ಮಾಹಿತಿ ಸೋರಿಕೆ | ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

Date:

ಕಡತದ ಮಾಹಿತಿ ಹಿನ್ನೆಲೆಯಲ್ಲಿ ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ ಸ್ಪೆಷಲ್ ಎಸ್​ಐಟಿ ಐಜಿಪಿ ಎಂ.ಚಂದ್ರಶೇಖರ್ ಅವರು ಡಿಜಿ-ಐಜಿಪಿ ಅಲೋಕ್ ಮೋಹನ್ ಮತ್ತು ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಮನೀಶ್​ ಅವರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, ಎಂಟು ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ.

ಈ ಹಿನ್ನೆಲೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದೆ ವಿಚಾರ ಆಗಸ್ಟ್ 7 ರಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿ ಪ್ರಸಾರವಾದ ಬಳಿಕ, ಅಗಸ್ಟ್​ 20 ರಂದು ರಾಜ್ಯಪಾಲರು, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಪತ್ರ ಬರೆದು ಮಾಹಿತಿ ಹೇಗೆ ಸೋರಿಕೆ ಆಯ್ತು ಅಂತ ವರದಿ ಕೇಳಿದ್ದರು. ಈ ಬಗ್ಗೆ ಆಂತರಿಕ ತನಿಖೆ ನಡೆಸಿದ ಲೋಕಾಯುಕ್ತ, ಸಂಸ್ಥೆಯಲ್ಲಿ ಯಾವುದೇ ಮಾಹಿತಿ ಸೋರಿಕೆ ಆಗಿಲ್ಲ. ಮಾಹಿತಿ ಸೋರಿಕೆಯಲ್ಲಿ ಎಸ್‌ಐಟಿ ಪಾತ್ರ ಇಲ್ಲ ಎಂದು ವರದಿ ನೀಡಿದೆ.

ಇದೀಗ, ಕಡತದ ಮಾಹಿತಿ ಹೇಗೆ ಸೋರಿಕೆ ಆಗಿದೆ ಅಂತ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಲೋಕಾಯುಕ್ತ ಎಸ್​ಐಟಿ ಐಜಿಪಿ ಚಂದ್ರಶೇಖರ್ ಅವರು ಸೆಪ್ಟೆಂಬರ್​ 4 ರಂದು ಪತ್ರ ಬರೆದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...