ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ?

Date:

ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಸೂಚಿಸಿದ ವಿಶೇಷ ನ್ಯಾಯಾಲಯದ ಆದೇಶ ಕಾನೂನುಬಾಹಿರವೇ? ಜಾರಿ ಮಾಡಲು ಸಾಧ್ಯವಿಲ್ಲದ ಆದೇಶದಿಂದ ಸಿದ್ದರಾಮಯ್ಯನವರಿಗೆ ಅನುಕೂಲವಾಗಲಿದೆಯೇ?  
ಇಲ್ಲಿದೆ ಈ ದಿನ ಸ್ಫೋಟಕ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಲೋಕಾಯುಕ್ತ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಸೆ.25) ನೀಡಿರುವ ಆದೇಶವನ್ನು ಜಾರಿ ಮಾಡುವುದು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಏಕೆಂದರೆ ಅಸ್ತಿತ್ವದಲ್ಲೇ ಇಲ್ಲದ ಹಿಂದಿನ ಸಿಆರ್‌ಪಿಸಿ (ಅಪರಾಧ ದಂಡ ಪ್ರಕ್ರಿಯಾ ಸಂಹಿತೆ) ಅಡಿಯಲ್ಲಿ ನ್ಯಾಯಾಧೀಶರು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದಾರೆ. ನ್ಯಾಯಾಧೀಶರ ಈ ಆದೇಶ ಅಚ್ಚರಿದಾಯಕವಾಗಿದೆ. ಏಕೆಂದರೆ, ಆದೇಶ ಈ ರೀತಿ ಇರುವುದರಿಂದ ತನಿಖೆ ಆರಂಭಿಸಲು ಲೋಕಾಯುಕ್ತ ಪೊಲೀಸರಿಗೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಎದುರಾಗಿದೆ. ಹಾಗಾಗಿ ಆದೇಶದಲ್ಲಿರುವ ಈ ಲೋಪವೇ ಸಿದ್ದರಾಮಯ್ಯನವರ ವಿರುದ್ಧದ ತನಿಖೆ ಆಗದಂತೆ ತಡೆದಂತಾಗುತ್ತದೆ.

ರಾಜ್ಯ ಹೈಕೋರ್ಟಿನ ಪೀಠವು ಸಿದ್ದರಾಮಯ್ಯನವರ ಮೇಲೆ ತನಿಖೆ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಯ ಕ್ರಮಬದ್ಧತೆಯನ್ನು ಎತ್ತಿ ಹಿಡಿದು ಸೆ.24ರಂದು ತೀರ್ಪು ನೀಡಿತ್ತು. ಅದರ ಮರುದಿನವೇ, ಅಂದರೆ ಸೆ.25ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಮೈಸೂರು ಎಸ್‌ಪಿಯವರು ಸಿಆರ್‌ಪಿಸಿಯ 156 (3)ರ ಅಡಿಯಲ್ಲಿ ಈ ಸಂಬಂಧ ತನಿಖೆ ನಡೆಸಬೇಕೆಂದು ಆದೇಶ ಮಾಡಿತ್ತು. ಅಲ್ಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ತನಿಖೆಗೆ ಹಾದಿ ಸುಗಮವಾಯಿತೆಂದು ಬಿಜೆಪಿ ವಲಯಗಳಿಂದ ಪ್ರತಿಭಟನೆ ಇತ್ಯಾದಿಗಳು ನಡೆಯುತ್ತಿವೆ. ಆದರೆ, ಜೂನ್‌ 30ರಂದೇ ಕೊನೆಗೊಂಡ ಸಿಆರ್‌ಪಿಸಿಯಡಿ ಎಫ್‌ಐಆರ್‌ ಹೇಗೆ ಹಾಕುವುದು, ತನಿಖೆ ಹೇಗೆ ಆರಂಭಿಸಲು ಸಾಧ್ಯ ಎಂಬ ಪ್ರಶ್ನೆ ಇದೆ.

ಇದನ್ನು ಓದಿದ್ದೀರಾ?: ಮುಡಾ ಪ್ರಕರಣ | ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ಈ ಆದೇಶವನ್ನು ಸದರಿ ನ್ಯಾಯಾಲಯವು ಹೊರಡಿಸಿತ್ತು. ಒಂದು ವೇಳೆ ಹಳೆಯ ಸಿಆರ್‌ಪಿಸಿಯ 156(3)ರ ಬದಲಾಗಿ, ಇಂತಹ ಆದೇಶವನ್ನು ಹೊರಡಿಸುವ ಬದಲಿಗೆ ಭಾರತೀಯ ನ್ಯಾಯ ಸಂಹಿತೆಯ 175(4)(ಎ)(ಬಿ)ಯಡಿ ಇದನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಅದನ್ನು ನ್ಯಾಯಾಧೀಶರು ಏಕೆ ಕೈಗೊಂಡಿಲ್ಲ ಎಂಬ ಕುರಿತು, ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅನುಕೂಲವಲ್ಲವೇ ಎಂಬ ಜಿಜ್ಞಾಸೆಗೆ ಕಾನೂನು ಪಂಡಿತರು ಉತ್ತರಿಸಬೇಕಾಗುತ್ತದೆ.

ಈ ಸಂಬಂಧ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸುವ ಪ್ರಯತ್ನವನ್ನು ಈದಿನ.ಕಾಮ್‌ ಮಾಡಿತು. ಆದರೆ, ಅವರು ಉತ್ತರಿಸಲು ನಿರಾಕರಿಸಿದರು.

ಕಾನೂನು ತಜ್ಞರ ಅಭಿಪ್ರಾಯಗಳ ಜೊತೆಗೆ ವಿಶೇಷ ವರದಿಯನ್ನು ನಿರೀಕ್ಷಿಸಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...