ಹಜ್ 2024 | 1.75 ಲಕ್ಷ ಭಾರತೀಯ ಹಜ್ ಯಾತ್ರಿಕರಿಗೆ ಅವಕಾಶ ಕಲ್ಪಿಸಿದ ಸೌದಿ ಅರೇಬಿಯಾ

Date:

ಭಾರತ ಮತ್ತು ಸೌದಿ ಅರೇಬಿಯಾ ಭಾನುವಾರ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ್ದು, ಅದರ ಅಡಿಯಲ್ಲಿ 2024ರಲ್ಲಿ ಮುಸ್ಲಿಮರ ಪವಿತ್ರ ಹಜ್ ಯಾತ್ರೆಗಾಗಿ 1,75,025 ಭಾರತೀಯ ಹಜ್ ಯಾತ್ರಿಕರಿಗೆ ಸೌದಿ ಅರೇಬಿಯಾ ಅವಕಾಶ ಕಲ್ಪಿಸಿದೆ.

ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ ಮುರಳೀಧರನ್ ಅವರು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವ ಡಾ. ತೌಫಿಕ್ ಬಿನ್ ಫೌಜಾನ್ ಜೊತೆಗೆ ಜಿದ್ದಾದಲ್ಲಿ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದರು.

ಅಧಿಕೃತ ಹೇಳಿಕೆಯ ಪ್ರಕಾರ, 2024ಕ್ಕೆ ಭಾರತದ ಒಟ್ಟು 1,75,025 ಯಾತ್ರಾರ್ಥಿಗಳಿಗೆ ಕೋಟಾ ಅಂತಿಮಗೊಳಿಸಲಾಗಿದೆ. ಇವುಗಳ ಪೈಕಿ 1,40,020 ಆಸನಗಳನ್ನು ಹಜ್ ಸಮಿತಿ ಹಾಗೂ 35,005 ಯಾತ್ರಾರ್ಥಿಗಳಿಗೆ ಖಾಸಗಿ ನಿರ್ವಾಹಕರ ಮೂಲಕ ಯಾತ್ರೆ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ ಮತ್ತು ಸೌದಿ ಅರೇಬಿಯಾ ನಡುವಿನ ದ್ವಿಪಕ್ಷೀಯ ಹಜ್ ಒಪ್ಪಂದಕ್ಕೆ ಸಹಿ ಹಾಕಿರುವುದಕ್ಕೆ ಸಂತೋಷವಾಗಿದೆ. ಸೌದಿ ಅರೇಬಿಯಾ ಹಾಗೂ ಭಾರತದ ಆಸಕ್ತಿಯ ವಿಷಯಗಳ ಬಗ್ಗೆ ಹಜ್ ಮತ್ತು ಉಮ್ರಾ ವ್ಯವಹಾರಗಳ ಸೌದಿ ಸಚಿವರ ಜೊತೆಗೆ ಚರ್ಚಿಸಲಾಯಿತು” ಎಂದು ಸಚಿವೆ ಸ್ಮೃತಿ ಇರಾನಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.


ಕಳೆದ ವರ್ಷ ವು ಹಜ್ ಯಾತ್ರೆಯ ನಿಯಮದಲ್ಲಿ ಕೆಲ ಬದಲಾವಣೆ ತಂದಿತ್ತು. ಅದರ ಪ್ರಕಾರ, ಮಹಿಳೆಯರು ಯಾವುದೇ ಪುರುಷ ರಕ್ಷಕನಿಲ್ಲದೆ ಹಜ್ ಯಾತ್ರೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಈ ವಿಚಾರವನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಸಚಿವೆ ಇರಾನಿ, “”ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸುವ ನಮ್ಮ ಪ್ರಸ್ತಾಪವು ನಮ್ಮ ಬದ್ಧತೆಯನ್ನು ಮತ್ತಷ್ಟು ಒತ್ತಿ ಹೇಳುತ್ತದೆ” ಎಂದು ತಿಳಿಸಿದ್ದಾರೆ.

ಸೌದಿಯೊಂದಿಗಿನ ಮಾತುಕತೆಯ ವೇಳೆ ಎಲ್ಲ ಯಾತ್ರಿಕರ ಸಮಗ್ರ ಯೋಗಕ್ಷೇಮವನ್ನು ಖಾತ್ರಿಪಡಿಸುವ, ವೈದ್ಯಕೀಯ ಸೌಲಭ್ಯಗಳ ವರ್ಧನೆಯ ಯೋಜನೆಗಳನ್ನು ಚರ್ಚೆಗಳು ಒಳಗೊಂಡಿತ್ತು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.

ಇರಾನಿ ಮತ್ತು ಮುರಳೀಧರನ್ ಜೆದ್ದಾದ ಕಿಂಗ್ ಅಬ್ದುಲ್ ಅಝೀಝ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಜ್ ಟರ್ಮಿನಲ್‌ಗೆ ಭೇಟಿ ನೀಡಿ, ಯಾತ್ರಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೇವೆಗಳನ್ನು ಸೌದಿಯ ನಿಯೋಗದೊಂದಿಗೆ ಪರಿಶೀಲಿಸಿದರು.

ಇರಾನಿ ಮತ್ತು ಮುರಳೀಧರನ್ ಎರಡು ದಿನಗಳ ಭೇಟಿಗಾಗಿ ಭಾನುವಾರ ಸೌದಿಗೆ ತೆರಳಿದ್ದಾರೆ. ಜೆದ್ದಾ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಡಾ. ಸುಹೇಲ್ ಖಾನ್, ಕಾನ್ಸುಲ್ ಜನರಲ್ ಮೊಹಮ್ಮದ್ ಶಾಹಿದ್ ಮತ್ತು ಸೌದಿ ಹಜ್ ಮತ್ತು ಉಮ್ರಾ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...