ಕೆನಡಾದಲ್ಲಿ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

Date:

ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದಲ್ಲಿ ವೀಸಾ ಸೇವೆಗಳನ್ನು ಭಾರತ ಸರ್ಕಾರ ಸ್ಥಗಿತಗೊಳಿಸಿದೆ.

“ಭಾರತೀಯ ರಾಯಭಾರಿ ಕಚೇರಿಯಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ, 21ನೇ ಸೆಪ್ಟೆಂಬರ್ 2023 ರಿಂದ ಜಾರಿಗೆ ಬರುವಂತೆ, ಮುಂದಿನ ಸೂಚನೆ ಬರುವವರೆಗೆ ಭಾರತೀಯ ವೀಸಾ ಸೇವೆಗಳನ್ನು ಅಮಾನತುಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ಬಿಎಲ್‌ಎಸ್ ವೆಬ್‌ಸೈಟ್ ಪರಿಶೀಲಿಸುತ್ತಿರಿ” ಎಂಬ ಸಂದೇಶ ಕೆನಡಾದ ಭಾರತೀಯ ವೀಸಾ ಕೇಂದ್ರದ ಅಧಿಕೃತ ವೆಬ್‌ಸೈಟ್‌ನಿಂದ ಪ್ರಕಟಿಸಲಾಗಿದೆ.

ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ಭಾರತದ ವಿರುದ್ಧ ಆರೋಪಿಸಿದ ಮೂರು ದಿನಗಳ ನಂತರ ಈ ಬೆಳವಣಿಗೆಗಳು ಸಂಭವಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

ಕೆನಡಾದ ಪ್ರಧಾನಿ ಟ್ರುಡೊ ಅವರು ಸೋಮವಾರ ಮಾತನಾಡಿ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು.

ಕೆನಡಾದ ಸರ್ರೆಯ ಗುರುನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಕೆನಡಾದ ಪ್ರಜೆಯ ಹತ್ಯೆಯನ್ನು ಭಾರತ ಸರ್ಕಾರದ ಏಜೆಂಟರು ನಡೆಸಿದ್ದಾರೆ ಎಂದು ನಂಬಲು ನಮ್ಮ ದೇಶದ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಪುರಾವೆಗಳನ್ನು ಹೊಂದಿದ್ದಾರೆ ಎಂದು ಟ್ರೂಡೊ ಹೇಳಿದ್ದಾರೆ.

ಕೆನಡಾ ಮಾಡಿದ ಆರೋಪಗಳಿಗೆ ಪ್ರತ್ಯುತ್ತರ ನೀಡಿದ ಭಾರತ ಸರ್ಕಾರ, ಆರೋಪವು “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ಹೇಳಿಕೆಯಲ್ಲಿ, “ನಾವು ತಮ್ಮ ಸಂಸತ್ತಿನಲ್ಲಿ ಕೆನಡಾದ ಪ್ರಧಾನಿಯವರ ಹೇಳಿಕೆಯನ್ನು ನೋಡಿದ್ದು, ಇದನ್ನು ತಿರಸ್ಕರಿಸಿದ್ದೇವೆ. ಅಲ್ಲದೆ ಅವರ ವಿದೇಶಾಂಗ ಸಚಿವರ ಹೇಳಿಕೆಯನ್ನು ಸಹ ತಿರಸ್ಕರಿಸಿದ್ದೇವೆ” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...