ಕೋಟಿ ಲೆಕ್ಕದಲ್ಲಿ ಉದ್ಯೋಗ ಭರವಸೆ ನೀಡಿ, ಲಕ್ಷದಲ್ಲಿ ಸಾಧನೆ ಹೇಳುವುದು ತಮಾಷೆ ಅಲ್ಲವೇ ಮೋದಿ?: ಸಿದ್ದರಾಮಯ್ಯ

Date:

2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ, ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?” ಎಂದು ಕೇಳಿದ್ದಾರೆ.

“ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “2014-15 ಮತ್ತು 2021 -22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ?” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿಯವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ?” ಎಂದು ತಿರುಗೇಟು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

“2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ! ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆ ಎಲ್ಲಿದೆ ರೋಜಗಾರ್ ಮೇಳ” ಎಂದು ಪ್ರಶ್ನಿಸಿದ್ದಾರೆ.

“ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಈ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಾಗೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್ ಗಳಿಗೆ ತಲಾ 60 – 80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು. 2018 ರಿಂದ 2019ರ ವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020 ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ. ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎಂಬುದು ಗಮನಿಸಬೇಕಾದ ಅಂಶ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...