ಜಮ್ಮು ಕಾಶ್ಮೀರ ಸಮಸ್ಯೆಯ ‘ಅಂತಾರಾಷ್ಟ್ರೀಕರಣ’ ಸರಿಯಲ್ಲ, ಪಿಒಕೆ ಭಾರತದ ಅವಿಭಾಜ್ಯ ಅಂಗ: ಕಾಂಗ್ರೆಸ್

Date:

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು(ಪಿಒಕೆ) ತೆರವುಗೊಳಿಸುವಂತೆ 1994 ರಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ ನಿರ್ಣಯವನ್ನು ಕಾಂಗ್ರೆಸ್ ಭಾನುವಾರ ಪುನರುಚ್ಚರಿಸಿದೆ. ಜಮ್ಮು ಕಾಶ್ಮೀರ ಸಮಸ್ಯೆಯನ್ನು ‘ಅಂತಾರಾಷ್ಟ್ರೀಕರಣ’ ಮಾಡುವುದು ಸರಿಯಲ್ಲ. ಪಿಒಕೆ ಭಾರತದ ಅವಿಭಾಜ್ಯ ಅಂಗ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಜಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕೋರಿ ಪತ್ರ ಬರೆದಿದ್ದಾರೆ. ಕಾಶ್ಮೀರ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಪ್ರವೇಶವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಕದನ ವಿರಾಮ | ಇಂದಿರಾ ಗಾಂಧಿಯನ್ನು ನೆನೆದ ವಿಪಕ್ಷಗಳು; ಸರ್ವಪಕ್ಷ ಸಭೆ, ತುರ್ತು ಅಧಿವೇಶನ ನಡೆಸಲು ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಅಮೆರಿಕವನ್ನು ಕಾಂಗ್ರೆಸ್ ಟೀಕಿಸಿದೆ. “ಹಲವು ವರ್ಷಗಳ ನಂತರ, ಕಾಶ್ಮೀರಕ್ಕೆ ಸಂಬಂಧಿಸಿದಂತೆ ಒಂದು ನಿರ್ಣಯಕ್ಕೆ ತಲುಪಬಹುದೇ ಎಂದು ನೋಡಲು (ಭಾರತ ಮತ್ತು ಪಾಕಿಸ್ತಾನ) ಎರಡೂ ದೇಶಗಳೊಂದಿಗೆ ಕಾರ್ಯನಿರ್ವಹಿಸುತ್ತೇನೆ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಕಾಶ್ಮೀರ ಸಮಸ್ಯೆಯನ್ನು ‘ಅಂತಾರಾಷ್ಟ್ರೀಕರಣ’ ಮಾಡುವುದನ್ನು ಕಾಂಗ್ರೆಸ್ ವಿರೋಧಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಅಮೆರಿಕ ಅಧ್ಯಕ್ಷರು ಮತ್ತು ಇತರ ಅಮೆರಿಕದ ಅಧಿಕಾರಿಗಳ ಹೇಳಿಕೆಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ನವದೆಹಲಿ(ಭಾರತ) ಇಸ್ಲಾಮಾಬಾದ್‌ನಿಂದ(ಪಾಕಿಸ್ತಾನ) ಯಾವ ಬದ್ಧತೆಗಳನ್ನು ಬಯಸಿದೆ ಮತ್ತು ಪಾಕಿಸ್ತಾನಕ್ಕೆ ಯಾವ ಬದ್ಧತೆಯಿದೆ ಎಂಬ ವಿವರ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಟ್ರಂಪ್ ಕದನ ವಿರಾಮ ಘೋಷಿಸಿದ್ದು ನಮಗೆ ಆಶ್ಚರ್ಯ ತಂದಿದೆ. ಇಂತಹ ಘಟನೆ ಇದೇ ಮೊದಲ ಬಾರಿಗೆ ಸಂಭವಿಸಿದೆ. ಕಾಂಗ್ರೆಸ್ ಸರ್ವಪಕ್ಷ ಸಭೆ ಮತ್ತು ವಿಶೇಷ ಅಧಿವೇಶನವನ್ನು ಕರೆಯುವಂತೆ ಒತ್ತಾಯಿಸುತ್ತಿದೆ. 1994ರಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾದ ಪಿಒಕೆ ಭಾರತದ ಅವಿಭಾಜ್ಯ ಅಂಗವಾಗಿದೆ. ನಾವು ಪಿಒಕೆಯನ್ನು ಹಿಂಪಡೆದುಕೊಳ್ಳುವುದಾಗಿ ಸರ್ವಾನುಮತದಿಂದ ಅಂಗೀಕರಿಸಲಾದ ನಿರ್ಣಯವನ್ನು ನಾವು ಪುನರುಚ್ಚರಿಸಬೇಕು” ಎಂದು ಸಚಿನ್ ಪೈಲಟ್ ಹೇಳಿದರು.

ಪಾಕಿಸ್ತಾನವು ಆಕ್ರಮಣಕಾರಿಯಾಗಿ ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳನ್ನು ಆಕ್ರಮಣ ಮಾಡಿಕೊಂಡಿದ್ದು ಆ ಸ್ಥಳವನ್ನು ತೆರವುಗೊಳಿಸಬೇಕು. ನಿರ್ಣಯವನ್ನು ಪುನರುಚ್ಚರಿಸುವ ಸಮಯವಿದು. ನಿಲುವಿನಲ್ಲಿ ಬದಲಾವಣೆಯಾದರೆ, ಅದನ್ನು ಮೊದಲು ಚರ್ಚಿಸಬೇಕು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ನಿರ್ಣಯವನ್ನು ಅಂಗೀಕರಿಸಲಾಯಿತು. ನಾವು ನಮ್ಮ ನಿಲುವನ್ನು ಬದಲಾಯಿಸಿಲ್ಲ” ಎಂದು ಪೈಲಟ್ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...