ಕರ್ನಲ್ ಸೋಫಿಯಾಗೆ ನಿಂದನೆ; ಸಚಿವನ ರಕ್ಷಣೆಗಿಳಿದ ಎಂಪಿ ಸರ್ಕಾರಕ್ಕೆ ಕೋರ್ಟ್‌ ಛೀಮಾರಿ

Date:

ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕ್ರಮಕ್ಕೆ ಅವಕಾಶ ಕೊಡದೆ, ಅವರನ್ನು ರಕ್ಷಿಸಲು ಮುಂದಾಗಿದ್ದ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದೆ. ವಿಜಯ್ ಶಾ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವ ಕುರಿತು ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. ಇನ್ನು, ಕೋರ್ಟ್‌ ಛೀಮಾರಿ ಹಾಕಿದ ಬೆನ್ನಲ್ಲೇ, ಭೋಪಾಲ್‌ನಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದ್ದು, ವಿಜಯ್ ಶಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್‌ ದಾಳಿ ಮತ್ತು ಅದರ ವಿರುದ್ಧ ಆಪರೇಷನ್ ಸಿಂಧೂರ ಕುರಿತು ಮಾತನಾಡಿದ್ದ ವಿಜಯ್ ಶಾ ನಾಲಿಗೆ ಹರಿಬಿಟ್ಟಿದ್ದರು. ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ಹಿಸಿದ್ದ ಸೋಫಿಯಾ ಅವರನ್ನು ಉಲ್ಲೇಖಿಸಿ, ‘ನಮ್ಮ ಮಗಳನ್ನು ವಿಧವೆಯರನ್ನಾಗಿ ಮಾಡಿದವರಿಗೆ, ನಾವು ಅವರದ್ದೇ ಸಹೋದರಿಯನ್ನು ಕಳುಹಿಸಿ ಪಾಠ ಕಲಿಸಿದ್ದೇವೆ’ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದರು. ವಿಜಯ್ ಶಾ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಬಳಿಕ, ವಿಜಯ್ ಶಾ ಹೇಳಿಕೆ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್‌ ರಚಿಸಿದ್ದ ಸಮಿತಿಯು, ತನಿಖೆ ನಡೆಸಿ ನ್ಯಾಯಾಯಕ್ಕೆ ವರದಿ ಸಲ್ಲಿಸಿತ್ತು. ಆದರೆ, ರಾಜ್ಯ ಸರ್ಕಾರವು ವಿಜಯ್ ಶಾ ವಿರುದ್ಧ ಕ್ರಮ ಕೈಗೊಳ್ಳಲು ಇನ್ನೂ ಅನುಮತಿ ನೀಡಿಲ್ಲ. ಇದೇ ವಿಚಾರವಾಗಿ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, “ನೀವು 2025ರ ಆಗಸ್ಟ್ 19ರಿಂದ ಎಸ್‌ಐಟಿ ವರದಿಯನ್ನು ಪರಿಶೀಲಿಸುತ್ತಿದ್ದೀರಿ. ನಿಮ್ಮ ಮೇಲೆ ಕಾನೂನು ಬಾಧ್ಯತೆಗಳಿವೆ. ನೀವು ಇನ್ನೆರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ತಾಕೀತು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ ಆದೇಶದಂತೆವಿಜಯ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್‌ ಕಾರ್ಯಕರ್ತರು ತಮ್ಮಲ್ಲಿನ ವ್ಯಕ್ತಿಯೊಬ್ಬರಿಗೆ ವಿಜಯ್ ಶಾ ಅವರ ಮುಖವಾಡ ಹಾಕಿಸಿ, ಕೈಗೆ ಕೋಳ ತೊಡಿಸಿ ಮೆರವಣಿಗೆ ನಡೆಸಿದ್ದಾರೆ. ಮುಖವಾಡ ಧರಿಸಿದ್ದ ವ್ಯಕ್ತಿಯನ್ನು ಸಾಂಕೇತಿಕವಾಗಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಪೊಲೀಸರೇ ಕಾರಣ?

ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ನಾಯಕ ಅಮಿತ್ ಶರ್ಮಾ, “ಶಾ ಅವರು ಕರ್ನಲ್ ಖುರೇಷಿ ಅವರನ್ನು ಅವಮಾನಿಸಿದ್ದಾರೆ. ಖುರೇಷಿ ದೇಶಕ್ಕೆ ಗೌರವ ತಂದ ರಾಷ್ಟ್ರದ ಪುತ್ರಿ. ಭಾರತೀಯ ಸೇನೆಯ ಮಹಿಳಾ ಅಧಿಕಾರಿಯನ್ನು ಅವಮಾನಿಸಿದ ಸಚಿವರನ್ನು ಸರ್ಕಾರ ರಕ್ಷಿಸುತ್ತಿದೆ. ವಿಜಯ್ ಶಾ ಅವರನ್ನು ತಕ್ಷಣವೇ ಅವರ ಹುದ್ದೆಯಿಂದ ತೆಗೆದುಹಾಕಬೇಕು” ಎಂದು ಆಗ್ರಹಿಸಿದ್ದಾರೆ.

“ಸುಪ್ರೀಂ ಕೋರ್ಟ್‌ನ ಆದೇಶವು ರಾಜ್ಯ ಸರ್ಕಾರಕ್ಕೆ ನೈತಿಕ ಮತ್ತು ರಾಜಕೀಯ ಸೋಲನ್ನು ಸೂಚಿಸುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿ ಸತ್ಯ ಮೇಲುಗೈ ಸಾಧಿಸಿದೆ. ಸರ್ಕಾರವು ರಕ್ಷಿಸುತ್ತಿದ್ದ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...