ಒಳಮೀಸಲಾತಿ | ನ್ಯಾ.ನಾಗಮೋಹನ ದಾಸ್ ಜೊತೆ ಬಿಜೆಪಿ ನಿಯೋಗ ಚರ್ಚೆ

Date:

ಬಿಜೆಪಿ ನಾಯಕರಾದ ಸಂಸದ ಗೋವಿಂದ ಕಾರಜೋಳ ಮತ್ತು ಮಾಜಿ ಕೇಂದ್ರ ಸಚಿವರಾದ ಅನೇಕಲ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಮಂಗಳವಾರ ಒಳಮೀಸಲಾತಿ ಹೋರಾಟಗಾರರ ನಿಯೋಗ ನ್ಯಾ.ನಾಗಮೋಹನದಾಸ್ ಅವರನ್ನು ಅವರ ಏಕ ಸದಸ್ಯ ಆಯೋಗದ ಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿತು.

ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಒಳ ಮೀಸಲಾತಿ ಜಾರಿ ತ್ವರಿತವಾಗಿ ಆಗಬೇಕಾದ ಅಗತ್ಯ, ಆದಿ ಕರ್ನಾಟಕ, ಆದಿದ್ರಾವಿಡ ವಿಷಯದಲ್ಲಿನ ದತ್ತಾಂಶಗಳ ನಿಖರತೆ ಬಗ್ಗೆ ಹಲವು ಆಯಾಮದ ಚರ್ಚೆ ನಡೆಸಲಾಯಿತು. ನ್ಯಾ ನಾಗಮೋಹನ್ ದಾಸ್ ಅವರ ಶಿಫಾರಸಿನ ಅನ್ವಯ ಹಿಂದಿನ ಬಿಜೆಪಿ ಸರ್ಕಾರ ಎಸ್ಸಿ, ಎಸ್ಟಿ ಮೀಸಲಾತಿಯನ್ನು ಹೆಚ್ಚಳ ಮಾಡಿರುವುದು ಮತ್ತು 2011ರ ಜನಗಣತಿಯ ದತ್ತಾಂಶಗಳ ಆಧಾರದಲ್ಲಿ ಮಾಧುಸ್ವಾಮಿ ವರದಿ ಮಾಡಿದ ವರ್ಗೀಕರಣದ ವಿವರಗಳನ್ನು ಸಮಿತಿಯ ಸದಸ್ಯರೂ ಆಗಿದ್ದ ಸಂಸದ ಮತ್ತು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ವಿವರಿಸಿದರು.

ಆದಿದ್ರಾವಿಡ, ಆದಿಕರ್ನಾಟಕ ಗೊಂದಲ ಸರಿಪಡಿಸಲು ಮಾಧುಸ್ವಾಮಿ ಸಮಿತಿ ತಾಲೂಕು, ಜಿಲ್ಲೆಗಳ ದತ್ತಾಂಶ ಬಳಸಿರುವ ವಿವರಗಳನ್ನು ಅನೇಕಲ್ ನಾರಾಯಣಸ್ವಾಮಿ ನೀಡಿದರು. ಈ ನಿಯೋಗದಲ್ಲಿ ಒಳ ಮೀಸಲಾತಿ ಹೋರಾಟಗಾರರಾದ ಎಮ್.ಶಂಕರಪ್ಪ, ಬಳ್ಳಾರಿ ಹನುಮಂತಪ್ಪ, ರಾಯಚೂರಿನ ನರಸಪ್ಪ, ಬೀದರ್‍ನ ಫನಾರ್ಂಡೀಸ್ ಹಿಪ್ಪಳಗಾವ್, ಮೈಸೂರಿನ ಡಾ. ಅನಂದಕುಮಾರ್, ಶಾಸಕರಾದ ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮೋಡ್, ಮಾಜಿ ಶಾಸಕರಾದ ಬಸವರಾಜ್ ಧಡೇಸುಗೂರು, ಬಿಜೆಪಿ ಪ್ರಮುಖರಾದ ಬಿ.ಹೆಚ್.ಅನಿಲ್ ಕುಮಾರ್, ಲಕ್ಷ್ಮಿನಾರಾಯಣ, ವೆಂಕಟೇಶ ದೊಡ್ಡೇರಿ, ಬಳ್ಳಾಹುಣ್ಸಿ ರಾಮಣ್ಣ, ಗವಿಸಿದ್ದಪ್ಪ ದ್ಯಾಮಣ್ಣನವರ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾ.ನಾಗಮೋಹನ್ ದಾಸ್ ಒಂದು ತಾಸು ನೆಡೆದ ಚರ್ಚೆಯಲ್ಲಿ ಭಾಗವಹಿಸಿ ತ್ವರಿತವಾಗಿ, ಸಮರ್ಪಕವಾಗಿ ವರದಿ ಸಿದ್ಧಪಡಿಸಿ ಮಾದಿಗ ಸಮಾಜಕ್ಕೆ ಮತ್ತು ಎಲ್ಲ ನೂರೊಂದು ಜಾತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...