‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ದೊರೆಯಲಿದೆ: ಸಿದ್ದರಾಮಯ್ಯ ವಿಶ್ವಾಸ

Date:

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ? ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ” ಎಂದರು.

ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ” ಎಂದು ಪ್ರಶ್ನಿಸಿದರು.

“ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು” ಎಂದರು.

ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್‌ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ಶಾಘಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...