ಕೆ ಎಸ್‌ ಈಶ್ವರಪ್ಪ ಪುತ್ರ ಕಾಂತೇಶ್‌ ರಿಂದ ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ!; ಹುಟ್ಟುಹಾಕಿದ ಅನುಮಾನ

Date:

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಲವು ಹೆಣ್ಣುಮಕ್ಕಳ ಜೊತೆ ನಡೆಸಿದ್ದ ಲೈಂಗಿಕ ಕ್ರಿಯೆಯ ವಿಡಿಯೊಗಳು ಬಹಿರಂಗಗೊಂಡು ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ ಬಿಜೆಪಿಯ ಹಿರಿಯ ಮುಖಂಡ, ಶಿವಮೊಗ್ಗದ ಬಂಡಾಯ ಅಭ್ಯರ್ಥಿ ಕೆ ಎಸ್‌ ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಏಪ್ರಿಲ್‌ 27ರಂದು ತಮ್ಮ ಬಗ್ಗೆ ಮಾನಹಾನಿಕರ ಸುದ್ದಿ, ಫೋಟೋ ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿರುವ ಸುದ್ದಿ ಬಂದಿದೆ. ಅಲ್ಲಿಗೆ ಬಿಜೆಪಿಯಲ್ಲಿ ತಡೆಯಾಜ್ಞೆ ತಂದವರ ಸಂಖ್ಯೆ ಡಜನ್‌ ದಾಟಿದೆ.

ರಾಜಕೀಯ ಮುಖಂಡರ ಅಶ್ಲೀಲ ವಿಡಿಯೋಗಳು ಬಹಿರಂಗಗೊಳ್ಳುವುದು ಮತ್ತು ಬಹಿರಂಗಗೊಳ್ಳುವ ಸೂಚನೆ ಸಿಗುತ್ತಿದ್ದಂತೆ ಕೋರ್ಟಿನಿಂದ ತಡೆಯಾಜ್ಞೆ ತರುವುದು ಹೊಸ ಬೆಳವಣಿಗೆಯೇನಲ್ಲ. ಅದರಲ್ಲೂ ಬಿಜೆಪಿಯಲ್ಲಿ ಇಂತಹ ಬೆಳವಣಿಗೆಗಳು ಹೆಚ್ಚು ಎಂಬುದನ್ನೆ ಸಾಕಷ್ಟು ಪುರಾವೆ ಸಿಗುತ್ತದೆ. ಹಾಗೆಯೇ, ರಾಜಕೀಯದಲ್ಲಿ ಅಶ್ಲೀಲ ವಿಡಿಯೋ, ಆಡಿಯೊ, ಫೋಟೊಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುವುದು ಸಹಜ.

2019ರಲ್ಲಿ ಆಪರೇಷನ್‌ ಕಮಲ ಮಾಡಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚನೆಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಶಾಸಕರನ್ನು ಆಮಿಷವೊಡ್ಡಿ ಮುಂಬೈಗೆ ಕರೆದೊಯ್ದು ವಾರಗಳ ಕಾಲ ಅಲ್ಲಿನ ಹೋಟೆಲಿನಲ್ಲಿ ಕೂಡಿ ಹಾಕಿ ನಂತರ ಬೆಂಗಳೂರಿಗೆ ಕರೆತಂದು ರಾಜೀನಾಮೆ ಕೊಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಶಾಸಕ ರಮೇಶ್‌ ಜಾರಕಿಹೊಳಿ ಅವರ ಅಶ್ಲೀಲ ವಿಡಿಯೊ ಸಿಡಿಯೊಂದು ಬಹಿರಂಗಗೊಂಡು ದೊಡ್ಡ ವಿವಾದವಾಗಿತ್ತು. ಯಾವುದೋ ಸಹಾಯ ಕೇಳಿ ಬಂದ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಜಾರಕಿಹೊಳಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು. ಆ ಯುವತಿಯೇ ಅದರ ವಿಡಿಯೊ ಮಾಡಿಕೊಂಡಿದ್ದು ಅದನ್ನು ಆಕೆಯೇ ಬೇರೆಯವರಿಗೆ ಕೊಟ್ಟು ಬಹಿರಂಗಪಡಿಸಿದ್ದಳು ಎಂಬ ಆರೋಪ ಬಂದಿತ್ತು. ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕವಾಗಿ ಬಳಿಸಿಕೊಂಡು ನಂತರ ಕೆಲಸ ಕೊಟ್ಟಿರಲಿಲ್ಲ. ಸಿ ಡಿ ಬಹಿರಂಗಗೊಂಡ ನಂತರ ಆಕೆ ಅತ್ಯಾಚಾರದ ದೂರು ನೀಡಿದ್ದಳು.

