ಭಾರತ v/s ಬಾಂಗ್ಲಾ ಕ್ರಿಕೆಟ್: ಗ್ವಾಲಿಯರ್ ಬಂದ್‌ಗೆ ಹಿಂದು ಮಹಾಸಭಾ ಕರೆ

Date:

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್ 6ರಂದು ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್‌ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿಂದು ಮಹಾಸಭಾ, ಕ್ರಿಕೆಟ್‌ ಪಂದ್ಯವನ್ನು ವಿರೋಧಿಸಿ, ಅಂದು (ಅ.6) ಗ್ವಾಲಿಯರ್ ಬಂದ್‌ಗೆ ಕರೆಕೊಟ್ಟಿದೆ.

“ಅಕ್ಟೋಬರ್ 6 ರಂದು ಗ್ವಾಲಿಯರ್‌ನಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ಕ್ರಿಕೆಟ್ ಪಂದ್ಯವನ್ನು ಹಿಂದು ಮಹಾಸಭಾ ವಿರೋಧಿಸುತ್ತದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ಇನ್ನೂ ನಡೆಯುತ್ತಿವೆ. ಬಾಂಗ್ಲಾದೇಶದೊಂದಿಗೆ ಕ್ರಿಕೆಟ್ ಪಂದ್ಯ ಆಡುವುದು ಸರಿಯಲ್ಲ” ಎಂದು ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ಹೇಳಿದ್ದಾರೆ.

ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಬಾಂಗ್ಲಾ ಯುವಜನರು ಪ್ರತಿಭಟನೆಗೆ ಇಳಿದಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಾಂಗ್ಲಾ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಬಾಂಗ್ಲಾ ಸೇನೆ ಸರ್ಕಾರ ಮುನ್ನಡೆಸುತ್ತಿದೆ. ಪ್ರತಿಭಟನೆ-ಹಿಂಸಾಚಾರದ ವೇಳೆ, ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ಕೆಲವು ದಾಳಿಗಳು ನಡೆದಿವೆ. ಆದರೆ, ಅಲ್ಲಿ ಹಿಂದುಗಳು ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ದಾಳಿಗಳು ನಡೆದಿಲ್ಲ. ಬದಲಾಗಿ, ನಿರ್ಗಮಿತ ಪ್ರಧಾನಿ ಶೇಖ್ ಹಸೀನಾ ಅವರ ಬೆಂಬಲಿಗರಾಗಿದ್ದರು ಎಂಬ ಕಾರಣಕ್ಕೆ ಉದ್ರಿಕ್ತ ಗುಂಪುಗಳು ದಾಳಿ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಬಾಂಗ್ಲಾ ಹಿಂದೂಗಳ ಸಂಕಟ: ದಿಟವೆಷ್ಟು, ಸಟೆಯೆಷ್ಟು?

ದಾಳಿಗಳಿಂದ ಹಿಂದುಗಳನ್ನು ಅಲ್ಲಿನ ಸ್ಥಳೀಯ ಮುಸಲ್ಮಾನರೇ ರಕ್ಷಿಸುತ್ತಿದ್ದಾರೆ. ದೇವಾಲಯಗಳಿಗೂ ಮುಸ್ಲಿಮರೇ ರಕ್ಷಣೆಯನ್ನೂ ನೀಡುತ್ತಿದ್ದಾರೆ. ಹಿಂದು ಕುಟುಂಬಗಳ ಮೇಲಿನ ಬಹುತೇಕ ದಾಳಿಗಳು, ಲೂಟಿಗಳು, ಈ ಹಿಂದು ಕುಟುಂಬಗಳು ಶೇಖ್ ಹಸೀನಾಗೆ ಬೆಂಬಲ ನೀಡಿದ್ದಕ್ಕಾಗಿ ಜರುಗಿವೆ. ಹಳೆಯ ಆಸ್ತಿ ವಿವಾದಗಳ ಹಗೆಯನ್ನೂ ಇದೇ ಸಂದರ್ಭದಲ್ಲಿ ತೀರಿಸಿಕೊಳ್ಳಲಾಗಿದೆ.

ಅಲ್ಲದೆ, ಬಾಂಗ್ಲಾದೇಶದ ಹಿಂದುಗಳ ಮೇಲೆ ಅತ್ಯಾಚಾರಗಳು ಜರುಗಿವೆ ಎಂದು ಸಾರುವ ಬಹುತೇಕ ಫೇಕ್ ಪೋಸ್ಟ್‌ಗಳು ಭಾರತ ಮೂಲದವು ಎಂಬುದನ್ನು ಫ್ಯಾಕ್ಟ್ ಚೆಕರ್‌ಗಳು ಬಯಲಿಗೆಳಿದ್ದಾರೆ. ವದಂತಿಗಳ ಒಂದಷ್ಟು ಪ್ರಮಾಣ ಬಾಂಗ್ಲಾದೇಶದ ಒಳಗಿನಿಂದಲೂ ಹಬ್ಬಿರುವುದನ್ನು ಪತ್ತೆ ಹಚ್ಚಿದ್ದಾರೆ. ಹಿಂದೂಗಳ ಮನೆಗಳ ಜೊತೆಗೆ ಮುಸಲ್ಮಾನರ ಮನೆಗಳಿಗೂ ಬೆಂಕಿ ಹಚ್ಚಲಾಗಿದೆ ಎಂದು ಗಮನ ಸೆಳೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...