ಕೆಂಪುಕೋಟೆ ರಾಷ್ಟ್ರ ಧ್ವಜಾರೋಹಣಕ್ಕೆ ರಾಜ್ಯದ ಆರು ಗ್ರಾಮ ಪಂಚಾಯಿತಿ ಮಹಿಳಾ ಅಧ್ಯಕ್ಷರಿಗೆ ಆಹ್ವಾನ

Date:

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿರುವ ಮಹಿಳಾ ಅಧ್ಯಕ್ಷರನ್ನು ಅಭಿನಂದಿಸಿ, ಮಾಹಿತಿ ಹಂಚಿಕೊಂಡಿರುವ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಗೆದರೆ ಗ್ರಾ.ಪಂ. ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾ.ಪಂ. ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾ.ಪಂ. ಅಧ್ಯಕ್ಷೆ ದೇವಿ ಪಿ ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದ್ದಾರೆ.

“ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...