‘ಇಂಡಿಯಾ’ ಮೈತ್ರಿಕೂಟ ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ: ಸ್ಮೃತಿ ಇರಾನಿ

Date:

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟವು ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಕುಟುಂಬ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ಸ್ಮೃತಿ ಇರಾನಿ ಉದ್ಯಮಿಗಳ ಜೊತೆ ಸಂವಾದ ನಡೆಸಿದ್ದಾರೆ. ಬಳಿಕ ರ್‍ಯಾಲಿಯಲ್ಲಿ ಮಾತನಾಡಿದ ಅವರು ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ವಯನಾಡಿನಲ್ಲಿ (ಕಾಂಗ್ರೆಸ್ ನಾಯಕ) ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ ಬಳಿಕ ಕೆಲವು ಸಮಸ್ಯೆಗಳು ಎದುರಾಗಿವೆ. ಅವರು ದಕ್ಷಿಣ ಭಾರತದಿಂದ ಸ್ಪರ್ಧಿಸುತ್ತಿರುವುದಕ್ಕೆ ಎಡಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ಏಕೆ ಸ್ಪರ್ಧಿಸುತ್ತಿಲ್ಲವೆಂದು ಪ್ರಶ್ನಿಸಿದ್ದಾರೆ. ಆದರೆ, ಅದೇ ಎಡಪಕ್ಷದ ಸದಸ್ಯರು ದೆಹಲಿಗೆ ಹೋದಾಗ ಅವರನ್ನು ತಬ್ಬಿಕೊಳ್ಳುವುದು ಕಂಡುಬರುತ್ತದೆ. ಈಗ ದೆಹಲಿಯಲ್ಲಿ ಅಪ್ಪಿಕೊಳ್ಳುವುದು, ಕೇರಳದಲ್ಲಿ ಭಿಕ್ಷೆ ಬೇಡುವುದು, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುವುದು ಎಂಬ ಸ್ಥಿತಿ ಬಂದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಜೆ ನಡೆದ ಸಭೆಯಲ್ಲಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ಅವರು, “ಮಹಿಳೆಯರು ಗಂಭೀರ ರಾಜಕೀಯ ವಿಷಯಗಳತ್ತ ಗಮನ ಹರಿಸಬೇಕು. ರಾಜಕೀಯವನ್ನು ಗಂಭೀರವಾಗಿ ಪರಿಗಣಿಸುವ ಮಹಿಳೆಯರು ಮಾತ್ರ ಸಾಮಾಜಿಕ ಮತ್ತು ರಾಜಕೀಯವಾಗಿ ಮೇಲೆ ಏರಲು ಸಾಧ್ಯವಾಗುತ್ತದೆ. ಮತದಾನ ಮಾಡುವುದು ಮತ್ತು ನೀವು ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸುವುದು ಬಹಳ  ಮುಖ್ಯವಾದ ವಿಷಯ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...