ಬಿಹಾರ ಸೀಟು ಹಂಚಿಕೆ: ಇಂಡಿಯಾ ಒಕ್ಕೂಟದಿಂದ ಸಮನ್ವಯ ಸಮಿತಿ ಸಭೆ

Date:

ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡುವ ವಿಚಾರವನ್ನು ಚರ್ಚಿಸಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟವು ಶನಿವಾರ(ಜುಲೈ 12) ಸಮನ್ವಯ ಸಮಿತಿ ಸಭೆಯನ್ನು ನಡೆಸಲಿದೆ.ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗಳು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿವೆ.

ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ನೇತೃತ್ವದಲ್ಲಿ ನಡೆಯುವ ಐದನೇ ಇಂಡಿಯಾ ಒಕ್ಕೂಟದ ಸಮನ್ವಯ ಸಮಿತಿಯ ಸಭೆ ಇದಾಗಿದೆ. ವಿರೋಧ ಪಕ್ಷದ ಮೈತ್ರಿಕೂಟದಲ್ಲಿ ಆರ್‌ಜೆಡಿ, ಕಾಂಗ್ರೆಸ್, ಸಿಪಿಐ (ಎಂಎಲ್), ಸಿಪಿಐ, ಸಿಪಿಐ (ಎಂ) ಮತ್ತು ವಿಐಪಿ ಸೇರಿವೆ. ಮಾಜಿ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಪಶುಪತಿ ಕುಮಾರ್ ಪರಾಸ್ ಶನಿವಾರ ವಿರೋಧ ಪಕ್ಷದ ಒಕ್ಕೂಟಕ್ಕೆ ಸೇರುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ‘ಇಂಡಿಯಾ’ ಒಕ್ಕೂಟ ಬಿರುಕು ಬಿಟ್ಟಿತೆ; ಕಾಂಗ್ರೆಸ್‌ ಏಕಾಂಗಿ ಹೋರಾಟ ಸಾಧ್ಯವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಜೂನ್ 12ರಂದು ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಈ ಸಭೆಯಲ್ಲಿ 2020ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ನಿರ್ದಿಷ್ಟ ಸ್ಥಾನದಲ್ಲಿ ಸೋಲಿನ ಅಂತರ 15,000ಕ್ಕಿಂತ ಹೆಚ್ಚು ಮತಗಳಾಗಿದ್ದರೆ ಪಕ್ಷ ಮತ್ತು ಅಭ್ಯರ್ಥಿಯನ್ನು ಬದಲಾಯಿಸಲಾಗುವುದು ಎಂದು ನಿರ್ಧರಿಸಲಾಗಿದೆ. ಎಲ್ಲಾ ಮಿತ್ರಪಕ್ಷಗಳು ತಾವು ಸ್ಪರ್ಧಿಸಲು ಬಯಸುವ ಸಂಭಾವ್ಯ ಸ್ಥಾನಗಳ ಪಟ್ಟಿಯನ್ನು ನೀಡಬೇಕೆಂದು ಸಹ ನಿರ್ಧರಿಸಲಾಗಿದೆ.

ಈ ಹಿಂದೆ ನಡೆದ ಸಮನ್ವಯ ಸಮಿತಿಯಲ್ಲಿ ಸೀಟು ಹಂಚಿಕೆ ವಿಷಯದ ಕುರಿತು ಯಾವುದೇ ಔಪಚಾರಿಕ ಮಾತುಕತೆ ನಡೆದಿಲ್ಲ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ರಾಮ್ ನರೇಶ್ ಪಾಂಡೆ ಹೇಳಿದ್ದಾರೆ. ಇನ್ನು ಈಗಾಗಲೇ ವಿಐಪಿ ಮುಖ್ಯಸ್ಥ ಮುಖೇಶ್ ಸಹಾನಿ ಈಗಾಗಲೇ 60 ಸ್ಥಾನಗಳು ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡುವ ಮೂಲಕ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ. ಜತೆಗೆ ಬಿಹಾರದಲ್ಲಿ ನಿಶಾದ್ (ಮೀನುಗಾರ) ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಮೀಸಲಾತಿ ನೀಡಿದರೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡುವುದಾಗಿಯೂ ವಾದಿಸಿದ್ದಾರೆ.

ಸಿಪಿಐ (ಎಂಎಲ್) ಕೂಡ 40-45 ಸ್ಥಾನಗಳಲ್ಲಿ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ಆರ್‌ಜೆಡಿ ಸ್ಪರ್ಧಿಸಿದ ಒಟ್ಟು 144 ಸ್ಥಾನಗಳಲ್ಲಿ 75 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಸ್ಪರ್ಧಿಸಿದ 70 ಸ್ಥಾನಗಳಲ್ಲಿ 19 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ಎಎಪಿ ಮಾತ್ರ ಪ್ರತ್ಯೇಕವಾಗಿ ಸ್ಪರ್ಧಿಸುವುದಾಗಿ ಈಗಾಗಲೇ ಘೋಷಿಸಿದೆ.

ಇನ್ನು ಇವೆಲ್ಲವುದರ ನಡುವೆ ಬಿಹಾರದಲ್ಲಿ ಇತ್ತೀಚೆಗೆ ಚುನಾವಣಾ ಆಯೋಗ ನಡೆಸಲು ಆರಂಭಿಸಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಇಂಡಿಯಾ ಒಕ್ಕೂಟ ಒಗ್ಗಟ್ಟಿನಿಂದ ಪ್ರತಿಭಟಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...