿಜೆಪಿ ಪ್ರತಿನಿಧಿಸುವ ಸೇಡಿನ ರಾಜಕಾರಣದ ಬಗ್ಗೆ ಅವರು ಅಸಮ್ಮತಿ ಹೊಂದಿದ್ದಾರೆ. ಮೋದಿ ಅವರು ಹೊರಹೋಗುವ ಹಾದಿಯಲ್ಲಿದ್ದಾರೆ. ಕೇಂದ್ರದ ಬದಲಾವಣೆಯಲ್ಲಿ ಉಭಯ ನಾಯಕರು ನಿರ್ಣಾಯಕ ಪಾತ್ರ ವಹಿಸುತ್ತಾರೆ ಎಂಬ ಭರವಸೆ ನಮಗಿದೆ” ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮನೋಜ್ ಕುಮಾರ್ ಝಾ ಹೇಳಿದ್ದಾರೆ.

“ನಾನು ನಿತೀಶ್ ಕುಮಾರ್ ಅಥವಾ ಚಂದ್ರಬಾಬು ನಾಯ್ಡು ಅವರಿಗೆ ಮನವಿ ಮಾಡುತ್ತಿಲ್ಲ. ಅವರ ಮನೋಧರ್ಮದ ಬಗ್ಗೆ ನನಗಿರುವ ತಿಳುವಳಿಕೆಯನ್ನು ಗಮನಿಸಿದರೆ, ನಾನು ನನ್ನ ಭರವಸೆಯನ್ನು ವ್ಯಕ್ತಪಡಿಸುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಮೈತ್ರಿ ಪಕ್ಷಗಳು ಮತ್ತು ಮೈತ್ರಿಗೆ ಸೇರುವ ಹೊಸ ಪಾಲುದಾರರೊಂದಿಗೆ ಬುಧವಾರ ಮಾತುಕತೆ ನಡೆಸಲಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...