ಮುಂದಿನ ಸೂಚನೆ ತನಕ ಗಾಝಾಕ್ಕೆ ಬರಬೇಡಿ: ಹೆಲಿಕಾಪ್ಟರ್ ಮೂಲಕ ಸಾವಿರಾರು ಕರಪತ್ರ ಎಸೆದ ಇಸ್ರೇಲ್

Date:

ಹಮಾಸ್ ದಾಳಿಯ ಬೆನ್ನಲ್ಲೇ ಗಾಝಾ ಮೇಲಿನ ದಾಳಿಯನ್ನು ಇಸ್ರೇಲ್ ಮುಂದುವರಿಸಿದ್ದು ಸುಮಾರು 11 ಲಕ್ಷ ಜನಸಂಖ್ಯೆಯಿರುವ ಉತ್ತರ ಗಾಝಾದ ಜನರನ್ನು 24 ಗಂಟೆಗಳೊಳಗೆ ತೆರಳುವಂತೆ ಆದೇಶಿಸಿದೆ.

ಈ ನಡುವೆ ಹೆಲಿಕಾಪ್ಟರ್ ಮೂಲಕ ಸಾವಿರಾರು ಕರಪತ್ರಗಳನ್ನು ಎಸೆದಿರುವ ಇಸ್ರೇಲ್, ‘ಮುಂದಿನ ಸೂಚನೆ ತನಕ ಗಾಝಾಕ್ಕೆ ಬರಬೇಡಿ’ ಎಂದು ತಿಳಿಸಿದೆ.

ಆಕಾಶದಿಂದ ಸಾವಿರಾರು ಕರಪತ್ರಗಳನ್ನು ಕರಪತ್ರಗಳನ್ನು ಗಾಜಾಕ್ಕೆ ಬಿಡಲಾಗಿದ್ದು, ಪತ್ರದಲ್ಲಿ, ‘ಇಸ್ರೇಲ್ ರಕ್ಷಣಾ ಪಡೆಗಳಿಂದ ಮುಂದಿನ ಸೂಚನೆ ಬರುವವರೆಗೆ ನಿಮ್ಮ ಮನೆಗಳಿಗೆ ಹಿಂದಿರುಗಬೇಡಿ. ಗಾಝಾ ನಗರದಲ್ಲಿ ನಿಮಗೆ ತಿಳಿದಿರುವ ಎಲ್ಲ ಸಾರ್ವಜನಿಕ ಆಶ್ರಯಗಳನ್ನು ತೊರೆದು ಬಿಡಿ. ಭದ್ರತಾ ಗೋಡೆಗಳ ಹತ್ತಿರ ಸಮೀಪಿಸಬೇಡಿ. ಒಂದು ವೇಳೆ ಭದ್ರತಾ ಗೋಡೆಗಳ ಹತ್ತಿರ ತೆರಳುವವರು ತಮ್ಮ ಪ್ರಾಣವನ್ನು ಅಪಾಯಕ್ಕೆ ತಂದುಕೊಳ್ಳುತ್ತಾರೆ’ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್‌ನ ಮಿಲಿಟರಿ ಈ ಸೂಚನೆ ನೀಡಿದ್ದು ಗಾಝಾ ಮೇಲಿನ ದಾಳಿಯನ್ನು ಇನ್ನಷ್ಟು ತೀವ್ರಗೊಳಿಸುವ ಸುಳಿವು ನೀಡಿದೆ. ಗಾಝಾ ಪಟ್ಟಿಯ ಸುಮಾರು ಅರ್ಧದಷ್ಟು ಜನಸಂಖ್ಯೆ ಉತ್ತರ ಭಾಗದಲ್ಲಿದೆ. ದಕ್ಷಿಣಕ್ಕೆ ತೆರಳುವಂತೆ ಸೂಚನೆ ನೀಡಿದೆ.

ಹಮಾಸ್ ಸುಮಾರು 150 ಇಸ್ರೇಲಿಗರನ್ನು ಒತ್ತೆಯಾಳಾಗಿ ಇರಿಸಿರುವುದರಿಂದ ಅವರನ್ನು ಬಿಡುಗಡೆಗೊಳಿಸುವ ತನಕ ತನ್ನ ದಾಳಿ ನಿಲ್ಲುವುದಿಲ್ಲ ಎಂದು ಇಸ್ರೇಲ್ ಹೇಳಿದೆ.

2311

ಉತ್ತರ ಗಾಝಾದಿಂದ ತೆರಳುವಂತೆ ಜನರಿಗೆ ಇಸ್ರೇಲ್ ನೀಡಿದ ಸೂಚನೆ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಸಂಸ್ಥೆಯ ವಕ್ತಾರೆ ಸ್ಟೆಫಾನಿ ದುಜರ್ರಿಕ್, ಇಸ್ರೇಲ್‌ನ ಈ ಆದೇಶ ಜಾರಿಗೊಳಿಸುವುದು ಅಸಾಧ್ಯ ಎಂದಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ನಡೆಸಿದ ದಾಳಿಗೆ ಪ್ರತೀಕಾರವಾಗಿ ಹಮಾಸ್ ಅನ್ನು ನಾಶಗೈಯ್ಯುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈಗಾಗಲೇ ಘೋಷಿಸಿದ್ದಾರೆ. ಆದರೆ ಇಸ್ರೇಲ್ ದಾಳಿಯಿಂದಾಗಿ ಗಾಝಾ ಪಟ್ಟಿಯಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು ಸಾವಿನ ಸಂಖ್ಯೆ 1500 ದಾಟಿದೆ ಹಾಗೂ ಅಗತ್ಯ ಸಾಮಗ್ರಿಗಳ ದಾಸ್ತಾನು ಮುಗಿಯುತ್ತಿದೆ. ಈ ನಡುವೆಯೇ ಈ ರೀತಿಯ ಘೋಷಣೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...