295+ ಸ್ಥಾನಗಳಲ್ಲಿ ಗೆಲುವು ಖಚಿತ: ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

Date:

“ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದವು ಇಂಡಿಯಾ ಮೈತ್ರಿಕೂಟದ ಮೇಲಿದ್ದು, ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ” ಎಂದು ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಇಂದು ಅಂತಿಮ ಹಂತದ ಚುನಾವಣೆ ನಡೆಯುತ್ತಿದೆ. ಅಲ್ಲದೇ, ಜೂನ್ 4ರಂದು ಮತ ಎಣಿಕೆಗೆ ತಮ್ಮ ಕಾರ್ಯತಂತ್ರವನ್ನು ಚರ್ಚಿಸಲು ‘ಇಂಡಿಯಾ’ ಮೈತ್ರಿಕೂಟದ ಹಿರಿಯ ನಾಯಕರು ಇಂದು ದೆಹಲಿಯಲ್ಲಿರುವ ಖರ್ಗೆ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಸಭೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಭೆಯ ಬಳಿಕ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ಇಂದು ಹೆಚ್ಚಿನ ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ಪ್ರಸಾರ ಮಾಡುವಲ್ಲಿ ನಿರತವಾಗಿದೆ. ಎಕ್ಸಿಟ್ ಪೋಲ್‌ನಲ್ಲಿ ಭಾಗವಹಿಸಲು ಬಿಜೆಪಿ ಮತ್ತದರ ನಾಯಕರು ಉತ್ಸುಕದಲ್ಲಿದ್ದಾರೆ. ಆದರೆ ಈ ಸಮೀಕ್ಷೆಯ ಚರ್ಚೆಯಲ್ಲಿ ಭಾಗವಹಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಭಾಗವಹಿಸುತ್ತಿಲ್ಲ. ನಮ್ಮ ಮೈತ್ರಿಕೂಟಕ್ಕೆ ಜನರ ಆಶೀರ್ವಾದವು ಇರಲಿದೆ ಎಂಬ ನಂಬಿಕೆ ಇದೆ. ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ನಮಗಿದೆ” ಎಂದು ಹೇಳಿದರು.

“ಮತ ಎಣಿಕೆಯ ದಿನ ಅಂಚೆ ಮತ ಎಣಿಕೆಯ ವಿಚಾರವಾಗಿ ಕೆಲವೊಂದು ಸಲಹೆಗಳನ್ನು ನಾವು ಚುನಾವಣಾ ಆಯೋಗಕ್ಕೆ ನೀಡಬೇಕಿದೆ. ಹಾಗಾಗಿ, ನಾಳೆ ಭೇಟಿಗೆ ಸಮಯ ಕೇಳಿದ್ದೇವೆ” ಎಂದ ಮಲ್ಲಿಕಾರ್ಜುನ ಖರ್ಗೆ, “ಮತ ಎಣಿಕೆಯ ದಿನ ಕೊನೆಯ ಕ್ಷಣದವರೆಗೂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ನಮ್ಮ ಮೈತ್ರಿಕೂಟದ ಮುಖಂಡರು ಕಣ್ಣಿಟ್ಟಿರಬೇಕು” ಎಂದು ಸಲಹೆ ನೀಡಿದರು.

“ಇಂದಿನ ಸಭೆಯಲ್ಲಿ ಎಲ್ಲ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದಾರೆ. ಅವರೆಲ್ಲರಿಗೂ ನಾನು ಧನ್ಯವಾದ ತಿಳಿಸುತ್ತೇನೆ. ನಾವೆಲ್ಲರೂ ಒಂದಾಗಿದ್ದೇವೆ. ದಯವಿಟ್ಟು ನಮ್ಮ ನಡುವೆ ಬಿರುಕು ಉಂಟು ಮಾಡಲು ಪ್ರಯತ್ನಿಸಬೇಡಿ” ಎಂದು ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಪಂಜಾಬ್ ಸಿಎಂ ಭಗವಂತ್ ಮಾನ್, ಆಪ್ ಸಂಸದ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಸೇರಿದಂತೆ ಪ್ರತಿಪಕ್ಷಗಳ ಮೈತ್ರಿಕೂಟದ ಎಲ್ಲ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...