ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ: ವ್ಯಾಪಕ ವಿರೋಧ

Date:

  • ಜು.22ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪುಸ್ತಕ ಬಿಡುಗಡೆ ಕಾರ್ಯಕ್ರಮ
  • ಪತ್ರಕರ್ತೆ ದಿ.ಗೌರಿ ಲಂಕೇಶ್ ಬಗ್ಗೆ ವಿವಾದಾತ್ಮಕ ಲೇಖನ ಬರೆದಿದ್ದ ವಿಶ್ವೇಶ್ವರ ಭಟ್

‘ವಿಶ್ವವಾಣಿ’ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸುವುದಕ್ಕೆ ಸೋಷಿಯಲ್ ಮೀಡಿಯಾ ಸೇರಿದಂತೆ ಹಲವರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಬೆಂಗಳೂರಿನ ಕೆ ಪಿ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಜು.22ರಂದು ವಿಶ್ವೇಶ್ವರ ಭಟ್ ಅವರ ‘ಸಂಪಾದಕರ ಸದ್ಯಶೋಧನೆ’ ಎಂಬ ಹೆಸರಿನ ಪುಸ್ತಕ ಸೇರಿದಂತೆ ವಿಶ್ವವಾಣಿಯ ಅಂಕಣಕಾರರಾದ ಕಿರಣ್ ಉಪಾಧ್ಯಾಯ, ರೂಪಾ ಗುರುರಾಜ್ ಹಾಗೂ ಶಿಶಿರ್ ಹೆಗಡೆ ಎಂಬುವವರ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಭಾಗವಹಿಸಲಿರುವುದಾಗಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವಿಶ್ವೇಶ್ವರ ಭಟ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಮಂತ್ರಣ ಪತ್ರಿಕೆಯಲ್ಲಿ ಸಿಎಂ ಹೆಸರನ್ನು ಕಂಡ ಬಳಿಕ ವಿರೋಧ ವ್ಯಕ್ತಪಡಿಸಿರುವ ಪ್ರಗತಿಪರ ಚಿಂತಕರು ಹಾಗೂ ನಾಡಿನ ಹಲವರು, ‘ಇಸ್ಲಾಮೋಫೋಬಿಕ್, ಜಾತಿವಾದಿ ಮತ್ತು ಲೇಖನಿಯ ಮೂಲಕ ಸ್ತ್ರೀದ್ವೇಷವನ್ನು ಹರಡಿದ, ಸಮಾಜದಲ್ಲಿ ದ್ವೇಷ ಹರಡುವ ಪತ್ರಕರ್ತರೊಬ್ಬರ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಬಾರದು. ಇದು ಜಾತ್ಯತೀತವಾದಿಯಾಗಿ ಗುರುತಿಸಿಕೊಂಡಿರುವ ತಮಗೆ ಶೋಭೆ ತರುವಂಥದ್ದಲ್ಲ’ ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಜೊತೆಗೆ ವಿಶ್ವೇಶ್ವರ್‍‌ ಭಟ್ ಸೋಷಿಯಲ್ ಮೀಡಿಯಾಗಳಲ್ಲಿ ಈ ಹಿಂದೆ ಹಂಚಿಕೊಂಡಿದ್ದ ಹಲವು ವಿವಾದಾತ್ಮಕ ಪೋಸ್ಟ್‌ಗಳನ್ನು ಕೂಡ ಶೇರ್ ಮಾಡಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾದ ಸಂದರ್ಭದಲ್ಲಿ ವಿಶ್ವೇಶ್ವರ ಭಟ್ ಅವರು, ‘ಆಕೆ ಗುಂಡಿಗೆ ಬಲಿಯಾಗದೇ ಗುಂಡು ಹಾಕಿ ಬಲಿಯಾಗಿದ್ದರೆ ಸಿಂಗಲ್ ಕಾಲಮ್ಮು ಸುದ್ದಿಯಾಗುತ್ತಿದ್ದಳು’ ಎಂದು ಲೇಖನ ಪ್ರಕಟಿಸಿದ್ದರು. ಇದನ್ನು ಸಿಎಂ ಸಿದ್ದರಾಮಯ್ಯನವರಿಗೆ ಟ್ಯಾಗ್ ಮಾಡಿ ಪ್ರಶ್ನಿಸಿರುವ ಹಲವರು, ‘ಮಾನ್ಯ ಮುಖ್ಯಮಂತ್ರಿಗಳೇ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಯೋಚನೆ ಮಾಡಿ’ ಎಂದು ವಿನಂತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ

