ಡಿಸಿಎಂ ಡಿ.ಕೆ ಶಿವಕುಮಾರ್‌ ಭೇಟಿಯಾದ ದಾವಣಗೆರೆ ಜಿಲ್ಲೆಯ ಪ್ರಭಾವಿ ಲಿಂಗಾಯತ ನಾಯಕರು

Date:

ದಾವಣಗೆರೆ ಜಿಲ್ಲೆಯ ಇಬ್ಬರು ಪ್ರಭಾವಿ ರಾಜಕೀಯ ನಾಯಕರಾದ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಮತ್ತು ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರು ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿದ್ದ ಸಿದ್ದೇಶರ ಮತ್ತು ಬಿ.ಪಿ.ಹರೀಶ್, ಯಡಿಯೂರಪ್ಪ ಕುಟುಂಬದ ಕಡು ವಿರೋಧಿಗಳಾಗಿ ಗುರುತಿಸಿಕೊಂಡವರು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಸೋಲಲು, ಯಡಿಯೂರಪ್ಪನವರ ಹೊಂದಾಣಿಕೆ ರಾಜಕೀಯವೇ ಕಾರಣ ಎಂದು ಇಬ್ಬರು ನಾಯಕರು ನೇರವಾಗಿ ಆರೋಪಿಸಿದ್ದವರು.

ಈಗ ಇಬ್ಬರು ನಾಯಕರು ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಒಂದು ಕಡೆ, ಜಾತಿಗಣತಿ ವರದಿಯ ಸುತ್ತ ಸಿಕ್ಕಾಪಟ್ಟೆ ರಾಜಕೀಯ ನಡೆಯುತ್ತಿರುವ ಸಂದರ್ಭದಲ್ಲಿ ಲಿಂಗಾಯತ ಸಮುದಾಯದ ಈ ಇಬ್ಬರು ನಾಯಕರು ಡಿಸಿಎಂ ಭೇಟಿಯಾಗಿರುವುದಕ್ಕೂ ಒಂದಕ್ಕೊಂದು ಸಂಬಂಧ ಇದೆಯಾ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ, ಏನೇ ರಾಜಕೀಯ ಚಟುವಟಿಕೆ ನಡೆದರೂ, ಇದೊಂದು ಸೌಜನ್ಯದ ಭೇಟಿ ಎಂದು ಹೇಳುವುದು ರಾಜಕೀಯದಲ್ಲಿ ಸಾಮಾನ್ಯ. ಆದರೆ, ಫೋಟೋ ಶೇರ್ ಮಾಡಿಕೊಂಡ ಡಿ.ಕೆ.ಶಿವಕುಮಾರ್ ಅವರು ಇದೊಂದು ಸೌಜನ್ಯದ ಭೇಟಿ ಎಂದು ಹೇಳದೇ ಇರುವುದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ದಾವಣಗೆರೆಯಲ್ಲಿ ಸಿದ್ದೇಶ್ವರ ಅವರ ಆಪ್ತ ಗುತ್ತಿಗೆದಾರರೊಬ್ಬರ ಪೂರ್ಣಗೊಳಿಸಿರುವ ಕಾಮಗಾರಿಯ ಬಿಲ್ ತುಂಬಾ ದಿನಗಳಿಂದ ಬಾಕಿ ಉಳಿದಿರುವ ಹಿನ್ನಲೆಯಲ್ಲಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು ಎಂದು ಸಹ ತಿಳಿದುಬಂದಿದೆ.‌

ಡಿ ಕೆ ಶಿವಕುಮಾರ್ 2 8

ಬಿ ವೈ ರಾಘವೇಂದ್ರ ಭೇಟಿ

ಬಿಜೆಪಿ ಮುಖಂಡ, ಸಂಸದ ಬಿ ವೈ ರಾಘವೇಂದ್ರ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಖಾಸಗಿ ಕಾರ್ಯಕ್ರಮಕ್ಕೆ ಡಿಸಿಎಂ ಅವರನ್ನು ಆಹ್ವಾನಿಸಲು ಬಂದಿದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...