ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ | ಬೀದ‌ರ್‌ನಿಂದ ಚಾಮರಾಜನಗದವರೆಗೆ ಮಾನವ ಸರಪಳಿ: ಮಹದೇವಪ್ಪ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

ಸೆಪ್ಟೆಂಬರ್ 15ರಂದು ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಬೀದ‌ರ್‌ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಾನವ ಸರಪಳಿಯ ಜವಾಬ್ದಾರಿಯನ್ನು ವಹಿಸಲಿದ್ದಾರೆ ಎಂದು ಮಹದೇವಪ್ಪ ಸಭೆಯಲ್ಲಿ ತಿಳಿಸಿದರು.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಮುಂದಿನ ಪೀಳಿಗೆಯು ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತವಾಗಬೇಕಾದರೆ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತ ಅರಿವಿನ ಜಾಗೃತಿ ಅತ್ಯಂತ ಅಗತ್ಯವಾಗಿದ್ದು ಈ ಹಿನ್ನಲೆಯಲ್ಲಿ ಸರ್ಕಾರವು ಬೃಹತ್ ಮಾನವ ಸರಪಳಿಯನ್ನು ರಚಿಸುವ ಮೂಲಕ ವಿಭಿನ್ನವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೆಪ್ಟೆಂಬರ್ 15ರ ಆ ದಿನ ಪ್ರಜಾಪ್ರಭುತ್ವದ ಭಾಗವಾಗಿರುವ ಎಲ್ಲ ಜನರೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿಂಬಿಸುವುದಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಮಾಡಬಹುದು ಮತ್ತು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು” ಎಂದು ಹೇಳಿದರು.

“ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಕ್ಕೆ ಆರಂಭಗೊಳ್ಳುವ ಈ ಕಾರ್ಯಕ್ರಮದಲ್ಲಿ ಸುಮಾರು 40 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ಸಚಿವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...