“ನೆಹರೂ ಅವರು ಸಿಝರ್‍‌ಲ್ಯಾಂಡಿನಿಂದ ಭಾರತಕ್ಕೆ ಬರುವಾಗ ರೋಮ್ ಏರ್‍‌ಪೋರ್ಟಲ್ಲಿ ಇಳಿದು ಪ್ರಯಾಣ ಮುಂದುವರಿಸಬೇಕಿತ್ತು. ಆ ಸಂದರ್ಭದಲ್ಲಿ ಇಟಲಿಯ ಫ್ಯಾಸಿಸ್ಟ್ ಮುಸೋಲಿನಿ ಭೇಟಿಯಾಗ ಬಯಸಿದ. ನೆಹರೂ ಅವರು ಒಪ್ಪಲಿಲ್ಲ. ಬರೀ ಕೈ ಕುಲುಕಲು ಬರುವುದಾಗಿ ಮತ್ತೆ ಹೇಳಿ ಕಳಿಸಿದ. ನೆಹರೂ ಅದಕ್ಕೂ ಒಪ್ಪಲಿಲ್ಲ.ಒಬ್ಬ ಫ್ಯಾಸಿಸ್ಟನ ಕೈಕುಲುಕಿದರೆ ಅದು ಜಗತ್ತಿನ ಮೇಲೆ ಯಾವ ದುಷ್ಪರಿಣಾಮ ಬೀರಬಹುದು ಎಂಬ ಪರಿಜ್ಞಾನ ನೆಹರೂ ಅವರಿಗೆ ಇತ್ತು” ಎಂದು ಹಿರಿಯ ಸಾಹಿತಿ ರಮಜಾನ್ ದರ್ಗಾ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ramjan darga

ಇದೇ ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ, ಜಾತ್ಯತೀತತೆಗೆ ಬದ್ದರಾಗಿರುವುದು, ಸಮಾಜವಾದದ ಹಳೆಯ ದಿನಗಳ ನೆನಪುಗಳನ್ನು‌ ಉಳಿಸಿಕೊಂಡು ಕೆಲಸ ಮಾಡುವುದು ಅಂದರೆ ಕೋಮುಶಕ್ತಿಗಳನ್ನು ಹುಡುಕಿ ಹುಡುಕಿ ದೂರ ಇಡುವುದು. ಇದು ಪ್ರಥಮ ಕೆಲಸ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಷ್ಟೂ ತಿಳುವಳಿಕೆ ಇಲ್ಲ ಅಂತ ನಾನಂತೂ ಭಾವಿಸುವುದಿಲ್ಲ. ಸಿದ್ದರಾಮಯ್ಯ ಮರೆತಿದ್ದರೆ ಅದನ್ನು ನೆನಪಿಸುವುದು ಅವರನ್ನು ಭೇಟಿಯಾಗಿಯೋ, ಕರೆಸಿಯೋ ಅಭಿನಂದನೆಗಳನ್ನು ಸಲ್ಲಿಸಿದ, ಸಂವಾದ ನಡೆಸಿದ ಬರಹಗಾರರು, ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಚಿಂತಕರ ಜವಾಬ್ದಾರಿ. ಅಷ್ಟು ಮಾಡಲಾಗದಿದ್ದರೆ ವರ್ತಮಾನ ನಿಮ್ಮನ್ನು ನೋಡುವ ಬಗೆಯೇ ಬೇರೆ ಇರುತ್ತದೆ” ಎಂದು ತಮ್ಮ ಫೇಸ್‌ಬಕ್ ವಾಲ್‌ನಲ್ಲಿ ಬರೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...