ಮತದಾರರಿಗೆ ಬೆದರಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

Date:

  • ಪಿಎಫ್‌ಐ ಕುರಿತು ಹೇಳಿಕೆ ನೀಡಿದ್ದ ಅಮಿತ್ ಶಾ
  • ಕೋಮು ಗಲಭೆಯ ಬೆದರಿಕೆ ಹಾಕಿದ್ದ ಗೃಹ ಸಚಿವ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಮತ್ತು ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ರಣಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. “ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೋಮು ಗಲಭೆಗಳು ಸೃಷ್ಟಿಯಾಗಲಿವೆ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.

ಉದ್ದೇಶಪೂರ್ವಕ ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಹರಡಿಸುವ ಸಲುವಾಗಿ ಬಿಜೆಪಿಯ ಸಮಾವೇಶಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಲಾಗಿದೆ.

“ಸ್ವತಃ ಗೃಹ ಮಂತ್ರಿಯಿಂದಲೇ ಕೋಮು ದ್ವೇಷದ ಭಾಷಣ ಹೊರಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿವೆ ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಅಮಿತ್ ಶಾ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು” ಎಂದು ಕಾಂಗ್ರೆಸ್ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಶೇ. 75ಕ್ಕೆ ಹೆಚ್ಚಳ: ಸಿದ್ದರಾಮಯ್ಯ

ಅಮಿತ್ ಶಾ ಹೇಳಿಕೆ

“ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಬಂಧನದಲ್ಲಿದ್ದ ಎಲ್ಲ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು. ನಂತರ ಬಿಜೆಪಿ ಸರ್ಕಾರವೇ ಅವರನ್ನು ಪತ್ತೆ ಮಾಡಿ ಮತ್ತೆ ಜೈಲಿನಲ್ಲಿರಿಸಬೇಕಾಯಿತು” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಪಿಎಫ್ಐ ನಿಷೇಧವನ್ನು ತೆಗೆದುಹಾಕುತ್ತದೆ ಎಂದು ಕಾಂಗ್ರೆಸ್ ತನ್ನ ಚುನಾವಣಾ ಭರವಸೆ ನೀಡಿದೆ” ಎಂದು ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...