ಕಾಂತರಾಜ ವರದಿ ಬಹಿರಂಗಗೊಳಿಸದಂತೆ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ: ನಾಳೆ ವಿಚಾರಣೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷಾ ವರದಿ ಸಲ್ಲಿಕೆಗೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದ ಓದನಹಳ್ಳಿಯ ವಕೀಲ ಓ.ಕೆ.ರಘು ಎಂಬುವವರು ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ರಘು ಪರ ವಕೀಲ ಅಭಿಷೇಕ್ ಕುಮಾರ್, ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, ಅರ್ಜಿಯನ್ನು ನಾಳೆ ವಿಚಾರಣೆ ನಡೆಸುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಂತರ ಅರ್ಜಿಯಲ್ಲಿ, ‘ಲೋಕಸಭಾ ಚುನಾವಣೆ ಶೀಘ್ರದಲ್ಲೇ ಘೋಷಣೆ ಆಗಲಿದೆ. ಹೀಗಾಗಿ ಕಾಂತರಾಜ ವರದಿ ಮಂಡಿಸಲು ಮುಂದಾಗಿದ್ದಾರೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ವರದಿ ಬಹಿರಂಗವಾಗಲು ಅವಕಾಶ ನೀಡದಂತೆ ನಿರ್ಬಂಧಿಸಬೇಕು’ ಎಂದು ಮನವಿ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ

ಜಾತಿಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...