೧ 1 e1714483395354

ಈ ಬೆಳವಣಿಗೆಗೆ ಅಂಜಿದ್ದ ಆಪರೇಷನ್‌ ಕಮಲಕ್ಕೆ ಒಳಗಾಗಿದ್ದ ಕೆಲ ಶಾಸಕರು ಒಟ್ಟಾಗಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ, ಚಿತ್ರ, ವಿಡಿಯೊ ಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದಿದ್ದರು. ಶಿವರಾಮ ಹೆಬ್ಬಾರ್‌, ಎಸ್‌ ಟಿ ಸೋಮಶೇಖರ, ಬೈರತಿ ಬಸವರಾಜ್‌, ಡಾ. ಸುಧಾಕರ್‌, ರೇಣುಕಾಚಾರ್ಯ, ಕೆ ಸಿ ನಾರಾಯಣ ಗೌಡ ಅವರು ತಡೆಯಾಜ್ಞೆ ತಂದಿದ್ದರು. ಹಾಗಿದ್ದರೆ ಅವರೆಲ್ಲ ಸೆಕ್ಸ್‌ ಸ್ಕ್ಯಾಂಡಲ್‌ನಲ್ಲಿ ಭಾಗಿಯಾಗಿರೋದು ಎಲ್ಲಿ? ಎಲ್ಲರೂ ಒಂದೇ ಸಲ ತಡೆಯಾಜ್ಞೆ ಯಾಕೆ ತಂದರು ಎಂದು ನೋಡಿದಾಗ ಹುಟ್ಟಿಕೊಂಡ ಬಿರುದು “ಬಾಂಬೆ ಬಾಯ್ಸ್‌”!

ಆಪರೇಷನ್‌ ಕಮಲದ ಭಾಗವಾಗಿ ಬಿಜೆಪಿ ನಾಯಕರ ಜೊತೆ ಮುಂಬೈಯಲ್ಲಿ ಠಿಕಾಣಿ ಹೂಡಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರಿಗೆ ಅಲ್ಲಿನ ಐಷಾರಾಮಿ ಹೋಟೇಲಿನಲ್ಲಿ ಹೆಣ್ಣು -ಹೆಂಡದ ಪೂರೈಕೆ ಮಾಡಿ, ಖಾಸಗಿ ಕ್ಷಣಗಳ ವಿಡಿಯೋ ಚಿತ್ರೀಕರಿಸಿ ಅದನ್ನು ಇಟ್ಟುಕೊಂಡು ಬಿಜೆಪಿ ನಾಯಕರು ಬ್ಲ್ಯಾಕ್‌ಮೇಲ್‌ ಮಾಡಿರುವ ಆರೋಪ ಕೇಳಿ ಬಂದಿತ್ತು. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅದರ ಕಿಂಗ್‌ಪಿನ್‌ ಎಂಬ ಚರ್ಚೆ ನಡೆದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪಕ್ಷಾಂತರಗೊಂಡ ಶಾಸಕರು ತಡೆಯಾಜ್ಞೆ ತಂದಿದ್ದರು.

ಬಿಜೆಪಿ ಸೇರಿ ಅಸಮಾಧಾನಗೊಂಡಿದ್ದ ಎಂಎಲ್‌ಸಿ ಎಚ್‌ ಎಸ್‌ ವಿಶ್ವನಾಥ್‌ ಹಲವು ಬಾರಿ ಮುಂಬೈ ಡೈರಿ ಪುಸ್ತಕ ಬರೆಯುವುದಾಗಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...