ರಾಜ್ಯದಲ್ಲಿರುವುದು ಸಿದ್ದರಾಮಯ್ಯ ಸರ್ಕಾರವೋ ಅಥವಾ ದಿಲ್ಲಿ ಜನಪಥದ ಸರ್ಕಾರವೋ: ಎಚ್‌ಡಿಕೆ ‌

Date:

  • ರಾಜ್ಯ ಸರ್ಕಾರವನ್ನು ಲೇವಡಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ
  • ಖಾಸಗಿ ಹೋಟೆಲ್‌ನಲ್ಲಿ ಸುರ್ಜೇವಾಲ ಸಭೆ ಉಲ್ಲೇಖಿಸಿ ಟ್ವೀಟ್

ರಾಜ್ಯದಲ್ಲಿ ನಡೆಯುತ್ತಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೋ ಅಥವಾ ದೆಹಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರ್ಕಾರವೋ? ಮೊದಲು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಡಿಸಿಎಂಸಹಿತ ಅಧಿಕಾರಿಗಳ ಸಭೆ ನಡೆಸುತ್ತಿರುವ ಫೋಟೋ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

“ರಾಜ್ಯದಲ್ಲಿ ನಡೆಯುತ್ತಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೋ ಅಥವಾ ದೆಹಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರ್ಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ? ಅಥವಾ ಕೈಗೊಂಬೆ ಸರ್ಕಾರಕ್ಕಾ?” ಎಂದಿರುವ ಅವರು, “ಪಾಪ.. ಜನರ ವೋಟು ಹಂಗಿನ ಸರ್ಕಾರದ ಪಾಲಾಗಿದೆ. ಸರ್ಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ” ಎಂದು ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ರಂದೀಪ್ ಸುರ್ಜೆವಾಲ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು?” ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಹೂಡಿಕೆ ಮಾಡುವುದಾದರೆ ರಾಜ್ಯದಲ್ಲಿ ಅಂಬಾನಿ-ಅದಾನಿಗಳಿಗೂ ಅವಕಾಶ: ಎಂ ಬಿ ಪಾಟೀಲ್

“ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು” ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...