ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್ ಡಿ ಕುಮಾರಸ್ವಾಮಿ ಕಿಡಿ

Date:

ಒಂದೇ ದಿನದ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಕೆರೆಯಂತೆ ಆಗಿದ್ದು, ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, “ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್‌ನಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ” ಎಂದು ದೂರಿದ್ದಾರೆ.

“ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ” ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರಿಗೆ-ಸರ್ಕಾರಕ್ಕೆ ಸವಾಲಾಗಿರುವ ಸೈಬರ್ ಕ್ರೈಮ್

ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ : ಜೆಡಿಎಸ್

ಹೆಚ್‌ ಡಿ ದೇವೇಗೌಡ ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್‌ ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್ ಬೆಂಗಳೂರು. ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್ ನಲ್ಲಿ ಬ್ಯುಸಿಯಾಗಿದ್ದಾರೆ. ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂದು ಎಂದು ಜೆಡಿಎಸ್‌ ಟ್ವೀಟ್‌ ಮಾಡಿ ಟೀಕಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...