ಸತ್ತವರ ಹೆಸರಿಗೆ ಡಿನೋಟಿಫೈ ಮಾಡಿದ್ದು ಅಪರಾಧ ಅಲ್ಲವೇ: ಕುಮಾರಸ್ವಾಮಿಗೆ ಕೃಷ್ಣ ಬೈರೇಗೌಡ ಪ್ರಶ್ನೆ

Date:

ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದವರು ಯಾರು ಎಂಬುದನ್ನು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಆಗ್ರಹಿಸಿದರು.

ಬೆಂಗಳೂರು ಗಂಗೇನಹಳ್ಳಿ ಬಡಾವಣೆ ಸರ್ವೇ ನಂಬರ್ 7/1ಬಿ, 7/1 ಸಿ ಮತ್ತು 7/1 ಡಿ ರಲ್ಲಿನ 1 ಎಕರೆ 11 ಗುಂಟೆ ಸರ್ಕಾರಿ ಜಮೀನನ್ನು ಮಾಜಿ ಸಿಎಂಗಳಾದ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಜಂಟಿಯಾಗಿ ಸತ್ತೋದವರ ಹೆಸರಲ್ಲಿ ಡಿನೋಟಿಫೈ ಮಾಡಿ ಕುಮಾರಸ್ವಾಮಿ ಅವರ ಬಾಮೈದನ ಹೆಸರಲ್ಲಿ ನೋಂದಣಿ ಮಾಡಿರುವ ಪ್ರಕರಣ ಈ ದಿನ.ಕಾಮ್‌ ಎಕ್ಸ್‌ಕ್ಲೂಸಿವ್ ವರದಿ ಮಾಡಿತ್ತು. ಇದೇ ಪ್ರಕರಣ ಬಗ್ಗೆ ವಿಕಾಸಸೌಧಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಸಚಿವರು ಮಾಹಿತಿ ನೀಡಿದರು.

“1978ರಲ್ಲಿ ಭೂ ಸ್ವಾಧೀನಗೊಂಡ ಜಮೀನಿಗೆ ಡಿನೋಟಿಫೈ ಮಾಡಲು ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬುವರು 2007ರಲ್ಲಿ ಸಿಎಂ ಕುಮಾರಸ್ವಾಮಿಯವರಿಗೆ ಅರ್ಜಿ ಹಾಕಿದ್ದಾರೆ. ಅಸಲಿಗೆ ರಾಜಶೇಖರಯ್ಯನಿಗೂ ಜಮೀನಿಗೂ ಸಂಬಂಧವೇ ಇಲ್ಲ. ಈತ ಯಾರು ಅಂತ ಈವರೆಗೂ ಗೊತ್ತಿಲ್ಲ. ತನಿಖೆಯಿಂದ ಇದು ಬಹಿರಂಗವಾಗಬೇಕಿದೆ. ಆದರೆ, ಈ ಅರ್ಜಿ ಬಂದ ಕೂಡಲೇ ಕುಮಾರಸ್ವಾಮಿಯವರು ಅದೇ ದಿನ ಅಧಿಕಾರಿಗಳಿಗೆ ಪತ್ರ ಬರೆದು ಈ ಅರ್ಜಿ ಮೇಲೆ ಕ್ರಮ ಕೈಗೊಳ್ಳಲು ಸೂಚಿಸುತ್ತಾರೆ. ಕುಮಾರಸ್ವಾಮಿ ಅವರ ಹಿಂದಿನ ಆಸಕ್ತಿ ಏನು ಎಂಬುದು ಬಯಲಾಗಬೇಕಲ್ವಾ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್ ತನಿಖಾ ವರದಿ | ಸರ್ಕಾರಿ ಸ್ವತ್ತು ಗುಳುಂ ಹಗರಣ; ಒಂದೇ ಎಫ್‌ಐಆರ್‌ನಲ್ಲಿ ಇಬ್ಬರು ‘ಸಿಎಂ’ಗಳು

“ಸತ್ತವರ ಹೆಸರಿಗೆ ಡಿನೋಟಿಫೈ ಮಾಡುವುದು ಅಪರಾಧ ಅಲ್ಲವೇ? ರಾಜಕಾರಣದಲ್ಲಿ ವ್ಯಯಕ್ತಿಕ ದಾಳಿ ನಡೆಸುವುದು ನಿಂದಿಸುವುದು ಕುಮಾರಸ್ವಾಮಿಯವರಿಗೆ ಸಾಮಾನ್ಯ ಸಂಗತಿಯಾಗಿದೆ. ಆದರೆ, ನಮ್ಮದು ಅಂತಹ ಸಂಸ್ಕೃತಿಯಲ್ಲ. ನಾವು ಅಂತಹ ಸಂಸ್ಕೃತಿಗೆ ಎಂದಿಗೂ ಜೋತು ಬೀಳುವುದಿಲ್ಲ. ಅಲ್ಲದೆ, ಇಂತಹ ನಿಂದನೆಗಳು ವ್ಯಯಕ್ತಿಕ ದಾಳಿಗಳಿಗೆ ನಾವು ಬಗ್ಗುವವರೂ ಅಲ್ಲ” ಎಂದು ಸ್ಪಷ್ಟಡಿಸಿದರು.

ಮುಂದುವರೆದು, “ಈಗಲೂ ನಾನು ಅದೇ ಪ್ರಶ್ನೆಯನ್ನು ಮುಂದಿಡುತ್ತೇನೆ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಈ ಜಮೀನಿನ ಡಿನೋಟಿಫೈ ಗೆ ಅತ್ಯುತ್ಸಾಹ ತೋರಿದ್ದು ಏಕೆ? ಇವರ ಅತ್ತೆ ಈ ಭೂಮಿಯನ್ನು ತಮ್ಮ ಹೆಸರಿಗೆ ಜಿಪಿಎ ಮಾಡಿಸಿಕೊಂಡದ್ದು ಸುಳ್ಳೇ? ಅಂತಿಮವಾಗಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಸಹೋದರನ ಹೆಸರಿಗೆ ಈ ಜಮೀನು ನೋಂದಣಿಯಾಗಿಲ್ಲವೇ? ಇದು ಅಧಿಕಾರದ ದುರ್ಬಳಕೆ ಅಲ್ಲವೇ? ಈ ಬಗ್ಗೆ ಕುಮಾರಸ್ವಾಮಿಯವರ ಸ್ಪಷ್ಟನೆ ನೀಡಲಿ ಸಾಕು” ಎಂದು ಸವಾಲು ಹಾಕಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...