ಒಳ ಮೀಸಲಾತಿ ಸಮೀಕ್ಷೆ | ಕೊರಚ ಅಥವಾ ಕೊರಚರ್ ಎಂದು ನಮೂದಿಸಲು ಕೊರಚ ಮಹಾಸಭಾ ಕರೆ

Date:

ಒಳ ಮೀಸಲಾತಿ ವಿಂಗಣೆಗಾಗಿ ನಡೆಸುವ ಸಮೀಕ್ಷೆ ಸಂದರ್ಭದಲ್ಲಿ ನಿಗದಿಪಡಿಸಿದ ಕಾಲಂಗಳಲ್ಲಿ ನಮ್ಮ ಸಮುದಾಯದವರು ನಮ್ಮ ಜಾತಿಯನ್ನು ಕಡ್ಡಾಯವಾಗಿ ‘ಕೊರಚ’ ಇಲ್ಲವೆ ‘ಕೊರಚರ್’ ಎಂದು ಮಾತ್ರ ನಮೂದಿಸಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾಸಭಾ ಕರೆ ನೀಡಿದೆ.

ಬೆಂಗಳೂರಿನ ಪ್ರಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಜಂಟಿಸುದ್ದಿಗೋಷ್ಠಿಯಲ್ಲಿ ಮಹಾಸಭಾ ಅಧ್ಯಕ್ಷ ಆದರ್ಶ ಯಲ್ಲಪ್ಪ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಮಾತನಾಡಿ, “ಪರಿಶಿಷ್ಟರ ಉಪಜಾತಿಯಾದ ಕೊರಚ ಸಮುದಾಯ ಎಲ್ಲಾ ಜಿಲ್ಲೆಗಳಲ್ಲೂ ಅಸ್ಥಿತ್ವ ಹೊಂದಿವೆ. ಗಣತಿದಾರರು ಆಂತರಿಕ ಹಿಂದುಳಿದಿರುವಿಕೆಯ ಬಗ್ಗೆ ಸರಿಯಾದ ದತ್ತಾಂಶ ಕಲೆಹಾಕಲು ಮನೆ ಮನೆಗೆ ಭೇಟಿ ನೀಡಿದಾಗ ತಪ್ಪದೇ ಕೊರಚ ಇಲ್ಲವೆ ಕೊರಚರ್ ಎಂದು ಕಾಲಂಗಳಲ್ಲಿ ನಮೂದಿಸಬೇಕು” ಎಂದು ಮನವಿ ಮಾಡಿದರು.

“ಕೊರಚ ಜನಾಂಗದಲ್ಲಿ ದಬ್ಬೆ ಕೊರಚ, ಹಗ್ಗ ಕೊರಚ, ಕುಂಚಿ ಕೊರಚ ಎಂಬ ಉಪ ಪಂಗಡಗಳಿದ್ದು ಈ ಮೂರು ಉಪ ಪಂಗಡಗಳನ್ನು ಕೊರಚ ಎಂದು ಪರಿಗಣಿಸಬೇಕು. ಇದರಿಂದ ಮುಂಬರುವ ದಿನಗಳಲ್ಲಿ ಸಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಪತ್ತೆ ಮಾಡಲು ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ಜಿಲ್ಲೆಗಳಲ್ಲಿ ಕೊರಚ ಸಮುದಾಯ ಭವನ, ವಸತಿ ನಿಲಯಗಳ ನಿರ್ಮಾಣ, ಪ್ರತ್ಯೇಕ ಅಭಿವೃದ್ಧಿ ನಿಗಮ, ಸಮುದಾಯದ ಸಂಪ್ರದಾಯ ಆಚರಣೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ, ವಚನಕಾರ ನುಲಿಯಾ ಚಂದಯ್ಯ ಅವರ ಹೆಸರಿನಲ್ಲಿ ಶರಣ ನೂಲಿ ಚಂದಯ್ಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮುದಾಯದ ಏಳಿಗೆಗೆ ಸಹಕರಿಸುವ, ಸಂಘದಿಂದ ಕೊರಚ ಜನಾಂಗಕ್ಕೆ ಬಿದಿರು ಪುಟ್ಟಿ ಹೆಣೆಯಲು ಬೊಂಬು ಮತ್ತು ಗಳಗಳನ್ನು ಒದಗಿಸಿಕೊಡಲು ಬಿದಿರು ಸೊಸೈಟಿ ಆರಂಭಿಸುವ, ಕೊರಚ ಕುಲಶಾಸ್ತ್ರ ಅಧ್ಯಯನಕ್ಕೆ ಆದ್ಯತೆ ನೀಡಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಒಳ ಮೀಸಲಾತಿ | ಜಾತಿ ರಹಿತ ಬೌದ್ಧರಿಗೆ ಸಮೀಕ್ಷೆಯಲ್ಲಿ ಪ್ರತ್ಯೇಕ ಧರ್ಮದ ಕಾಲಂ ರಚಿಸಿ: ಬೌದ್ಧ ಮಹಾಸಭಾ ಆಗ್ರಹ

“ಕೊರಚರ ಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ, ಅಲೆಮಾರಿ ಜನಾಂಗದವರಿಗೆ ಸರ್ಕಾರಿ ಜಾಗ ಗುರುತಿಸಿ ಮಂಜೂರು ಮಾಡಿಸಿಕೊಡುವುದು, ಮಹಿಳಾ ಸಬಲೀಕರಣ ಅಡಿಯಲ್ಲಿ ಸಮುದಾಯದ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಸಹಾಯಧನ ನೀಡುವ, ಸರ್ಕಾರದಿಂದ ದೊರೆಯುವ ಪ್ರೇರಣಾ ಸಾಲ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳ ಸೌಲಭ್ಯ ಒದಗಿಸಲಾಗುವುದು” ಎಂದರು.

ಸುದ್ದಿಗೋಷ್ಠಿಯಲ್ಲಿ ಖಜಾಂಚಿ ಗಂಗಪ್ಪ.ಕೆ, ಹಿರಿಯ ಮುಖಂಡರಾದ ವಿನಾಯಕ ಪೆನುಗೊಂಡ ಧನಂಜಯ.ಎನ್, ಸಂಘದ ಪದಾಧಿಕಾರಿಗಳಾದ ಸಿದ್ದೇಶ್ ಮಾದಪುರ, ಮಾರುತಿ ಮಾಕಡವಾಲೆ, ಕುಂಸಿ ಶ್ರೀನಿವಾಸ್, ಪುರಶೋತ್ತಮಯಲ್ಲಾಪುರ, ವಿಜಯ್ಕುಮಾರ್ ಶ್ರೀನಿವಾಸ, ಶಿವು.ಜಿ, ಬಾಲಕೃಷ್ಣಪ್ಪ, ಕೆ.ವಿ.ಮಂಜುನಾಥ, ಲೋಕೇಶ್ ಆಂಜಿನಪ್ಪ ಪ್ರಕಾಶ ಲಿಗಾಡಿ, ಸುರೇಶ್ ಎನ್ ವಿಜಯ್ಕುಮಾರ್, ಏಕಲವ್ಯ ಕೃಷ್ಣಪ್ಪ, ಬಳೆಗಾರ, ಕಿರಣ್, ಸೀತಾರಾಮಯ್ಯ ಅಜಯ್.ಎನ್, ಕವಾಡಿ ಚಂದ್ರಪ್ಪ, ಸಂತೋಷ್ ಸಿ, ಅಂಜಿನಪ್ಪ, ಕುಮಾರ್ ಮಾರುತಿ, ಹೆಚ್.ಯಶೋಧ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...