ಬಿಜೆಪಿ ಆಳ್ವಿಕೆಯಲ್ಲಿ ಭಾರತ ನಿಜವಾಗಿಯೂ ಸ್ವತಂತ್ರವಾಗಿಲ್ಲ: ಮಮತಾ ಬ್ಯಾನರ್ಜಿ

Date:

ಸುಮಾರು ಎಂಟು ದಶಕಗಳ ಹಿಂದೆ ಬ್ರಿಟಿಷ್ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದಿದೆ. ಆದರೆ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶ ನಿಜವಾಗಿಯೂ ಸ್ವತಂತ್ರವಾಗಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬ್ಯಾನರ್ಜಿ, “ಬಿಜೆಪಿಯು ಜನರ ಮತದಾನದ ಹಕ್ಕುಗಳು, ವಾಕ್ ಸ್ವಾತಂತ್ರ್ಯ ಮತ್ತು ಇತರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಭಾರತ 78 ವರ್ಷಗಳ ಹಿಂದೆ ಸ್ವಾತಂತ್ರ್ಯ ಪಡೆದಿದ್ದರೂ, ಫ್ಯಾಸಿಸ್ಟ್ ಬಿಜೆಪಿಯ ಆಳ್ವಿಕೆಯಲ್ಲಿ ಜನರು ನಿಜವಾಗಿಯೂ ಸ್ವತಂತ್ರರಾಗಿಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ? ‘ನನ್ನ ಹಾಗೂ ಅಭಿಷೇಕ್ ಬ್ಯಾನರ್ಜಿ ಜೀವಕ್ಕೆ ಬಿಜೆಪಿಯಿಂದ ಅಪಾಯ’: ಮಮತಾ ಬ್ಯಾನರ್ಜಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಜವಾದ ಸ್ವಾತಂತ್ರ್ಯವನ್ನು ಸಾಧಿಸುವ ಕನಸಿನೊಂದಿಗೆ ನಾವು ಕೋಮು ಸಾಮರಸ್ಯ ಮತ್ತು ರಾಷ್ಟ್ರೀಯ ಏಕೀಕರಣಕ್ಕಾಗಿ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದೂ ತಿಳಿಸಿದ್ದಾರೆ.

ಇನ್ನು ಬಿಜೆಪಿ ವಿರುದ್ಧದ ತಮ್ಮ ಹಿಂದಿನ ಆರೋಪಗಳನ್ನು ಪುನರುಚ್ಚರಿಸಿದ ಮುಖ್ಯಮಂತ್ರಿ, “ತಮ್ಮ ರಾಜ್ಯದ ಜನರು 100 ದಿನಗಳ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ವೇತನವನ್ನು ಪಡೆಯುತ್ತಿಲ್ಲ. ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರು ಇತರ ರಾಜ್ಯಗಳಲ್ಲಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದಾರೆ.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಪರೋಕ್ಷವಾಗಿ ನಡೆಸಲು ಯತ್ನಿಸಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಈ ಪ್ರಯತ್ನ ಮಾಡುತ್ತಿದೆ” ಎಂದು ಬ್ಯಾನರ್ಜಿ ಪ್ರತಿಪಾದಿಸಿದರು.

ಬಂಗಾಳಿ ಮಾತನಾಡುವ ಕೆಲವು ವಲಸೆ ಕಾರ್ಮಿಕರನ್ನು ನೆರೆಯ ದೇಶದ ನಾಗರಿಕರು ಮತ್ತು ಅಕ್ರಮ ವಲಸಿಗರು ಎಂಬ ನೆಪದಲ್ಲಿ ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ ಎಂದೂ ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...