ಕೇಂದ್ರ ಬಜೆಟ್ ವಿರುದ್ಧ ಇಂದು ಸಂಸತ್ತಿನಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ

Date:

ಜುಲೈ 23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದು ಈ ಬಜೆಟ್‌ನಲ್ಲಿ ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳ ವಿರುದ್ಧ ‘ತಾರತಮ್ಯ’ ಮಾಡಿರುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟವು ಇಂದು (ಜುಲೈ 24) ಸಂಸತ್ತಿನಲ್ಲಿ ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆಯನ್ನು ನಡೆಸಲಿದೆ.

ಕೇಂದ್ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ತನ್ನ ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿ ಆಡಳಿತವಿರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮೀಸಲಾಗಿ ಬಹುತೇಕ ಯೋಜನೆಗಳನ್ನು ಘೋಷಿಸಿದೆ. ಕರ್ನಾಟಕ, ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳನ್ನು ಬಜೆಟ್‌ನಲ್ಲಿ ಕಡೆಗಣಿಸಲಾಗಿದೆ. ವಿಪಕ್ಷಗಳನ್ನು ಇದನ್ನು ತೀವ್ರವಾಗಿ ವಿರೋಧಿಸಿದೆ.

ಇಂಡಿಯಾ ಒಕ್ಕೂಟವು ಬಜೆಟ್ ವಿಚಾರದಲ್ಲಿಉನ್ನತ ಮಟ್ಟದ ಸಭೆ ನಡೆಸಿದ್ದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಉಭಯ ಸದನಗಳಲ್ಲಿ ಕಾಂಗ್ರೆಸ್‌ನ ಉಪನಾಯಕರಾದ ಪ್ರಮೋದ್ ತಿವಾರಿ ಮತ್ತು ಗೌರವ್ ಗೊಗೋಯ್, ಎನ್‌ಸಿಪಿ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾಗಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  Protestಕೇಂದ್ರ ಬಜೆಟ್ | ಬಿಜೆಪಿ ಮಿತ್ರರಾದ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ತಮ್ಮ ರಾಜ್ಯಕ್ಕೆ ಗಳಿಸಿದ್ದೇನು?

ಹಾಗೆಯೇ ಟಿಎಂಸಿಯ ಡೆರೆಕ್ ಓಬ್ರಿಯಾನ್ ಮತ್ತು ಕಲ್ಯಾಣ್ ಬ್ಯಾನರ್ಜಿ, ಡಿಎಂಕೆಯ ಟಿಆರ್ ಬಾಲು, ಜೆಎಂಎಂನ ಮಹುವಾ ಮಜಿ, ಎಎಪಿಯ ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್, ಸಿಪಿಐ(ಎಂ)ನ ಜಾನ್ ಬ್ರಿಟಾಸ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಬಜೆಟ್‌ನಲ್ಲಿರುವ ತಾರತಮ್ಯದ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ವೇಣುಗೋಪಾಲ್, “ಈ ವರ್ಷದ ಕೇಂದ್ರ ಬಜೆಟ್‌ ಈಗಾಗಲೇ ಬಜೆಟ್‌ನ ಪರಿಕಲ್ಪನೆಯನ್ನು ನಾಶಪಡಿಸಿದೆ. ಬಹುತೇಕ ರಾಜ್ಯಗಳ ವಿರುದ್ಧ ಸಂಪೂರ್ಣವಾಗಿ ತಾರತಮ್ಯ ಮಾಡಲಾಗಿದೆ. ಆದ್ದರಿಂದ ಇಂಡಿಯಾ ಒಕ್ಕೂಟವು ಈ ಬಜೆಟ್ ವಿರುದ್ಧ ಪ್ರತಿಭಟಿಸುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

ತಮ್ಮ ಪ್ರತಿಭಟನೆಯ ಭಾಗವಾಗಿ ವಿಪಕ್ಷ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಜುಲೈ 27ರಂದು ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ. “ಈ ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ನಿಜ, ತಾರತಮ್ಯದ ಬಣ್ಣಗಳನ್ನು ಮರೆಮಾಡಲು ವಿನ್ಯಾಸಗೊಳಿಸಲಾದ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ” ಎಂದು ವೇಣುಗೋಪಾಲ್ ತಿಳಿಸಿದರು.

 

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...