ಬಂಗಾಳ ಸಿಎಂ ಮಮತಾ ವಿರುದ್ಧ ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ಕ್ಷಮೆಯಾಚನೆ

Date:

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಾಕಾರಿ ಟೀಕೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ದಿಲೀಪ್ ಘೋಷ್ ಬುಧವಾರ ಕ್ಷಮೆಯಾಚಿಸಿದ್ದಾರೆ.

ವಿಡಿಯೋವೊಂದರ ತುಣುಕನ್ನು ಹಂಚಿಕೊಂಡಿದ್ದ ಘೋಷ್, ‘ಬೆಂಗಾಲ್ ನಿಜೇರ್ ಮೇಯೆ ಕೆ ಚಾಯ್ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸುತ್ತದೆ)’ ಎಂಬ ಘೋಷಣೆಯನ್ನು ಲೇವಡಿ ಮಾಡಿದ್ದರು. “ಮಮತಾ ಗೋವಾಕ್ಕೆ ಹೋದಾಗ ಗೋವಾದ ಮಗಳು ಅಂತಾರೆ, ತ್ರಿಪುರಾದಲ್ಲಿ ತ್ರಿಪುರಾ ಮಗಳು ಅಂತಾರೆ, ಮೊದಲು ಅವರು ಅವರ ತಂದೆಯ ಗುರುತನ್ನು ಸ್ಪಷ್ಟಪಡಿಸಲಿ” ಎಂದು ವ್ಯಂಗ್ಯವಾಡಿದ್ದಾರೆ.

ಅವರ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು ಸಲ್ಲಿಸಿದೆ. ಮಾದರಿ ನೀತಿ ಸಂಹಿತೆಯನ್ನು ಬಿಜೆಪಿ ಉಲ್ಲಂಘಿಸಿದೆ ಎಂದೂ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘೋಷ್‌ ಟೀಕೆಗೆ ಬಿಜೆಪಿ ವಿವರಣೆ ಕೇಳಿದೆ. ಕೆಲವು ಬಿಜೆಪಿಗರು ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ, ಅವರು ಕ್ಷಮೆ ಕೇಳಿದ್ದಾರೆ.

“ಮುಖ್ಯಮಂತ್ರಿ ಮಮತಾ ಜೊತೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ನಾನು ಬ್ಯಾನರ್ಜಿಯವರ ರಾಜಕೀಯ ಹೇಳಿಕೆಗಳನ್ನು ಮಾತ್ರ ಪ್ರತಿಭಟಿಸಿದ್ದೇನೆ. ಯಾರೇ ತಪ್ಪು ಮಾಡಿದರೂ, ಅವರ ಎದುರೇ ನಾನು ಖಂಡಿಸುತ್ತೇನೆ. ನನ್ನ ಹೇಳಿಕೆಗಳ ಬಗ್ಗೆ ವಿವಾದ ಭುಗಿಲೆದ್ದಿರುವುದು ಇದೇ ಮೊದಲಲ್ಲ” ಎಂದು ಘೋಷ್ ಹೇಳಿದ್ದಾರೆ.

“ಮಹಿಳೆಯರ ಬಗ್ಗೆ, ಅದರಲ್ಲೂ ಮುಖ್ಯಮಂತ್ರಿಯಾಗಿರುವ ಯಾರೊಬ್ಬರ ವಿರುದ್ಧದ ಹೇಳಿಕೆಗಳನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ. ಅದಕ್ಕಾಗಿಯೇ ಘೋಷ್ ಅವರಿಂದ ವಿವರಣೆ ಕೇಳಲಾಗಿದೆ” ಎಂದು ಬಿಜೆಪಿ ವಕ್ತಾರ ಸಾಮಿಕ್ ಭಟ್ಟಾಚಾರ್ಯ ಹೇಳಿದ್ದಾರೆ.

ಹಾಲಿ ಮೇದಿನಿಪುರ ಸಂಸದರಾಗಿರುವ ಘೋಷ್, ಈ ಬಾರಿ ಚುನಾವಣೆಯಲ್ಲಿ ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...