‘ಇಂಡಿಯಾ’ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ: ಡಿಎಂಕೆ ಸಚಿವರ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Date:

ಸನಾತನ ಧರ್ಮ ನಿರ್ಮೂಲನೆ ಕುರಿತಾದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಸಂಸದ ಎ ರಾಜಾ ಹೇಳಿಕೆಗಳಿಗೆ ಕುರಿತಂತೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ ಎಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸರ್ಮ ಧರ್ಮಗಳ ಬಗ್ಗೆ ಸಮಾನ ಗೌರವದ ಭಾವನೆ ಹೊಂದಿದೆ. ಒಂದು ಧರ್ಮಕ್ಕಿಂತ ಮತ್ತೊಂದು ಧರ್ಮ ಕೀಳು ಎಂದು ಯಾರೊಬ್ಬರೂ ಭಾವಿಸಬಾರದು. ಅಂತಹ ಹೇಳಿಕೆಗಳನ್ನು ಕಾಂಗ್ರೆಸ್ ನಂಬುವುದಿಲ್ಲ ಎಂದು ತಿಳಿಸಿದ್ದಾರೆ.

ಇಂಡಿಯಾ ಒಕ್ಕೂಟದ ಪ್ರತಿಯೊಬ್ಬ ಸದಸ್ಯನೂ ಎಲ್ಲ ಸಮುದಾಯ, ಧರ್ಮ ಮತ್ತು ನಂಬಿಕೆಗಳ ಬಗ್ಗೆ ಗೌರವ ಹೊಂದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅನ್ನು ಸೋಲಿಸುವ ಉದ್ದೇಶದಿಂದ ವಿಪಕ್ಷಗಳು ರಚಿಸಿಕೊಂಡಿರುವ ‘ಇಂಡಿಯಾ’ ಒಕ್ಕೂಟದಲ್ಲಿ ಡಿಎಂಕೆ ಸಹ ಇದೆ ಎಂದು ಪವನ್ ಖೇರಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ, ಇಂಡಿಯಾ, ಭಾರತ್ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿರುವ ಪವನ್ ಖೇರಾ, ಭಾರತ ಒಟ್ಟಾಗಿರುವುದನ್ನು ಕೆಲ ಶಕ್ತಿಗಳು ಸಹಿಸುವುದಿಲ್ಲ. ಹಾಗಾಗಿ, ಇಂಡಿಯಾ ಮತ್ತು ಭಾರತ ಎಂದು ಬಿರುಕು ಮೂಡಿಸುತ್ತಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

‘ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ, ಕೊರೊನಾ ರೋಗ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಉದಯನಿಧಿ ಹೇಳಿದ್ದರು.

ತಮಿಳುನಾಡಿನ ಸಂಸದ ಎ ರಾಜಾ, ಸನಾತನ ಧರ್ಮ ಎಚ್‌ಐವಿ, ಕುಷ್ಠ ರೋಗ ಇದ್ದಂತೆ. ಉದಯನಿಧಿ ಹೇಳಿಕೆ ಸರಿಯಾಗಿಯೆ ಇದೆ ಎಂದು ಸಮರ್ಥಿಸಿಕೊಂಡಿದ್ದರು.

ಉದಯನಿಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಇತರ ಸಚಿವರು ಪ್ರತಿಕ್ರಿಯಿಸಿದ ರೀತಿಯ ಕುರಿತು ತಮಿಳುನಾಡು ಸಿಎಂ ಸ್ಟಾಲಿನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಗೆ ಪತ್ರ ಬರೆದಿರುವ ಎಂ ಕೆ ಸ್ಟಾಲಿನ್, ನನ್ನ ಮಗ ಎಲ್ಲಿಯೂ ‘ಜನಾಂಗೀಯ ಹತ್ಯೆ’ ಪದವನ್ನು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಬಳಸಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ದಬ್ಬಾಳಿಕೆಯ ತತ್ವಗಳ ವಿರುದ್ಧ ಉದಯನಿಧಿ ಅವರ ನಿಲುವನ್ನು ಸಹಿಸಲಾಗದ ಬಿಜೆಪಿ ಪರ ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸಿ, ಸನಾತನ ಚಿಂತನೆಯುಳ್ಳ ಜನರ ಹತ್ಯೆಗೆ ಉದಯನಿಧಿ ಕರೆ ನೀಡಿದ್ದಾರೆ ಎಂದು ಸ್ಟಾಲಿನ್ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...